May 5, 2024

Bhavana Tv

Its Your Channel

ಕರ್ನಾಟಕ ರಾಜ್ಯ ಸಹಾಯ ಹಸ್ತ ಅಸಂಘಟಿತ ಕಟ್ಟಡ ಕಾರ್ಮಿಕರ ಮಹಾಸಂಘದ ತಾಲೂಕು ಶಾಖೆ ಉದ್ಘಾಟನೆ

ಕೆ.ಆರ್.ಪೇಟೆ :-ಅಸಂಘಟಿತ ಕಟ್ಟಡ ಕಾರ್ಮಿಕರು ಸಂಘಟಿತರಾಗಿ ತಮಗೆ ಸಂವಿಧಾನಬದ್ಶವಾಗಿ ದೊರೆಯಬೇಕಾದ ಸೌಲಭ್ಯಗಳನ್ನು ಪಡೆದುಕೊಂಡು ಅಭಿವೃದ್ಧಿಯ ಪಥದತ್ತ ಸಾಗಬೇಕು ಎಂದು ತಾಲ್ಲೂಕು ಕಾರ್ಮಿಕ ನಿರೀಕ್ಷಕಿ ಕಲ್ಪನಾ ಮನವಿ ಮಾಡಿದರು ..

ಅವರು ಇಂದು ಕೆ.ಆರ್.ಪೇಟೆ ಪಟ್ಟಣದ ರಾಮದಾಸ್ ಹೋಟೆಲ್ ನ ಸುಲೋಚನಮ್ಮ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಸಹಾಯ ಹಸ್ತ ಅಸಂಘಟಿತ ಕಟ್ಟಡ ಕಾರ್ಮಿಕರ ಮಹಾಸಂಘದ ತಾಲ್ಲೂಕು ಶಾಖೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು..

ಇಂದು ಕಟ್ಟಡ ವಿಭಾಗ ಸೇರಿದಂತೆ ಸಮಾಜದ 11 ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಮೊದಲು ಕಾರ್ಮಿಕ ಇಲಾಖೆಯಲ್ಲಿ ತಾವು ಮಾಡುತ್ತಿರುವ ಕಸುಬಿನ ಸಮೇತ ತಮ್ಮ ಹೆಸರನ್ನು ನೊಂದಾಯಿಸಿ ಗುರುತಿನ ಚೀಟಿಯನ್ನು ಪಡೆದುಕೊಂಡು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ದೊರೆಯುವ ವಿಶೇಷ ಸೌಲಭ್ಯಗಳನ್ನು ಪಡೆದುಕೊಳ್ಳುವ ಮೂಲಕ ಸಮೃದ್ಧ ಸ್ವಾಭಿಮಾನಿ ಜೀವನ ನಡೆಸಬೇಕು. ಮಕ್ಕಳ ಶಿಕ್ಷಣ ಸೇರಿದಂತೆ ಅನಾರೋಗ್ಯಕ್ಕೆ ಒಳಗಾದರೆ, ಅಪಘಾತಕ್ಕೆ ತುತ್ತಾದರೆ ಕುಟುಂಬದ ಸದಸ್ಯರು ಸರ್ಕಾರದಿಂದ ದೊರೆಯುವ ಸಹಾಯ ಧನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಸುಖ ಸಂತೋಷದಿAದ ನೆಮ್ಮದಿಯ ಜೀವನ ನಡೆಸಬೇಕು ಎಂದು ಕಲ್ಪನಾ ಮನವಿ ಮಾಡಿದರು..
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ರಾಜ್ಯಾಧ್ಯಕ್ಷ ರಂಗಸ್ವಾಮಿ ಮಾತನಾಡಿ ನಾಡಿನಾದ್ಯಂತ ಕೆಲಸ ಮಾಡುತ್ತಿರುವ ಅಸಂಘಟಿತ ಕಾರ್ಮಿಕರು ಮೊದಲು ಸಂಘಟಿತರಾಗಿ ಕಾರ್ಮಿಕ ಇಲಾಖೆಯು ನೀಡುವ ಗುರುತಿನ ಚೀಟಿಯನ್ನು ಪಡೆದುಕೊಂಡು ತಮ್ಮ ವೃತ್ತಿಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಕೆಲಸ ಮಾಡಿ ಸಂತೋಷದಿAದ ಜೀವನ ನಡೆಸಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರದ ವತಿಯಿಂದ ದೊರೆಯುವ ಸಂವಿಧಾನಬದ್ಧವಾದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಂಘಟಿತ ಹೋರಾಟ ಮಾಡಬೇಕು ಎಂದು ರಂಗಸ್ವಾಮಿ ಕರೆ ನೀಡಿದರು.

ಕರ್ನಾಟಕ ರಾಜ್ಯ ಸಹಾಯ ಹಸ್ತ ಅಸಂಘಟಿತ ಕಟ್ಟಡ ಕಾರ್ಮಿಕರ ಮಹಾಸಂಘದ ಗೌರವಾಧ್ಯಕ್ಷ ಪ್ರಕಾಶ್, ತಾಲ್ಲೂಕು ವಿಶ್ವಕರ್ಮ ಕೈಗಾರಿಕಾ ಸಂಘದ ಅಧ್ಯಕ್ಷ ಕುಮಾರಸ್ವಾಮಿ, ಅಖಿಲ ಕರ್ನಾಟಕ ವಿಶ್ವಕರ್ಮ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ್, ಕಾರ್ಮಿಕ ನಿರೀಕ್ಷಕರ ಕಛೇರಿಯ ಡಿಇಓ ಗಳಾದ ಸಂತೋಷ್, ರೂಪ, ತಾಲ್ಲೂಕು ನಯನಜ ಕ್ಷತ್ರಿಯ ಸಮಾಜದ ಅಧ್ಯಕ್ಷ ಡಾ.ಕೆ.ಎಂ.ಶಿವಪ್ಪ, ಟೈಲರ್ಸ್ ಅಸೋಸಿಯೇಷನ್ ತಾಲ್ಲೂಕು ಅಧ್ಯಕ್ಷ ಮಂಜುನಾಥ್, ಗಜಾನನ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ವಿಜಯಕುಮಾರ್, ಪುರಸಭೆ ಸದಸ್ಯ ಕೆ.ಆರ್.ನೀಲಕಂಠ, ದ್ವಿಚಕ್ರ ವಾಹನಗಳ ದುರಸ್ಥಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಾಗರಾಜು, ಅಸಂಘಟಿತ ಕಟ್ಟಡ ಕಾರ್ಮಿಕರ ಸಂಘದ ತಾಲ್ಲೂಕು ಅಧ್ಯಕ್ಷ ಮಂಜುನಾಥಾಚಾರಿ, ಕಾರ್ಯದರ್ಶಿ ಸುರೇಶಾಚಾರ್, ಖಜಾಂಚಿ ಆನಂದಾಚಾರ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೇಘನಾ ಪ್ರಾರ್ಥಿಸಿದರು, ರೂಪೇಶಾಚಾರ್ ಸ್ವಾಗತಿಸಿದರು, ಸಯ್ಯದ್ ಖಲೀಲ್ ವಂದಿಸಿದರು. ರೂಪ ಮತ್ತು ಸಂತೋಷ್ ಕಾರ್ಯಕ್ರಮ ನಡೆಸಿಕೊಟ್ಟರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ
.

error: