May 15, 2024

Bhavana Tv

Its Your Channel

ವಿಜೃಂಭಣೆಯಿOದ ನಡೆದ ಕಿಕ್ಕೇರಮ್ಮನವರ ಬ್ರಹ್ಮರಥೋತ್ಸವ

ಕೃಷ್ಣರಾಜಪೇಟೆ ತಾಲ್ಲೂಕಿನ ಪುರಾಣ ಪ್ರಸಿದ್ಧವಾದ ಕಿಕ್ಕೇರಿಯ ಗ್ರಾಮದೇವತೆ ಶ್ರೀ ಲಕ್ಷ್ಮೀದೇವಿ(ಕಿಕ್ಕೇರಮ್ಮ) ಅಮ್ಮನವರ ಬ್ರಹ್ಮರಥೋತ್ಸವವು ಸಡಗರ ಸಂಭ್ರಮದಿAದ ಅದ್ದೂರಿಯಾಗಿ ನಡೆಯಿತು…

ಸಚಿವ ಡಾ.ನಾರಾಯಣಗೌಡ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾಪು ಸಿದ್ಧಲಿಂಗಸ್ವಾಮಿ, ಜಿಲ್ಲಾ ಹಾಫ್ ಕಾಮ್ಸ್ ಅಧ್ಯಕ್ಷ ಕೆ.ಜಿ.ತಮ್ಮಣ್ಣ, ಜಿಲ್ಲಾ ಪಂಚಾಯತಿ ಮಾಜಿಉಪಾಧ್ಯಕ್ಷ ಕಿಕ್ಕೇರಿ ಪ್ರಭಾಕರ್, ಕಿಕ್ಕೇರಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುನಿತಾನಂದಕುಮಾರ್, ತಾಲ್ಲೂಕು ಪಂಚಾಯತಿ ಮಾಜಿಅಧ್ಯಕ್ಷ ಕಿಕ್ಕೇರಿ ಸುರೇಶ್ ಮತ್ತು ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿಅಧ್ಯಕ್ಷ ಕೆ.ಶ್ರೀನಿವಾಸ್ ಶ್ರೀರಥದಲ್ಲಿ ವಿರಾಜಮಾನವಾಗಿದ್ದ ಕಿಕ್ಕೇತಮ್ಮನವರ ಉತ್ಸವಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು..

ಸಚಿವ ಡಾ.ನಾರಾಯಣಗೌಡ ಮಾತನಾಡಿ ಹಬ್ಬಗಳು, ಜಾತ್ರೆ, ರಥೋತ್ಸವ ಉತ್ಸವಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿವೆ. ಹಬ್ಬದ ಸಂಭ್ರಮದಲ್ಲಿ ಎಲ್ಲರೂ ಒಂದಾಗಿ ಭಾಗವಹಿಸಿದಾಗ ಸಿಗುವ ಆನಂದಕ್ಕೆ ಪಾರವಿಲ್ಲ. ತಾಯಿ ಕಿಕ್ಕೇರಮ್ಮ ದೇವಿಯು ಕೋವಿಡ್ ಮಾಹಾಮಾರಿಯ ರುದ್ರನರ್ತನ ಸೇರಿದಂತೆ ಸಾಂಕ್ರಾಮಿಕ ರೋಗರುಜಿನಗಳನ್ನು ಹೊಡೆದೋಡಿಸಿ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಕರುಣಿಸಿ ಆಶೀರ್ವದಿಸಲಿ ಎಂದು ಪ್ರಾರ್ಥಿಸಿದರು..

ಕಿಕ್ಕೇರಿ ಠಾಣೆಯ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ಜಗಧೀಶ್ ಬಿಗಿ ಪೋಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು…ಹತ್ತು ಸಾವಿರಕ್ಕೂ ಹೆಚ್ಚಿನ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು..ಉಘೇ ಕಿಕ್ಕೇರಮ್ಮ, ಉಘೇ ಲಕ್ಷ್ಮೀದೇವಿ ಎಂಬ ಜಯಘೋಷಗಳು ಮುಗಿಲು ಮುಟ್ಟಿದ್ದವು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: