May 18, 2024

Bhavana Tv

Its Your Channel

ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಶಾರದಾ ಪೂಜಾ ಸಮಾರಂಭ

ಕೆ.ಆರ್.ಪೇಟೆ ; ವಿದ್ಯಾರ್ಥಿಗಳು ವಿನಯವಂತಿಕೆ ಹಾಗೂ ಶಿಸ್ತು ಸಂಯಮವನ್ನು ಮೈಗೂಡಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಸರ್ವಶ್ರೇಷ್ಠ ಸಾಧನೆ ಮಾಡಬೇಕು ಎಂದು ತೆಂಡೆಕೆರೆ ಬಾಳೆಹೊನ್ನೂರು ಶಾಖಾಮಠದ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮೀಜಿಗಳು ಕರೆ ನೀಡಿದರು.

ಅವರು ಕೆ.ಆರ್.ಪೇಟೆ ಪಟ್ಟಣದ ಪ್ರಗತಿ ವಿದ್ಯಾಸಂಸ್ಥೆಯ ಪ್ರಗತಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ೧೦ ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಶಾರದಾ ಪೂಜಾ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಮಾತನಾಡಿದರು…

ವಿದ್ಯಾರ್ಥಿಗಳು ಶಿಕ್ಷಣದ ಜ್ಞಾನದ ಬೆಳಕಿನ ಶಕ್ತಿಯ ಮೂಲಕ ಸಾಧನೆ ಮಾಡಬೇಕು. ಶ್ರಧ್ಧಾಭಕ್ತಿಯಿಂದ ವ್ಯಾಸಂಗ ಮಾಡಿ ಗುರಿಯನ್ನು ತಲುಪಿ ತಂದೆತಾಯಿಗಳು ಹಾಗೂ ಗುರುಹಿರಿಯರಿಗೆ ಕೀರ್ತಿ ತರಬೇಕು ಎಂದು ಮನವಿ ಮಾಡಿದ ಗಂಗಾಧರ ಶ್ರೀಗಳು ಮಾರ್ಚಿ.೨೮ರ ಸೋಮವಾರದಿಂದ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕು. ಪರೀಕ್ಷಾ ಭಯವನ್ನು ಮನಸ್ಸಿನಿಂದ ಹೋಗಲಾಡಿಸಿಕೊಂಡು ಹಬ್ಬದಂತೆ ಪರೀಕ್ಷೆಯನ್ನು ಎದುರಿಸಿ ಗುರಿಮುಟ್ಟಬೇಕು. ವಿದ್ಯಾಧಿದೇವತೆ ಶಾರದಾಂಭೆಯು ಒಳಿತನ್ನು ಮಾಡಲಿ ಎಂದು ಶುಭ ಹಾರೈಸಿದರು.

ಶಿಕ್ಷಣಸಂಸ್ಥೆಯ ಆಡಳಿತಾಧಿಕಾರಿ ಡಾ.ಕೆ.ಕಾಳೇಗೌಡ ಮಾತನಾಡಿ ಪ್ರಗತಿ ಪ್ರೌಢಶಾಲೆಯು ತಾಲ್ಲೂಕಿನಲ್ಲಿಯೇ ಮಾದರಿ ಶಿಕ್ಷಣ ಸಂಸ್ಥೆಯಾಗಿ ಕೆಲಸ ಮಾಡುತ್ತಾ ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಿದೆ. ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿಯೂ ವಿದ್ಯಾರ್ಥಿಗಳು ಅತ್ಯುನ್ನತವಾದ ಸಾಧನೆ ಮಾಡಿ ಶಾಲೆಗೆ ಕೀರ್ತಿ ತರಬೇಕು ಎಂದು ಮನವಿ ಮಾಡಿದರು.

ಪುರಸಭೆ ಸದಸ್ಯ ಕೆ.ಆರ್.ನೀಲಕಂಠ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳು ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತವಾದ ಸಾಧನೆಯನ್ನು ಮಾಡುವ ಮೂಲಕ ಜೀವನದಲ್ಲಿ ಯಶಸ್ಸುಗಳಿಸಬೇಕು. ಶಿಕ್ಷಣದ ಸಂಸ್ಕಾರದ ಮೂಲಕ ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಸಾಧಕರಾಗಿ ಹೊರಹೊಮ್ಮಬೇಕು ಎಂದು ಕಿವಿಮಾತು ಹೇಳಿದರು.

ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿ ಎಂ.ಕೆ.ಪವಿತ್ರ ಮತ್ತು ಎಸ್.ಎಲ್.ಮಹಾಲಕ್ಷ್ಮಿ, ಪ್ರಗತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಶೈಲಜಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ೧೦ ನೇ ತರಗತಿಯ ವಿದ್ಯಾರ್ಥಿಗಳು ಗಂಗಾಧರ ಶಿವಾಚಾರ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದು ಪರೀಕ್ಷಾ ಪ್ರವೇಶ ಪತ್ರಗಳು ಹಾಗೂ ನೆನಪಿನ ಕಾಣಿಕೆಗಳನ್ನು ಸ್ವೀಕರಿಸಿದರು..

ವರದಿ.ಡಾ.ಕೆ.ಆರ್.ನೀಲಕಂಠ. ಕೃಷ್ಣರಾಜಪೇಟೆ . ಮಂಡ್ಯ

error: