May 14, 2024

Bhavana Tv

Its Your Channel

ಕೂಲಿ ಕಾರ್ಮಿಕರ ಮಹಿಳಾ ಸ್ವಸಹಾಯ ಸಂಘ ಉದ್ಘಾಟಿಸಿದ ಸಚಿವ ಡಾ.ನಾರಾಯಣಗೌಡ

ಕೃಷ್ಣರಾಜಪೇಟೆ :- ಹೆಣ್ಣುಮಕ್ಕಳು ಹೈನುಗಾರಿಕೆ ಸೇರಿದಂತೆ ಗುಡಿಕೈಗಾರಿಕೆಗಳ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಿ ಅಭಿವೃದ್ಧಿಯ ಪಥದತ್ತ ಸಾಗಬೇಕು ಎಂದು ರಾಜ್ಯದ ಯುವ ಸಬಲೀಕರಣ, ಕ್ರೀಡೆ ಹಾಗೂ ರೇಷ್ಮೆ ಸಚಿವರಾದ ಡಾ.ನಾರಾಯಣಗೌಡ ಕರೆ ನೀಡಿದರು ..

ಅವರು ತಾಲ್ಲೂಕಿನ ಬೂಕನಕೆರೆ ಹೋಬಳಿಯ ಹೆಮ್ಮಡಹಳ್ಳಿ ಗ್ರಾಮದಲ್ಲಿ ನೂತನವಾಗಿ ಆರಂಭವಾದ ಕೂಲಿ ಕಾರ್ಮಿಕರ ಮಹಿಳಾ ಸ್ವಸಹಾಯ ಸಂಘವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು…

ಸುಭದ್ರ ರಾಷ್ಟ್ರದ ನಿರ್ಮಾಣದಲ್ಲಿ ಪುರುಷರಿಗೆ ಸರಿ ಸಮಾನವಾಗಿ ಕೆಲಸ ಮಾಡುತ್ತಾ, ದೇಶವನ್ನು ಅಭಿವೃದ್ಧಿಯ ಪಥದತ್ತ ಮುನ್ನಡೆಸುತ್ತಿರುವ ಹೆಣ್ಣು ಮಕ್ಕಳು ತಮ್ಮಲ್ಲಿನ ಕೀಳರಿಮೆಯನ್ನು ಮೊದಲು ಅಳಿಸಿ ಹಾಕಿ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ಗುಡಿಕೈಗಾರಿಕೆಗಳ ಮೂಲಕ ಸ್ವಯಂ ಉದ್ಯೋಗಿಗಳಾಗಿ ಆರ್ಥಿಕವಾಗಿ ಸಬಲೀಕರಣ ಸಾಧಿಸಿ ಇಡೀ ಸಮಾಜವನ್ನೇ ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ಮನವಿ ಮಾಡಿದ ಸಚಿವರು ಕೃಷಿ ಚಟುವಟಿಕೆಗಳು ಸೇರಿದಂತೆ ಕೂಲಿ ಕೆಲಸವನ್ನು ಮಾಡುತ್ತಿರುವ ಹೆಣ್ಣು ಮಕ್ಕಳು ಸಂಘಟಿತರಾಗಿ ಸ್ವಸಹಾಯ ಸಂಘವನ್ನು ಆರಂಭಿಸಿರುವುದು ಸಂತೋಷದ ಸಂಗತಿಯಾಗಿದೆ. ಮಹಿಳೆಯರು ಸಂಘಟಿತರಾಗಿ ತಮಗೆ ಸಂವಿಧಾನಬದ್ಧವಾಗಿ ದೊರೆಯಬಹುದಾದ ಸೌಲಭ್ಯಗಳನ್ನು ಪಡೆದುಕೊಂಡು ತಾವೂ ಅಭಿವೃದ್ಧಿ ಸಾಧಿಸಿ ಸಮಾಜ ಸೇರಿದಂತೆ ಕುಟುಂಬವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯಬೇಕು ಎಂದು ಕರೆ ನೀಡಿದರು..

ಹೆಮ್ಮಡಹಳ್ಳಿಯಲ್ಲಿಯೇ ಪಡಿತರ ವಸ್ತುಗಳ ವಿತರಣೆಗೆ ಕ್ರಮ .. ಬಳ್ಳೇಕೆರೆ ಪ್ರಾಥಮಿಕ ಪತ್ತಿನ ಸಹಕಾರ ಸಂಘವು ಹೆಮ್ಮಡಹಳ್ಳಿಯಿಂದ ಎರಡು ಕಿ.ಮೀ ದೂರದಲ್ಲಿದ್ದು ಬಳ್ಳೇಕೆರೆ ಗ್ರಾಮಕ್ಕೆ ಹೋಗಿ ಪಡಿತರ ತರಲು ತೊಂದರೆಯಾಗುತ್ತಿರುವ ಬಗ್ಗೆ ಗ್ರಾಮಸ್ಥರು ಮನವಿ ಸಲ್ಲಿಸಿ ಹೆಮ್ಮಡಹಳ್ಳಿ ಗ್ರಾಮದಲ್ಲಿ ಪಡಿತರ ವಿತರಿಸಲು ಉಪಕೇಂದ್ರ ತೆರೆದು
ಗ್ರಾಮದ ಮಹಿಳೆಯರ ಬೇಡಿಕೆಯಂತೆ ಹೆಮ್ಮಡಹಳ್ಳಿ ಗ್ರಾಮದಲ್ಲಿಯೇ ಪಡಿತರ ವಸ್ತುಗಳನ್ನು ವಿತರಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಲ್ಲಿ ಚರ್ಚೆ ನಡೆಸಿ ಮನವಿ ಮಾಡಿದ್ದೇನೆ. ಈ ತಿಂಗಳಿನಿAದ ಗ್ರಾಮದಲ್ಲಿಯೇ ಪಡಿತರ ವಿತರಿಸಲಾಗುವುದು. ಗ್ರಾಮಸ್ಥರು ತಮ್ಮ ಗ್ರಾಮದಲ್ಲಿಯೇ ನೆಮ್ಮದಿಯಿಂದ ಪಡಿತರ ಪಡೆಯಬೇಕು ಎಂದು ಹೇಳಿದರು.

ಹೆಮ್ಮಡಹಳ್ಳಿ ಕೂಲಿ ಕಾರ್ಮಿಕರ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಗೀತಮ್ಮ ಗೋಪಾಲೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು..

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಕಿಕ್ಕೇರಿ ಗ್ರಾಮ ಪಂಚಾಯತಿ ಮಾಜಿಅಧ್ಯಕ್ಷ ಕೇಶವಮೂರ್ತಿ, ಜಿಲ್ಲಾ ಪಂಚಾಯತಿ ಮಾಜಿಉಪಾಧ್ಯಕ್ಷ ಕಿಕ್ಕೇರಿ ಪ್ರಭಾಕರ್, ಜಿಲ್ಲಾ ತೋಟದ ಬೆಳೆಗಾರರ ಸಂಘದ ಅಧ್ಯಕ್ಷ ಕೆ.ಜಿ.ತಮ್ಮಣ್ಣ, ಗ್ರಾಮದ ಮುಖಂಡರಾದ ಹೆಚ್.ರಾಮೇಗೌಡ, ತಿಮ್ಮೇಗೌಡ, ಮಂಜೇಗೌಡ, ಯೋಗಣ್ಣ, ವಿಜಯಕುಮಾರ್, ಗೋವಿಂದೇಗೌಡ, ಹೆಚ್.ಕೆ.ಹನುಮೇಗೌಡ, ಬೂಕನಕೆರೆ ಗ್ರಾಮ ಪಂಚಾಯತಿ ಸದಸ್ಯ ವೆಂಕಟೇಶ್, ಪುರಸಭಾ ಸದಸ್ಯ ಕೆ.ಆರ್.ನೀಲಕಂಠ, ನಾಯಕನಹಳ್ಳಿ ಮಹೇಶ್, ಜಾಗಿನಕೆರೆ ನಾರಾಯಣಗೌಡ, ಸ್ವಸಹಾಯ ಸಂಘದ ಕಾರ್ಯದರ್ಶಿ ಶೀಲಾಮಹೇಶ್, ಉಪಾಧ್ಯಕ್ಷೆ ಸುನಿತಾಶ್ರೀಕಂಠೇಗೌಡ, ಖಜಾಂಚಿ ಅರುಣಿನಾಗರಾಜು, ಸಹಕಾರ್ಯದರ್ಶಿಗಳಾದ ಮೀನಾಕ್ಷಿ, ಜ್ಯೋತಿ ಉಮೇಶ್, ಶೃತಿ ನಾಗೇಂದ್ರ, ಸಣ್ಣತಾಯಮ್ಮ, ಸುಮಾನಾಗೇಶ್ ಸಂಘಟನಾ ಕಾರ್ಯದರ್ಶಿ ಕಲ್ಯಾಣಮ್ಮ ಸೇರಿದಂತೆ ಗ್ರಾಮದ ನೂರಾರು ಮಹಿಳೆಯರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: