April 24, 2024

Bhavana Tv

Its Your Channel

ಜುಲೈ 21 ರಂದು ಕೆ.ಆರ್.ಪೇಟೆಗೆ ಸಿಎಂ ಬಸವರಾಜಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಭೇಟಿ

ಕೆ.ಆರ್.ಪೇಟೆ : ಜುಲೈ 21 ರಂದು ಕೆ.ಆರ್.ಪೇಟೆಗೆ ಸಿಎಂ ಬಸವರಾಜಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಹಿನ್ನೆಲೆಯಲ್ಲಿ ಸಚಿವ ನಾರಾಯಣಗೌಡರ ನೇತೃತ್ವದಲ್ಲಿ ಅಧಿಕಾರಿಗಳ ಸಮಾಲೋಚನಾ ಸಭೆಯು ಯಶಸ್ವಿಯಾಗಿ ನಡೆಯಿತು …

ಜುಲೈ 21 ರಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಕೆ.ಆರ್.ಪೇಟೆ ಪಟ್ಟಣಕ್ಕೆ ಭೇಟಿ ನೀಡಿ 2ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿರುವ ಹಿನ್ನೆಲೆಯಲ್ಲಿ ಸಚಿವ ನಾರಾಯಣಗೌಡ ಅವರು ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸಮಾಲೋಚನೆ ನಡೆಸಿದರು…

ಮನೆ ಮನೆಗೆ ಗಂಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ 500 ಕೋಟಿ ರೂಪಾಯಿಗಳ ವೆಚ್ಚದ ಜಲಜೀವನ್ ಮಿಷನ್ ಯೋಜನೆ, 218ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸಂತೆಬಾಚಹಳ್ಳಿ ಹೋಬಳಿಯ ಕೆರೆ ಕಟ್ಟೆಗಳನ್ನು ತುಂಬಿಸುವ ಗೂಡೆಹೊಸಳ್ಳಿ ಏತನೀರಾವರಿ ಯೋಜನೆ, ಬೂಕನಕೆರೆ ಹಾಗೂ ಶೀಳನೆರೆ ಹೋಬಳಿಯ ಕೆರೆ ಕಟ್ಟೆಗಳನ್ನು ತುಂಬಿಸುವ 265ಕೋಟಿ ರೂಪಾಯಿಗಳ ವೆಚ್ಚದ ಕಟ್ಟಹಳ್ಳಿ ಏತನೀರಾವರಿ ಯೋಜನೆ, ಕೆ.ಆರ್.ಪೇಟೆ ಪಟ್ಟಣಕ್ಕೆ ವಿಶೇಷವಾಗಿ ಮಂಜೂರಾಗಿರುವ 28 ಕೋಟಿ ವೆಚ್ಚದ ತಾಯಿ-ಮಗು ಆಸ್ಪತ್ರೆ ಕಾಮಗಾರಿ, ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳು, ವಿದ್ಯಾರ್ಥಿ ನಿಲಯಗಳ ಕಾಮಗಾರಿಗಳು, ಪುರಸಭೆ ಕಾರ್ಯಾಲಯದ ಹೈಟೆಕ್ ಕಛೇರಿಯ ಶಂಕುಸ್ಥಾಪನೆ ಸೇರಿದಂತೆ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ, ವಿದ್ಯುತ್ ಸಬ್ ಸ್ಟೇಷನ್ ಗಳ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಭೂಮಿಪೂಜೆ ನೆರವೇರಿಸಿ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಆದ್ದರಿಂದ ಅಧಿಕಾರಿಗಳು ಇಲಾಖಾವಾರು
ಶ್ರೀ ಸಾಮಾನ್ಯರ ಬೇಡಿಕೆಗಳಿಗೆ ಅನುಗುಣವಾಗಿ ವಿವಿಧ ಸೌಲಭ್ಯಗಳನ್ನು ಒದಗಿಸಲು ಈಗಿನಿಂದಲೇ ಫಲಾನುಭವಿಗಳನ್ನು ಆಯ್ಕೆ ಮಾಡುವ ಮೂಲಕ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪಿಸಬೇಕು ಎಂದು ನಿರ್ದೇಶನ ನೀಡಿದ ಸಚಿವ ನಾರಾಯಣಗೌಡರು ಜುಲೈ ಮೊದಲ ಅವರ ದಿಂದ ತಾಲ್ಲೂಕಿನ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ನಡೆಯಲಿರುವ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರಗಳನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು..

ಸಭೆಯಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ಡಿ.ಹೆಚ್.ಓ ಧನಂಜಯ, ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಪುಷ್ಪಲತಾ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಪುರಸಭಾ ಅಧ್ಯಕ್ಷೆ ಮಹಾದೇವಿ, ಮುಖ್ಯಾಧಿಕಾರಿ ಕುಮಾರ್, ಬಿಜೆಪಿ ಮುಖಂಡ ಡಾ.ಇಂದ್ರೇಶ್, ಸಚಿವ ನಾರಾಯಣಗೌಡರ ಆಪ್ತಕಾರ್ಯದರ್ಶಿ ಪ್ರಭಾಕರ್, ತಹಶೀಲ್ದಾರ್ ಎಂ.ವಿ.ರೂಪ, ಕ್ಷೇತ್ರಶಿಕ್ಷಣಾಧಿಕಾರಿ ಸೀತಾರಾಮ್, ತಾ.ಪಂ ಆಡಳಿತಾಧಿಕಾರಿ ರಾಜಮೂರ್ತಿ, ಇಓ ಸತೀಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಮಧುಸೂದನ್, ತಾಲ್ಲೂಕು ಆಯುಷ್ ವೈದ್ಯಾಧಿಕಾರಿ ಡಾ.ಲೋಕೇಶ್ ಕುಮಾರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರವಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಬಿಜೆಪಿ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ .

error: