May 2, 2024

Bhavana Tv

Its Your Channel

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನದ ಸಹಾಯ ಧನದ ಮಂಜೂರಾತಿ ಆದೇಶ ಪತ್ರ ವಿತರಣೆ

ಕೃಷ್ಣರಾಜಪೇಟೆ ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಛೇರಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನದ ಸಹಾಯ ಧನದ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಿದ ಸರ್ಕಾರಿ ಎಂಜಿನಿಯರಿAಗ್ ಕಾಲೇಜು ಪ್ರಾಂಶುಪಾಲ ಡಾ.ಕೆ.ಆರ್.ದಿನೇಶ್ ..

ರಾಜ್ಯದಾದ್ಯಂತ ಸಾವಿರಾರು ಬಡವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕೆ ನೆರವು ನೀಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಧರ್ಮಸ್ಥಳದ ಧರ್ಮಾಧಿಕಾರಿ, ಪದ್ಮಭೂಷಣ ಡಾ.ಡಿ.ವೀರೇಂದ್ರಹೆಗಡೆ ಅವರ ನೇತೃತ್ವದಲ್ಲಿ ಮಾಡುತ್ತಿದೆ. ಸ್ವಾಸ್ಥ ಸಂಕಲ್ಪ ಯೋಜನೆ, ಮಧ್ಯವರ್ಜನ ಶಿಬಿರಗಳ ಆಯೋಜನೆ ಸೇರಿದಂತೆ ಹತ್ತು ಹಲವು ಜನಪರವಾದ ಕೆಲಸ ಕಾರ್ಯಗಳನ್ನು ಮಾಡುತ್ತಾ ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಪ್ರಾಂಶುಪಾಲ ಡಾ.ದಿನೇಶ್ ಅಭಿಮಾನದಿಂದ ಹೇಳಿದರು..

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲಕುಲಾಲ್ ಮಾತನಾಡಿ ಪ್ರತಿಭಾವಂತ ಬಡ ಮಕ್ಕಳ ಶೈಕ್ಷಣಿಕ ವಿಕಾಸಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಧರ್ಮಸ್ಥಳ ಸಂಸ್ಥೆಯ ವತಿಯಿಂದ ರೂಪಿಸಿ ಶ್ರೀ ಮಂಜುನಾಥಸ್ವಾಮಿಯ ಪ್ರಸಾದದ ರೂಪದಲ್ಲಿ ಸಹಾಯ ಧನದ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಲಾಗುತ್ತಿದೆ. ಶಿಕ್ಷಣದ ಜ್ಞಾನದ ಬೆಳಕಿನ ಶಕ್ತಿಯ ಮೂಲಕ ಸಾಮಾಜಿಕ ಅಸಮಾನತೆಯನ್ನು ಹೊಡೆದೋಡಿಸಿ ಸಮಾನತೆಯಿಂದ ಕೂಡಿರುವ ಆರೋಗ್ಯವಂತ ಸಮಾಜವನ್ನು ಕಟ್ಟಲು ಧರ್ಮಾಧಿಕಾರಿಗಳು ಸಂಕಲ್ಪ ಮಾಡಿ ಜನಪರವಾದ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ ಎಂದು ಮಹಾಬಲಕುಲಾಲ್ ತಿಳಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾ ಜನಜಾಗೃತಿ ಹೋರಾಟ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಡಾ.ಕೆ.ಎಸ್.ರಾಜೇಶ್, ಕೃಷ್ಣರಾಜಪೇಟೆ ತಾಲ್ಲೂಕು ಕರವೇ ಅಧ್ಯಕ್ಷ ಹೊನ್ನೇನಹಳ್ಳಿ ವೇಣು, ಯೋಜನಾಧಿಕಾರಿ ಮಮತಾಶೆಟ್ಟಿ, ಪತ್ರಕರ್ತ ಸೈಯ್ಯದ್ ಖಲೀಲ್ ಸೇರಿದಂತೆ ವಿದ್ಯಾರ್ಥಿಗಳ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು…

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ, ಮಂಡ್ಯ

error: