April 29, 2024

Bhavana Tv

Its Your Channel

ಕೆ.ಆರ್.ಪೇಟೆಯಲ್ಲಿ ಹಸಿರುಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಅವರ 36ನೇ ಪುಣ್ಯಸ್ಮರಣೆ ಕಾರ್ಯಕ್ರಮ

ಕೆ.ಆರ್.ಪೇಟೆಯಲ್ಲಿ ಹಸಿರುಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಅವರ 36ನೇ ಪುಣ್ಯಸ್ಮರಣೆ ಕಾರ್ಯಕ್ರಮ ಆಚರಣೆ..ಮುಗಿಲು ಮುಟ್ಟಿದ ಸಂಭ್ರಮ..ಬಾಬೂಜಿ ಗುಣಗಾನ ಮಾಡಿದ ಗಣ್ಯರು ..

ಕೃಷ್ಣರಾಜಪೇಟೆ ತಾಲ್ಲೂಕು ಆಡಳಿತದ ವತಿಯಿಂದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಹಸಿರುಕ್ರಾಂತಿಯ ಹರಿಕಾರ ಬಾಬೂ ಜಗಜೀವನರಾಂ ಅವರ ೩೬ನೇ ಪುಣ್ಯತಿಥಿ ಆಚರಣೆ..ಬಾಬೂಜಿ ಅವರ ನಿಸ್ವಾರ್ಥ ಸೇವೆಯನ್ನು ಸ್ಮರಿಸಿದ ಗಣ್ಯರು..

ದೇಶದ ಆಹಾರ ಭದ್ರತೆಗೆ ಅಮೂಲ್ಯವಾದ ಕಾಣಿಕೆಯನ್ನು ನೀಡಿ ಶೋಷಿಯರು ಹಾಗೂ ತುಳಿತಕ್ಕೊಳಗಾದ ಜನರಿಗೆ ವಿವಿಧ ಯೋಜನೆಗಳನ್ನು ನೀಡಿ ಆತ್ಮವಿಶ್ವಾಸ ತುಂಬಿರುವ ಬಾಬೂ ಜಗಜೀವನರಾಂ ದೇಶದ ಉಪಪ್ರಧಾನ ಮಂತ್ರಿಗಳಾಗಿ, ಕಾರ್ಮಿಕ ಹಾಗೂ ಕೃಷಿ ಸಚಿವರಾಗಿ ದೇಶದ ಮುನ್ನಡೆಗೆ ಅಪಾರವಾದ ಕೊಡುಗೆ ನೀಡಿ ತಮ್ಮ ಹೆಜ್ಜೆ ಗುರುತು ಮೂಡಿಸಿದ್ದಾರೆ ಎಂದು ತಹಶೀಲ್ದಾರ್ ಎಂ.ವಿ.ರೂಪ ಗುಣಗಾನ ಮಾಡಿದರು..

ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಮಹೇಶ್ ಬಾಬೂಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಇಂದಿನ ಯುವಜನರು ಬಾಬೂ ಜಗಜೀವನರಾಂ ಅವರ ಜೀವನದ ಆದರ್ಶಗಳನ್ನು ಪಾಲಿಸುವ ಮೂಲಕ ಬದಲಾವಣೆಯ ದಿಕ್ಕಿನತ್ತ ಸಾಗಬೇಕು.. ನಿಸ್ವಾರ್ಥ ಸೇವೆ ಹಾಗೂ ಪರೋಪಕಾರ ಗುಣಗಳು ಜೀವನದ ಉಸಿರಾಗಬೇಕು ಎಂದು ಮನವಿ ಮಾಡಿದರು..

ಕೃಷ್ಣರಾಜಪೇಟೆ ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ರಾಜಯ್ಯ, ದಲಿತ ಮುಖಂಡರಾದ ಬಿಬಿ ಕಾವಲು ಕಾಂತರಾಜು, ಮುದುಗೆರೆ ಮಹೇಂದ್ರ, ಪುಟ್ಟರಾಜು ಶಿವನಂಜಯ್ಯ, ತಾಲ್ಲೂಕು ಬಿಸಿಎಂ ಅಧಿಕಾರಿ ವೆಂಕಟೇಶ್, ಬಿಇಓ ಸೀತಾರಾಮ್, ಉಪತಹಶೀಲ್ದಾರ್ ಲಕ್ಷ್ಮೀಕಾಂತ್, ತಾಲ್ಲೂಕು ಕಂದಾಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷೆ ಚಂದ್ರಕಲಾ, ತಾಲ್ಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಬಾಬೂಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು..

ವರದಿ.. ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: