May 3, 2024

Bhavana Tv

Its Your Channel

ಸಂತೇಬಾಚಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಅಶ್ವಥಿ ಭೇಟಿ..

ಕೃಷ್ಣರಾಜಪೇಟೆ ತಾಲ್ಲೂಕಿನ ಸಂತೇಬಾಚಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಶಾಲಾ ಜಾಗದಲ್ಲಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡುತ್ತಿರುವ ಸ್ಥಳವನ್ನು ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿ ಅವರು ಗ್ರಾಮಸ್ಥರೊಂದಿಗೆ ಪರಿಶೀಲನೆ ನಡೆಸಿ ಮಾಹಿತಿ ಪಡೆದರು …

ಸಂತೆಬಾಚಹಳ್ಳಿ ಗ್ರಾಮದಲ್ಲಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಬೇಕೆಂಬ ಜಾಗವು ವಾಸ್ತವವಾಗಿ ಶಿಕ್ಷಣ ಇಲಾಖೆಗೆ ಸೇರಿದ್ದರೂ ಆ ಜಾಗದಲ್ಲಿ ಯಾವುದೇ ಶೈಕ್ಷಣಿಕ ಚಟುವಟಿಕೆಗಳು ನಡೆಯದೇ ಶಾಲಾ ಕಟ್ಟಡವು ಸಂಪೂರ್ಣವಾಗಿ ಶಿಥಿಲವಾಗಿದ್ದು ಕುಸಿದು ಬೀಳುವ ಹಂತದಲ್ಲಿದೆ. ಈ ಜಾಗದಲ್ಲಿ ಖಾಲಿ ಉಳಿದಿರುವ 31 ಗುಂಟೆ ಜಾಗವನ್ನು ಬಸ್ ನಿಲ್ದಾಣದ ನಿರ್ಮಾಣಕ್ಕೆ ಶಿಕ್ಷಣ ಇಲಾಖೆಯಿಂದ ರಾಜ್ಯ ರಸ್ತೆಸಾರಿಗೆ ಸಂಸ್ಥೆಗೆ ಹಸ್ತಾಂತರ ಮಾಡಲು ಕ್ರಮಕೈಗೊಂಡರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂಬ ವಿಚಾರವನ್ನು ಸಾರ್ವಜನಿಕರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು…

ಪ್ರಸ್ತುತ ಶಾಲೆಗೆ ಎರಡೂವರೆ ಎಕರೆ ವಿಶಾಲವಾದ ಜಾಗವಿದ್ದು ಆ ಜಾಗದಲ್ಲಿ ಶಾಲೆ ಹಾಗೂ ಆಟದ ಮೈದಾನವಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿದೆ. ಆದ್ದರಿಂದ ಶಾಲೆಗೆ ಸೇರಿರುವ ಜಾಗದಲ್ಲಿ 31 ಗುಂಟೆ ಜಾಗವನ್ನು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬಸ್ ನಿಲ್ದಾಣ ನಿರ್ಮಿಸಲು ಶಾಲಾಭಿವೃದ್ಧಿ ಸಮಿತಿಯು ಒಪ್ಪಿಗೆ ನೀಡಿದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಮೋಹನ್ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು..

ಜಿಲ್ಲಾಧಿಕಾರಿ ಅಶ್ವಥಿ ಅವರು ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿ ಸಧ್ಯ ಶಾಲೆಯ ಶೈಕ್ಷಣಿಕ ಚಟುವಟಿಕೆಗಳು ನಡೆಯದ ಹಿನ್ನೆಲೆಯಲ್ಲಿ ಖಾಲಿಯಿದ್ದು ವ್ಯರ್ಥವಾಗಿ ಉಳಿದಿರುವ ಜಾಗವನ್ನು ಬಸ್ ನಿಲ್ದಾಣ ನಿರ್ಮಿಸಲು ಅಗತ್ಯ ಕ್ರಮ ಕೈಗೊಂಡು ಹಸ್ತಾಂತರ ಮಾಡುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿ ಅಶ್ವಥಿ ತಿಳಿಸಿದರು..

ಈ ಸಂದರ್ಭದಲ್ಲಿ ತಹಶೀಲ್ದಾರ್ ಎಂ.ವಿ.ರೂಪ, ಬಿಇಓ ಬಸವರಾಜು, ತಾಲ್ಲೂಕು ಬಿಸಿಎಂ ಅಧಿಕಾರಿ ವೆಂಕಟೇಶ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಮಹೇಶ್, ಸಂತೇಬಾಚಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಮೋಹನ್, ಟಿಎಪಿಸಿಎಂಎಸ್ ಮಾಜಿಅಧ್ಯಕ್ಷ ಕೊಡಗಹಳ್ಳಿ ಜಯರಾಮೇಗೌಡ, ಮುಖಂಡರಾದ ಮರೀಗೌಡ, ಮಾಳಗೂರು ಚಂದ್ರಶೇಖರ್, ಕುಮಾರಸ್ವಾಮಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಂಗಸ್ವಾಮಿ, ಶರಥ್, ಗಿರೀಶ್, ಮುಖ್ಯ ಶಿಕ್ಷಕಿ ಮಂಜುಳಾ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: