April 29, 2024

Bhavana Tv

Its Your Channel

ಕೆ.ಆರ್.ಪೇಟೆಯಲ್ಲಿ ಬೃಹತ್ ಉದ್ಯೋಗ ಮೇಳ ಯಶಸ್ವಿ- 5 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ದೊರಕಿಸಿದ ಸಾರ್ಥಕ ಭಾವ: ಸಚಿವ ಡಾ.ನಾರಾಯಣಗೌಡ

ಕೆ.ಆರ್.ಪೇಟೆ ಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ.ನಾರಾಯಣಗೌಡ ಅವರ ನೇತೃತ್ವದಲ್ಲಿ ಕೆ.ಆರ್. ಪೇಟೆಯಲ್ಲಿ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳಕ್ಕೆ ಉನ್ನತ, ಐಟಿಬಿಟಿ, ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿಎನ್ ಅಶ್ವಥ್ ನಾರಾಯಣ್ ಹಾಗೂ ಮಂಡ್ಯ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯನವರು ಚಾಲನೆ ನೀಡಿದರು.

ಕೆ.ಆರ್.ಪೇಟೆ ಸರ್ಕಾರಿ ಎಂಜಿನಿಯರಿAಗ್ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಉದ್ಯೋಗ ವಿನಿಮಯ ಕಚೇರಿ, ಮಂಡ್ಯ ಹಾಗೂ ಕೆಆರ್ ಪೇಟೆ ಸರ್ಕಾರಿ ಎಂಜಿನಿಯರಿAಗ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿತ್ತು.

ಟೊಯೋಟಾ, ಹೋಂಡಾ, ಅಪೋಲೋ ಅಜೀಂ ಪ್ರೇಮ್ ಜೀ ಪೌಂಡೇಷನ್, ಆನಂದ ಗ್ರೂಪ್ ಸೇರಿದಂತೆ ಸುಮಾರು 80 ವಿವಿಧ ಪ್ರತಿಷ್ಠಿತ ಕಂಪನಿಗಳು ಈ ಬೃಹತ್ ಉದ್ಯೋಗ ಮೇಳಕ್ಕೆ ಆಗಮಿಸಿದ್ದವು.

ಸಚಿವ ಡಾ.ನಾರಾಯಣಗೌಡ ಜನೋಪಕಾರಿ ದಕ್ಷತೆಯ ಕಾರ್ಯಕ್ರಮಗಳಿಗೆ ಸಚಿವ ಗೋಪಾಲಯ್ಯ ಮೆಚ್ಚುಗೆ

ಆರೋಗ್ಯ ಶಿಬಿರ, ಉದ್ಯೋಗ ಮೇಳ ಸೇರಿದಂತೆ ಹತ್ತಾರು ಕಾರ್ಯಕ್ರಮಗಳ ಆಯೋಜಿಸುವ ಮೂಲಕ ಸಚಿವ ಡಾ.ನಾರಾಯಣಗೌಡ ಅವರು ತಮ್ಮ ದಕ್ಷತೆ ತೋರಿಸುತ್ತಿದ್ದಾರೆ. ಆರೋಗ್ಯ ಸೇವೆ, ಉದ್ಯೋಗ ಕೊಡಿಸುವುದು ಪುಣ್ಯದ ಕೆಲಸ. ಅಂತಹ ಕೆಲಸವನ್ನು ಸಚಿವ ನಾರಾಯಣಗೌಡರು ಉತ್ತಮವಾಗಿ ಮಾಡುತ್ತಿದ್ದಾರೆ. ಇವತ್ತು ನೂರಾರು ಕಂಪನಿಗಳು ಆಗಮಿಸಿದ್ದು, ಸಾವಿರಾರು ಉದ್ಯೋಗಗಳನ್ನು ಕೊಡಿಸಲು ನಾರಾಯಣಗೌಡರು ವ್ಯವಸ್ಥೆ ಮಾಡಿದ್ದಾರೆ. ಈ ಉದ್ಯೋಗ ಮೇಳ ಯಶಸ್ವಿಯಾಗಲಿ, ಸಾವಿರಾರು ಜನರಿಗೆ ಉದ್ಯೋಗ ಸಿಗಲಿ ಎಂದು ಹಾರೈಸುತ್ತೇನೆ ಅಂತಾ ಸಚಿವ ಗೋಪಾಲಯ್ಯನವರು ಹೇಳಿದರು.

ಸಚಿವ ನಾರಾಯಣಗೌಡರಿಂದ ಹಲವು ಸ್ಪೂರ್ತಿದಾಯಕ ಕೆಲಸ:ಡಾ.ಸಿಎನ್ ಅಶ್ವಥ್ ನಾರಾಯಣ್ ಶ್ಲಾಘನೆ ..

ಸಚಿವ ಡಾ.ನಾರಾಯಣಗೌಡ ಅವರು ಒಂದಾದ ಮೇಲೆ ಒಂದು ಜನಪರ ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ. ಇದು ನಮ್ಮೆಲ್ಲರಿಗೂ ಪ್ರೇರಣೆ, ಸ್ಫೂರ್ತಿ ಸಿಗುವ ಕೆಲಸ. ಇವತ್ತು ಸುಮಾರು 12 ಸಾವಿರ ಜನರು ಬಂದಿದ್ದಾರೆ. ಇದೊಂದು ರೆಕಾರ್ಡ್ ಬ್ರೇಕಿಂಗ್ ಕಾರ್ಯಕ್ರಮ ಎಂದು ಸಚಿವ ಡಾ.ಸಿಎನ್ ಅಶ್ವಥ್ ನಾರಾಯಣ್ ಅವರು ಹೇಳಿದರು. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಲಕ್ಷಾಂತರ ಉದ್ಯೋಗಳಿವೆ. ಮಕ್ಕಳು ತಮ್ಮ ಭವಿಷ್ಯವನ್ನು ಉತ್ತಮ ರೂಪಿಸಿಕೊಳ್ಳಬೇಕು. ಮಕ್ಕಳು ಕಲಿಯೋದಕ್ಕೆ ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ನೀಡುತ್ತಿದ್ದೇವೆ. ಉತ್ತಮ ಉದ್ಯೋಗಾವಕಾಶ ಪಡೆಯಲು ಅಗತ್ಯವಿರುವ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ಈ ವರ್ಷ ಎರಡೂವರೆ ಲಕ್ಷ ಜನರಿಗೆ ಕೌಶಲ್ಯ ತರಬೇತಿ ನೀಡುವ ಗುರಿ ಹೊಂದಲಾಗಿದೆ ಎಂದು ಸಚಿವ ಡಾ.ಸಿ ಎನ್ ಅಶ್ವಥ್ ನಾರಾಯಣ್ ಹೇಳಿದರು. ಇದೆ ವೇಳೆ ಕೆಆರ್ ಪೇಟೆಯ ಸರ್ಕಾರಿ ಎಂಜಿನಿಯರಿAಗ್ ಕಾಲೇಜ್ ಉನ್ನತ್ತಿಕರಿಸಲು ಇದೇ ವರ್ಷ ಕ್ರಮವಹಿಸಲಾಗಿದೆ ಎಂದು ಹೇಳಿದರು. ಕೆಆರ್ ಪೇಟೆಯ ಸಮಗ್ರ ಅಭಿವೃದ್ಧಿಗೆ ನಾರಾಯಣಗೌಡರ ಸಹೋದರನಾಗಿ ಅವರ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುತ್ತೇನೆ ಎಂದು ಸಚಿವ ಅಶ್ವಥ್ ನಾರಾಯಣ್ ಅವರು ಭರವಸೆ ನೀಡಿದರು.

ಪ್ರತಿಯೊಬ್ಬರಿಗೂ ಕೆಲಸ ಕೊಡಿಸಬೇಕು ಅನ್ನೋದು ನನ್ನ ಜೀವನದ ಕನಸು: ಸಚಿವ ಡಾ.ನಾರಾಯಣಗೌಡ

ಮಂಡ್ಯ ಜಿಲ್ಲೆಯನ್ನು ಉತ್ತಮ ಸ್ಥಾನಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಕನಸನ್ನ ಹೊಂದಲಾಗಿದೆ. ಕೆಆರ್ ಪೇಟೆ ಹಿಂದುಳಿದ ತಾಲೂಕು ಆಗಿತ್ತು. ಇದನ್ನ ಅಭಿವೃದ್ಧಿಗೊಳಿಸಲು ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತಾಲೂಕಿನ ಯುವ ಜನತೆಗೆ ಉದ್ಯೋಗ ನೀಡಬೇಕು ಎಂಬ ಕನಸಿನೊಂದಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಲ್ಲರಿಗೂ ಕೆಲಸ ಕೊಡಬೇಕು. ಇವತ್ತು ಮಾತ್ರ ಉದ್ಯೋಗ ಮೇಳ ಅಲ್ಲ. ಮುಂದಿನ ದಿನಗಳಲ್ಲೂ ಉದ್ಯೋಗ ಮೇಳ ಆಯೋಜಿಸುವ ಮೂಲಕ ಎಲ್ಲರಿಗೂ ಕೆಲಸ ಕೊಡಿಸಲಾಗುತ್ತದೆ. ಸಚಿವ ಅಶ್ವಥ್ ನಾರಾಯಣ್ ಹಾಗೂ ಗೋಪಾಲಯ್ಯನವರ ಸಹಕಾರದೊಂದಿಗೆ ಕೆಆರ್ ಪೇಟೆಯನ್ನು ಉತ್ತಮ ಸ್ಥಾನಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ಮಂಡ್ಯ ಜಿಲ್ಲಾಧಿಕಾರಿ ಎಸ್ ಅಶ್ವಥಿ, ಜಿಲ್ಲಾ ಪಂಚಾಯತಿ ಸಿಇಒ ದಿವ್ಯಪ್ರಭು, ಎಸ್‌ಪಿ ಯತೀಶ್, ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ತಹಶೀಲ್ದಾರ್ ಎಂ.ವಿ.ರೂಪ, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮೇಶ್, ಮೂಡಾ ಮಾಜಿಅಧ್ಯಕ್ಷ ಶ್ರೀನಿವಾಸ್, ಜಿ.ಪಂ ಮಾಜಿ ಉಪಾಧ್ಯಕ್ಷರಾದ ಕಿಕ್ಕೇರಿ ಪ್ರಭಾಕರ್, ಶೀಳನೆರೆ ಅಂಬರೀಶ್, ಬೇಲದಕೆರೆ ಪಾಪೇಗೌಡ, ಚಂದಗಾಲು ಶಿವಣ್ಣ, ಬಿಜೆಪಿ ಮುಖಂಡರಾದ ಡಾ.ಸಿದ್ಧರಾಮಯ್ಯ, ನಾಗಣ್ಣಗೌಡ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಪಾಪಣ್ಣ, ಪುರಸಭೆ ಅಧ್ಯಕ್ಷೆ ಮಹಾದೇವಿನಂಜುAಡ, ಉಪಾಧ್ಯಕ್ಷೆ ಗಾಯತ್ರಿ, ಕನ್ನಡವೇ ಸತ್ಯ ರಂಗಣ್ಣ, ದಿವ್ಯ ಆಲೂರು ಸೇರಿದಂತೆ ಹಲವು ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು .
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: