May 2, 2024

Bhavana Tv

Its Your Channel

ಕೃಷ್ಣರಾಜಪೇಟೆ ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

ಕೆ.ಆರ್.ಪೇಟೆ:- ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕೃಷ್ಣರಾಜಪೇಟೆ ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ನೂರಾರು ಹೂವು ಮತ್ತು ಹಣ್ಣಿನ ಸಸಿಗಳನ್ನು ನೆಟ್ಟು ನೀರೆರೆದು ಪರಿಸರ ಪ್ರೇಮ ಮೆರೆದ ತಹಶೀಲ್ದಾರ್ ಎಂ.ವಿ.ರೂಪ .. ನಾಗರೀಕರ ಮೆಚ್ಚುಗೆ .

ಕೆ.ಆರ್.ಪೇಟೆ ಪಟ್ಟಣದ ಮಿನಿ ವಿಧಾನಸೌಧ ಹಾಗೂ ಶಾಲಾ ಕಾಲೇಜು ಮೈದಾನದಲ್ಲಿ ಸಾಮಾಜಿಕ ವಲಯ ಅರಣ್ಯ ಇಲಾಖೆಯ ಸಹಯೋಗದಲ್ಲಿ ಕಂದಾಯ ಇಲಾಖೆಯ ನೇತೃತ್ವದಲ್ಲಿ ನೂರಾರು ಸಸಿಗಳನ್ನು ನೆಟ್ಟು ನೀರೆರೆದ ತಹಶೀಲ್ದಾರ್ ರೂಪ ಗಿಡಮರಗಳನ್ನು ನೆಟ್ಟು ಮಕ್ಕಳಂತೆ ಆರೈಕೆ ಮಾಡಿ ಜೋಪಾನ ಮಾಡಬೇಕು. ಮನೆಗೆರಡು ಮರ, ಊರಿಗೊಂದು ವನ ಎಂಬ ಹಿರಿಯರ ನಾಣ್ಣುಡಿಯನ್ನು ನನಸಾಗಿಸುವ ದಿಕ್ಕಿನಲ್ಲಿ ಪ್ರತಿಯೊಬ್ಬರೂ ತಮ್ಮ ಬದ್ಧತೆ ಹಾಗೂ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು ಎಂದು ಮನವಿ ಮಾಡಿದ ತಹಶೀಲ್ದಾರ್ ರೂಪ ಮಾನವರಾದ ನಾವು ಪರಿಸರದ ಜೊತೆಯಲ್ಲಿ ಅವಿನಾಭಾವ ಸಂಬAಧವನ್ನು ಹೊಂದಿದ್ದು ಕಾಡಿದ್ದರೆ ನಾಡು, ಕಾಡು ಮತ್ತು ಗಿಡಮರಗಳಿಂದ ನಾಡಿನ ಉಳಿವು ಎಂಬ ಸತ್ಯ ಸಂಗತಿಯನ್ನು ಅರಿಯಬೇಕು ಎಂದು ಹೇಳಿದರು.

ಕೆ.ಆರ್.ಪೇಟೆ ತಾಲ್ಲೂಕು ವಲಯ ಅರಣ್ಯಾಧಿಕಾರಿ ಹೆಚ್.ಎಸ್.ಗಂಗಾಧರ, ಪುರಸಭೆ ಮುಖ್ಯಾಧಿಕಾರಿ ಕುಮಾರ್, ಪರಿಸರ ಎಂಜಿನಿಯರ್ ಅರ್ಚನಾಆರಾಧ್ಯ, ತಾಲ್ಲೂಕು ಕಂದಾಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷೆ ಚಂದ್ರಕಲಾ, ತಾಲ್ಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್, ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಡಾ.ನರಸಿಂಹರಾಜು, ಸಹಾಯಕ ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಗ್ರಾಮ ಲೆಕ್ಕಾಧಿಕಾರಿಗಳಾದ ಪೂಜಾ, ರೇಖಾ, ನಂದಿನಿ, ಪೂರ್ಣಿಮಾ ಮತ್ತಿತರರು ಉಪಸ್ಥಿತರಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ
.

error: