April 26, 2024

Bhavana Tv

Its Your Channel

ಕೆಪಿಎಸ್ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಹರ್ಷಿತಳ ಅದ್ಭುತ ಸಾಧನೆ, ಹೃದಯಸ್ಪರ್ಶಿ ಸನ್ಮಾನ ..

ಕೃಷ್ಣರಾಜಪೇಟೆ:- ಇತ್ತೀಚೆಗೆ ನಡೆದ SSಐಅ ಪರೀಕ್ಷೆಯಲ್ಲಿ 625ಕ್ಕೆ 624 ಅಂಕಗಳನ್ನು ಗಳಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುವ ಕೆಪಿಎಸ್ ಶಾಲೆಯ ವಿದ್ಯಾರ್ಥಿನಿ ಹರ್ಷಿತ ಅವರನ್ನು ಕೆಪಿಎಸ್ ಸ್ಕೂಲ್ ಪ್ರಾಂಶುಪಾಲ ಡಿ.ಬಿ.ಸತ್ಯ, ಉಪಪ್ರಾಂಶುಪಾಲ ತಿಮ್ಮೇಗೌಡ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು ಅವರ ನೇತೃತ್ವದಲ್ಲಿ ಶಾಲೆಯ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಗೌರವಿಸಿದರು..

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಾಂಶುಪಾಲ ಡಿ.ಬಿ.ಸತ್ಯ ಹಾಗೂ ಬಿಇಓ ಬಸವರಾಜು ಮಾತನಾಡಿ
ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದು ಸರ್ಕಾರಿ ಶಾಲೆಯ ಹಿರಿಮೆಯನ್ನು ಹೆಚ್ಚಿಸಿರುವ ಹರ್ಷಿತ ಶಾಲೆಯ ಇತರೆ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ. ತಂದೆಯನ್ನು ಕಳೆದುಕೊಂಡು ತಾಯಿಯ ಆಶ್ರಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹರ್ಷಿತಳ ಮುಂದಿನ ಹೆಚ್ಚಿನ ವಿದ್ಯಾಭ್ಯಾಸದ ಎಲ್ಲಾ ಖರ್ಚು ವೆಚ್ಚಗಳನ್ನು ತಾವು ವಹಿಸಲು ಬದ್ಧರಿರುವುದಾಗಿ ಪ್ರಾಂಶುಪಾಲರಾದ ಸತ್ಯ ಮತ್ತು ಬಿಇಓ ಬಸವರಾಜು ಘೋಷಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪುರಸಭೆ ಸದಸ್ಯರಾದ ಕೆ.ಎಸ್.ರಾಜೇಶ್, ಕೆ.ಆರ್.ನೀಲಕಂಠ, ಉಪಪ್ರಾಂಶುಪಾಲ ತಿಮ್ಮೇಗೌಡ, ಶಿಕ್ಷಕಿ ವೇದಾವತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕೆಪಿಎಸ್ ಸ್ಕೂಲ್ ಕೀರ್ತಿಯನ್ನು ಬೆಳಗಿರುವ ಪ್ರತಿಭಾವಂತ ವಿದ್ಯಾರ್ಥಿನಿ ಹರ್ಷಿತಳ ತಾಯಿ ಕಲ್ಪನ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ವಾಸುದೇವ, ಹಿರಿಯ ಉಪನ್ಯಾಸಕ ಸುರೇಶ್, ಕ್ಷೇತ್ರ ಸಮನ್ವಯಾಧಿಕಾರಿ ಲಿಂಗರಾಜು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಿಕ್ಷಕ ಚಂದ್ರಶೇಖರಬಾಬು ಕಾರ್ಯಕ್ರಮ ನಿರೂಪಿಸಿದರು…

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ, ಮಂಡ್ಯ

error: