May 4, 2024

Bhavana Tv

Its Your Channel

ಜುಲೈ 11 ರಂದು ಕಬ್ಬು ಬೆಳೆಗಾರರು ಹಾಗೂ ರೈತರಿಂದ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮನೆಗೆ ಮುತ್ತಿಗೆ

ಕೃಷ್ಣರಾಜಪೇಟೆ :- ಜುಲೈ 11 ರಂದು ಕಬ್ಬು ಬೆಳೆಗಾರರು ಹಾಗೂ ರೈತರಿಂದ ಬೆಂಗಳೂರಿನಲ್ಲಿ ಸಿಎಂ ಬಸವರಾಜಬೊಮ್ಮಾಯಿ ಮನೆಗೆ ಮುತ್ತಿಗೆ, ಬೃಹತ್ ಪ್ರತಿಭಟನಾ ಸಭೆ..ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮಂಡ್ಯ ಜಿಲ್ಲಾ ರೈತಸಂಘದ ಅಧ್ಯಕ್ಷ ಕೆಂಪೂಗೌಡ ಮನವಿ …

ಕಬ್ಬು ಬೆಳೆ ನಿಗಧಿ ಮತ್ತು ಕಬ್ಬಿನ ಹಳೆಯ ಬಾಕಿ ಪಾವತಿಗಾಗಿ ಒತ್ತಾಯಿಸಿ ಹಾಗೂ ಭಾಗ್ಯಜ್ಯೋತಿ ಯೋಜನೆಯಲ್ಲಿ ವಿದ್ಯುತ್ ಸಂಪರ್ಕ ಪಡೆದಿರುವ ಮನೆಗಳ ಮಾಲೀಕರಿಂದ ಬಲಾತ್ಕಾರವಾಗಿ ಹಣ ವಸೂಲಿ ಮಾಡುತ್ತಿರುವುದನ್ನು ಪ್ರತಿಭಟಿಸಿ ರಾಜ್ಯದಾದ್ಯಂತ ಸಾವಿರಾರು ಸಂಖ್ಯೆಯಲ್ಲಿ ರೈತರು ಜುಲೈ 11 ರಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ರೈತಸಂಘದ ಅಧ್ಯಕ್ಷ ಎ.ಎಲ್.ಕೆಂಪೇಗೌಡರ ನೇತೃತ್ವದಲ್ಲಿ ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ರೈತಸಂಘದ ಕಾರ್ಯಕರ್ತರ ಸಭೆಯು ನಡೆಯಿತು..

ಮಾರುಕಟ್ಟೆಯಲ್ಲಿ ಎಲ್ಲಾ ಪದಾರ್ಥಗಳ ಬೆಲೆಯು ಗಗನಕ್ಕೇರುತ್ತಿದ್ದರೂ ರಾಜ್ಯ ಸರ್ಕಾರವು ರೈತರು ಬೆಳೆವ ಕಬ್ಬಿಗೆ ಮಾತ್ರ ವೈಜ್ಞಾನಿಕವಾಗಿ ದರವನ್ನು ನಿಗಧಿಪಡಿಸಿ ರೈತರಿಗೆ ಅನುಕೂಲ ಮಾಡಿಕೊಡುವ ಬದಲಿಗೆ ಎಫ್.ಆರ್.ಪಿ ದರನಿಗಧಿ ಹೆಸರಿನಲ್ಲಿ ಕಬ್ಬು ಬೆಳೆಗಾರರನ್ನು ವಂಚಿಸುತ್ತಾ ಸಕ್ಕರೆ ಕಾರ್ಖಾನೆಗಳ ಮಾಲೀಕರ ಕೈಗೊಂಬೆಯAತೆ ವರ್ತಿಸುತ್ತಿರುವುದು ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಕೆಂಪೂಗೌಡ ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿಯಿದ್ದರೆ ಪ್ರತೀ ಟನ್ ಕಬ್ಬಿಗೆ 4500 ರೂ ನಿಗಧಿಪಡಿಸಿ ಸಂಕಷ್ಠದಲ್ಲಿರುವ ರೈತರ ನೆರವಿಗೆ ದಾವಿಸಿಬರಬೇಕು ಎಂದು ಆಗ್ರಹಿಸಿದರು..
ಭಾಗ್ಯಜ್ಯೋತಿ ಯೋಜನೆಯ ಅಡಿಯಲ್ಲಿ ಉಚಿತ ವಿದ್ಯುತ್ ಸಂಪರ್ಕ ಪಡೆದಿರುವ ಬಡಜನರ ಬಳಿ ಬಲವಂತವಾಗಿ ಹಣವಸೂಲಿ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕರನಿರಾಕರಣೆ ಚಳವಳಿ ನಡೆಸಲಾಗುವುದು ಎಂದು ಎಚ್ಚರಿಸಿದ ರೈತಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ಜುಲೈ 11 ರಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಪಾಂಡವಪುರ ರೈಲ್ವೆ ನಿಲ್ದಾಣದಿಂದ ಟಿಕೆಟ್ ಪಡೆಯದೇ ಸಾವಿರಾರು ರೈತರು ಬೆಂಗಳೂರಿಗೆ ಪ್ರಯಾಣ ಮಾಡಲಿದ್ದು ಕೆ.ಆರ್.ಪೇಟೆ ತಾಲ್ಲೂಕಿನಿಂದಲೂ ಸಾವಿರಾರು ಸಂಖ್ಯೆಯಲ್ಲಿ ರೈತಬಾಂಧವರು ಭಾಗವಹಿಸುವ ಮೂಲಕ ರೈತರ ನ್ಯಾಯಪರವಾದ ಹೋರಾಟಕ್ಕೆ ಶಕ್ತಿತುಂಬಬೇಕು ಎಂದು ಕೆಂಪೂಗೌಡ ಕೈಮುಗಿದು ಮನವಿ ಮಾಡಿದರು..

ರೈತರ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದ ರೈತನಾಯಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವು ರೈತವಿರೋಧಿ ಸರ್ಕಾರಗಳಾಗಿವೆ. ಜಡ್ಡುಗಟ್ಟಿರುವ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ರೈತರು ಒಂದಾಗಿ ಸಿಎಂ ಬಸವರಾಜಬೊಮ್ಮಾಯಿ ಅವರ ಮನೆಯ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದು ರೈತರ ಹೋರಾಟಕ್ಕೆ ಶಕ್ತಿತುಂಬುವ ಕೆಲಸ ಮಾಡಬೇಕು ಎಂದು ದರ್ಶನ್ ಪುಟ್ಟಣ್ಣಯ್ಯ ಕರೆ ನೀಡಿದರು.

ರೈತರ ಸಮಾಲೋಚನಾ ಸಭೆಯಲ್ಲಿ ಕೃಷ್ಣರಾಜಪೇಟೆ ತಾಲ್ಲೂಕು ರೈತಸಂಘದ ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ, ಕಾರ್ಯದರ್ಶಿ ಬೂಕನಕೆರೆ ನಾಗರಾಜು, ರೈತಮುಖಂಡರಾದ ಮುದುಗೆರೆ ರಾಜೇಗೌಡ, ಮರುವನಹಳ್ಳಿ ಶಂಕರ್, ಲಕ್ಷ್ಮೀಪುರ ಜಗಧೀಶ್, ಚೌಡೇನಹಳ್ಳಿ ಕೃಷ್ಣೇಗೌಡ, ಮುದ್ದುಕುಮಾರ್, ಪಿಬಿ ಮಂಚನಹಳ್ಳಿ ನಾಗಣ್ಣಗೌಡ, ನೀತಿಮಂಗಲ ಮಹೇಶ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು..
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ .

error: