May 19, 2024

Bhavana Tv

Its Your Channel

ಭೂವರಹನಾಥ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ದಂಪತಿಗಳ ಭೇಟಿ

ಕೆ.ಆರ್.ಪೇಟೆ ತಾಲ್ಲೂಕಿನ ಪುರಾಣ ಪ್ರಸಿದ್ಧವಾದ ಭೂವರಹನಾಥ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ದಂಪತಿಗಳ ಭೇಟಿ.. ಸಾಲಿಗ್ರಾಮ ಕೃಷ್ಣ ಶಿಲೆಯ 17 ಅಡಿ ಎತ್ತರದ ಬೃಹತ್ ಮೂರ್ತಿಯನ್ನು ಕಂಡು ಪುಳಕಿತರಾದ ಹಿರಿಯ ಐಎಎಸ್ ಅಧಿಕಾರಿ.

ಕೃಷ್ಣರಾಜಪೇಟೆ ತಾಲ್ಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಭೂವರಹನಾಥಸ್ವಾಮಿಯು ಲಕ್ಷ್ಮೀ ಸಮೇತನಾಗಿ ನೆಲೆಸಿರುವ ಕಲ್ಲಹಳ್ಳಿಗೆ ರಾಜ್ಯದ ಮುಖ್ಯಮಂತ್ರಿ ಗಳ ಕಾರ್ಯದರ್ಶಿಗಳಾದ ಮಂಜುನಾಥ್ ಪ್ರಸಾದ್ ದಂಪತಿಗಳು ಭೇಟಿ ನೀಡಿ ಸ್ವಾಮಿಯ ದರ್ಶನ ಮಾಡಿ ಪುನೀತರಾದರು,

ಹೇಮಾವತಿ ನದಿಯ ದಡದಲ್ಲಿರುವ ಭೂವೈಕುಂಠವೆAದೇ ಪ್ರಸಿದ್ಧವಾಗಿದ್ದು ದಿನದಿಂದ ದಿನಕ್ಕೆ ಭಕ್ತ ಸಮೂಹವನ್ನು ಆಕರ್ಷಿಸುತ್ತಿರುವ ಭೂವರಹನಾಥಸ್ವಾಮಿ ಕ್ಷೇತ್ರದ ಪ್ರಸಿದ್ಧಿ ಹಾಗೂ ದೇವಾಲಯದ ಅಭಿವೃದ್ಧಿಯ ಬಗ್ಗೆ ಮಾಹಿತಿ ಪಡೆದ ಮಂಜುನಾಥ್ ಪ್ರಸಾದ್ ದಂಪತಿಗಳು ಮೈಸೂರಿನ ಪರಕಾಲ ಮಠದ ನೇತೃತ್ವದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಕಣ್ಣಾರೆ ವೀಕ್ಷಿಸಿದರು..

ದೇವಾಲಯವನ್ನು ಮೂರು ಪ್ರಾಕಾರಗಳ ಹೊಯ್ಸಳ ವಾಸ್ತುಶೈಲಿಯ ಮಾದರಿಯ ದೇವಾಲಯವನ್ನಾಗಿ ತಿರುಮಲ ತಿರುಪತಿಯ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದು ಹಾಗೂ 172 ಅಡಿ ಎತ್ತರದ ಬೃಹತ್ ರಾಜಗೋಪುರದ ನಿರ್ಮಾಣ ಕಾರ್ಯವು 25 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಭರದಿಂದ ನಡೆಯುತ್ತಿರುವುದರ ಬಗ್ಗೆ ಮಾಹಿತಿ ಪಡೆದುಕೊಂಡರು.

ಭೂವರಹನಾಥಸ್ವಾಮಿಯ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಉಚಿತ ಪ್ರಸಾದ ವಿತರಣೆ ಸೇರಿದಂತೆ ಶ್ರೀ ಕ್ಷೇತ್ರದಲ್ಲಿ ಗ್ರಾಮೀಣ ಪ್ರದೇಶದ ಬಡವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕಾಗಿ ನಿರ್ಮಾಣವಾಗುತ್ತಿರುವ ಅಂತರಾಷ್ಟ್ರೀಯ ವಸತಿಶಾಲೆಯ ನಿರ್ಮಾಣದ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿಗಳ ಕಾರ್ಯದರ್ಶಿ ಹಿರಿಯ ಐಎಎಸ್ ಅಧಿಕಾರಿಗಳಾದ ಮಂಜುನಾಥ್ ಪ್ರಸಾದ್ ಶ್ರೀ ಕ್ಷೇತ್ರವು ಸಮಗ್ರವಾಗಿ ಅಭಿವೃದ್ಧಿ ಹೊಂದುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು..

ಈ ಸಂದರ್ಭದಲ್ಲಿ ಶ್ರೀನಿವಾಸ್ ದಂಪತಿಗಳು, ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ತಹಶೀಲ್ದಾರ್ ಎಂ.ವಿ.ರೂಪ, ಸಚಿವರಾದ ನಾರಾಯಣಗೌಡರ ಆಪ್ತಸಹಾಯಕ ದಯಾನಂದ, ರಾಜಶ್ವನಿರೀಕ್ಷಕರಾದ ರಾಜಮೂರ್ತಿ, ಭೂವರಹನಾಥಸ್ವಾಮಿ ದೇವಾಲಯ ವ್ಯವಸ್ಥಾಪನಾ ಸಮಿತಿಯ ಮ್ಯಾನೇಜಿಂಗ್ ಟ್ರಸ್ಟಿ ಶ್ರೀನಿವಾಸರಾಘವನ್ ಸೇರಿದಂತೆ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: