May 17, 2024

Bhavana Tv

Its Your Channel

ಜೂನ್. 21 ವಿಶ್ವ ಯೋಗ ದಿನದ ಅಂಗವಾಗಿ ಸಾಮೂಹಿಕ ಯೋಗ ಪ್ರದರ್ಶನ

ಕೆ.ಆರ್.ಪೇಟೆ :- ವಿಶ್ವ ಯೋಗ ದಿನದ ಅಂಗವಾಗಿ ಕೆ.ಆರ್.ಪೇಟೆ ಪಟ್ಟಣದ ಪುರಸಭಾ ವ್ಯಾಪ್ತಿಯ ಹೊಯ್ಸಳ ಶಿಲ್ಪಕಲಾ ವಾಸ್ತುವೈಭವದ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ದೇವಾಲಯದ ಆವರಣದಲ್ಲಿ ಜೂನ್. 21ರ ಮಂಗಳವಾರ ಬೆಳಿಗ್ಗೆ 7 ಗಂಟೆಯಿAದ 8 ಗಂಟೆಯವರೆಗೆ ಒಂದು ಸಾವಿರ ಜನರಿಂದ ಸಾಮೂಹಿಕ ಯೋಗ ಪ್ರದರ್ಶನ ಹಾಗೂ ಆರೋಗ್ಯಕ್ಕಾಗಿ ಯೋಗ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಎಂ.ವಿ.ರೂಪ ತಿಳಿಸಿದರು ..

ಅವರು ಇಂದು ಕೆ.ಆರ್.ಪೇಟೆ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಯಶಸ್ವಿ ವಿಶ್ವಯೋಗ ದಿನ ಕಾರ್ಯಕ್ರಮ ಆಚರಣೆಯ ಹಿನ್ನೆಲೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪ್ರಗತಿಪರ ಸಂಘಟನೆಗಳು ಹಾಗೂ ಯೋಗಗುರುಗಳ ಸಮಕ್ಷಮದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

75 ನೇ ಸ್ವಾತಂತ್ರ‍್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಅಪರೂಪದ ಪಾರಂಪರಿಕ ತಾಣಗಳು ಹಾಗೂ ಸ್ಥಳಗಳಲ್ಲಿ ಭಾರತ ಸರ್ಕಾರದ ಆಯುಷ್ ಇಲಾಖೆಯ ನಿರ್ದೇಶನದ ಹಿನ್ನೆಲೆಯಲ್ಲಿ ವಿಶೇಷವಾಗಿ ಯೋಗ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದ ತಹಶೀಲ್ದಾರ್ ಎಂ.ವಿ.ರೂಪ ಅವರು ಮಾತನಾಡಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿಗಳು, ಯುವಜನರು, ಯೋಗ ಗುರುಗಳು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಹಯೋಗದಲ್ಲಿ ಒಂದು ಸಾವಿರ ಜನರು ಏಕಕಾಲದಲ್ಲಿ ಶ್ರೀ ಲಕ್ಷ್ಮೀನಾರಾಯಣ ಸ್ವಾಮಿ ದೇವಾಲಯದ ಆವರಣದ ಹುಲ್ಲುಹಾಸಿನ ಮೇಲೆ ಸಾಮೂಹಿಕವಾಗಿ ಯೋಗ ಪ್ರದರ್ಶನವನ್ನು ನೀಡುತ್ತಿದ್ದಾರೆ. ಆದ್ದರಿಂದ ವಿಶ್ವ ಯೋಗದಿನ ಕಾರ್ಯಕ್ರಮದಲ್ಲಿ ಭಾಗವಹಿಸುವ ಯುವಜನರು ಹಾಗೂ ಅಧಿಕಾರಿಗಳು ಬೆಳಿಗ್ಗೆ 6-45ಕ್ಕೆ ಹೊಸಹೊಳಲು ಗ್ರಾಮದ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ದೇವಾಲಯದ ಆವರಣಕ್ಕೆ ಆಗಮಿಸಿ 7 ಗಂಟೆಯಿAದ ಆರಂಭವಾಗಲಿರುವ ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಆರೋಗ್ಯಕ್ಕಾಗಿ ಯೋಗ ವಿಶೇಷ ಯೋಗ ಪ್ರದರ್ಶನವನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ತಹಶೀಲ್ದಾರ್ ರೂಪ ಮನವಿ ಮಾಡಿದರು..

ಪೂರ್ವಭಾವಿ ಸಭೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್, ತಾಲ್ಲೂಕು ಪಂಚಾಯತಿ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಕೆ.ಎಸ್.ಸಂದೀಪ್, ಸಹಾಯಕ ನಿರ್ದೇಶಕ ಡಾ.ನರಸಿಂಹರಾಜು, ಕೆ.ಆರ್.ಪೇಟೆ ತಾಲ್ಲೂಕಿನ ಸಾಂಸ್ಕೃತಿಕ ರಾಯಭಾರಿಗಳಾದ ವೇದಬ್ರಹ್ಮ ಗೋಪಾಲಕೃಷ್ಣ ಅವಧಾನಿಗಳು, ಅಂತರಾಷ್ಟ್ರೀಯ ಖ್ಯಾತಿಯ ಯೋಗಪಟು ಅಲ್ಲಮಪ್ರಭು, ಪುರಸಭೆ ಮುಖ್ಯಾಧಿಕಾರಿ ಕುಮಾರ್, ತಾಲ್ಲೂಕು ಆಯುಷ್ ವೈದ್ಯಾಧಿಕಾರಿ ಡಾ.ಲೋಕೇಶ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: