May 13, 2024

Bhavana Tv

Its Your Channel

ರಾಗಿ ಖರೀದಿ ಕೇಂದ್ರಕ್ಕೆ ಸಚಿವ ಡಾ.ನಾರಾಯಣ ಗೌಡ ಚಾಲನೆ

ಕೆ.ಆರ್.ಪೇಟೆ ತಾಲೂಕಿನ ಎಪಿಎಂಸಿ ಆವರಣದಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಸ್ಥಳೀಯ ಶಾಸಕರೂ ಆದ ರಾಜ್ಯದ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಚಾಲನೆ ನೀಡಿದರು.

ರಾಗಿ ಖರೀದಿಗೆ ರಿಜಿಸ್ಟ್ರೇಷನ್ ಮುಗಿದಿದ್ದು, ಇನ್ನೂ ಹಲವು ರೈತರು ನೋಂದಣಿ ಮಾಡಿಸಿಲ್ಲ. ಇದರಿಂದ ನಮಗೆ ರಾಗಿ ಮಾರಾಟ ಮಾಡಲು ಸಮಸ್ಯೆ ಆಗುತ್ತೆ ಎಂದು ಸಚಿವರ ಗಮನಕ್ಕೆ ತಂದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಡಾ.ನಾರಾಯಣಗೌಡ ಅವರು, ಆಹಾರ ಮಂತ್ರಿಗಳಾದ ಉಮೇಶ್ ಖತ್ತಿ ಅವರ ಗಮನಕ್ಕೆ ತಂದಿದ್ದೇವೆ. ಮುಖ್ಯಮಂತ್ರಿಗಳಿಗೂ ಈ ಸಮಸ್ಯೆಯ ಬಗ್ಗೆ ಗಮನ ಸೆಳೆದಿದ್ದೇವೆ. ಶೀಘ್ರದಲ್ಲೇ ಇದಕ್ಕೊಂದು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಹಗಲು ರಾತ್ರಿ ಕಷ್ಟಪಟ್ಟು ಬೆಳೆದ ರೈತರಿಗೆ ಅನ್ಯಾಯ ಆಗಬಾರದು. ದಲ್ಲಾಳಿಗಳ ಪಾಲಾಗದಂತೆ ರೈತರಿಗೆ ಸೂಕ್ತ ನ್ಯಾಯ ಸಿಗಬೇಕೆಂಬ ನಿಟ್ಟಿನಲ್ಲಿ ರಾಗಿ ಖರೀದಿ ಕೇಂದ್ರ ಆರಂಭಿಸಲಾಗಿದೆ ಎಂದು ತಿಳಿಸಿದ ಸಚಿವರು ಎಪಿಎಂಸಿ ಆವರಣದಲ್ಲಿ ಕೋಲ್ಡ್ ಸ್ಟೋರೇಜ್ ನಿರ್ಮಾಣಕ್ಕೆ ಐದು ಕೋಟಿರೂ ವಿಶೇಷ ಅನುದಾನ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದು ಸಚಿವ ನಾರಾಯಣಗೌಡ ಅವರು ತಿಳಿಸಿದರು.

ರೈತರಿಂದ ಖರೀದಿಸುವ ಪ್ರತಿ ಕ್ವಿಂಟಲ್ ರಾಗಿಗೆ 3377 ರೂ. ನಿಗದಿಪಡಿಸಲಾಗಿದ್ದು, ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಲ್‌ನAತೆ ಗರಿಷ್ಠ 20 ಕ್ವಿಂಟಲ್ ರಾಗಿ ಖರೀದಿಗೆ ಅವಕಾಶ ಕಲ್ಪಿಸಿದೆ. ಆದ್ದರಿಂದ ರೈತಬಾಂಧವರು ದಳ್ಳಾಳಿಗಳನ್ನು ದೂರವಿಟ್ಟು ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧಿಕಾರಿಗಳೊಂದಿಗೆ ನೇರವಾಗಿ ವ್ಯವಹಾರ ನಡೆಸಿ ಅನುಕೂಲ ಪಡೆದುಕೊಳ್ಳಬೇಕು ಎಂದು ಸಚಿವ ನಾರಾಯಣಗೌಡ ಮನವಿ ಮಾಡಿದರು…

ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಪ್ರಧಾನ ವ್ಯವಸ್ಥಾಪಕ ಪಿಳ್ಳೇಗೌಡ, ನಿರ್ದೇಶಕರಾದ ನಾಗಮಂಗಲ ರಾಜೇಗೌಡ, ಜಿಲ್ಲಾ ಪಂಚಾಯತಿ ಮಾಜಿಉಪಾಧ್ಯಕ್ಷ ಶೀಳನೆರೆ ಅಂಬರೀಶ್, ಎಪಿಎಂಸಿ ಆಡಳಿತಾಧಿಕಾರಿ ತಹಶೀಲ್ದಾರ್ ಎಂ.ವಿ.ರೂಪ, ಕಾರ್ಯದರ್ಶಿ ರಫೀಕ್ ಅಹಮದ್, ಮುಖಂಡರಾದ ಅರುಣ್ ಕುಮಾರ್, ಮಹೇಶ್ವರಿನರಸೇಗೌಡ, ಆಹಾರ ನಾಗರಿಕ ಸರಬರಾಜು ಇಲಾಖೆಯ ಶಿರಸ್ತೇದಾರ್ ಪೂರ್ಣಿಮಾ, ಸಹಕಾರ ಮಾರಾಟ ಮಹಾಮಂಡಳದ ಅಧಿಕಾರಿ ದಿಲೀಪ್ ಕುಮಾರ್, ಉಪಕಾರ್ಯದರ್ಶಿ ಸತೀಶ್, ಮುಖಂಡರಾದ ಭಾರತಿಪುರ ಪುಟ್ಟಣ್ಣ, ಪುರಸಭೆ ಸದಸ್ಯ ಕೆ.ಆರ್.ನೀಲಕಂಠ ಮತ್ತಿತರರು ರಾಗಿ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು…

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ .

error: