May 5, 2024

Bhavana Tv

Its Your Channel

ಕೆ.ಆರ್.ಪೇಟೆಯಲ್ಲಿ ನಿರ್ಮಾಣವಾಗುತ್ತಿರುವ ಹೈಟೆಕ್ ಕ್ರೀಡಾಂಗಣದ ಕಾಮಗಾರಿ ವೀಕ್ಷಿಸಿದ ಸಚಿವ ಡಾ.ನಾರಾಯಣಗೌಡ

ಕೆ.ಆರ್.ಪೇಟೆಯಲ್ಲಿ ೧೪.೨೪ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಹೈಟೆಕ್ ಕ್ರೀಡಾಂಗಣದ ಕಾಮಗಾರಿಯನ್ನು ರಾಜ್ಯದ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಡಾ.ನಾರಾಯಣಗೌಡ ವೀಕ್ಷಿಸಿದರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕೆಆರ್ ಪೇಟೆಯಲ್ಲಿ ೧೪.೨೪ ಕೋಟಿ ವೆಚ್ಚದಲ್ಲಿ ತಾಲೂಕು ಒಳಾಂಗಣ ನಿರ್ಮಿಸಲಾಗುತ್ತಿದ್ದು, ಇಂದು ಸ್ಥಳೀಯ ಶಾಸಕರೂ ಆದ ಸಚಿವ ಡಾ.ನಾರಾಯಣಗೌಡ ಅವರು ಸ್ಥಳಕ್ಕೆ ಭೇಟಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.

ಒಳಾಂಗಣ ಕ್ರೀಡಾಂಗಣದಲ್ಲಿ ಅತ್ಯಾಧುನಿಕ ಸ್ವಿಮ್ಮಿಗ್‌ಪೂಲ್, ಬ್ಯಾಡ್ಮಿಂಟನ್ ಕೋಟ್, ಹೈಟೆಕ್ ಜಿಮ್, ಕ್ಲಬ್ ಹೌಸ್ ಸೇರಿದಂತೆ ವಿಸ್ತಾರವಾದ ಪಾರ್ಕಿಂಗ್ ವ್ಯವಸ್ಥೆ ಒಳಗೊಂಡಿರಲಿದೆ.

೧೪.೨೪ ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ವ್ಯವಸ್ಥೆಯುಳ್ಳ ತಾಲೂಕು ಕ್ರೀಡಾಂಗಣದ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ. ಕಾಮಗಾರಿ ಗುಣಮಟ್ಟ ಉತ್ತಮವಾಗಿದ್ದು, ಇದೇ ರೀತಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚಿಸಿದ್ದೇನೆ. ಒಂದು ವೇಳೆ ಕಳಪೆ ಕಾಮಗಾರಿ ಕಂಡು ಬಂದರೇ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದ್ದೇನೆ. ಶಂಕುಸ್ಥಾಪನೆ ನಡೆದ ಒಂದು ತಿಂಗಳ ಅವಧಿಯಲ್ಲೇ ಸಾಕಷ್ಟು ಕಾಮಗಾರಿ ನಡೆದಿದೆ. ಐದಾರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗುತ್ತದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು

ವರದಿ: ಕೆ.ಆರ್ ನೀಲಕಂಠ
ಕೆ.ಆರ್.ಪೇಟೆ

error: