May 4, 2024

Bhavana Tv

Its Your Channel

ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ

ಕೆ.ಆರ್.ಪೇಟೆ :-* ಮಕ್ಕಳಿಗೆ ಸಂವಿಧಾನಬದ್ಧವಾಗಿ ದೊರೆಯಬೇಕಾದ ಸೌಲಭ್ಯಗಳನ್ನು ಕೊಡಿಸಿ ಸಾಧನೆ ಮಾಡಲು ಅವಕಾಶ ಮಾಡಿಕೊಡುವ ಮೂಲಕ ಮಕ್ಕಳ ಹಕ್ಕುಗಳನ್ನು ಸಂರಕ್ಷಣೆ ಮಾಡಲು ನಾಗರಿಕ ಸಮಾಜದ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಕೆ.ಆರ್.ಪೇಟೆ ಪಟ್ಟಣದ ಜೆಎಂಎಫ್ ಸಿ ಸಿವಿಲ್ ನ್ಯಾಯಾಲಯದ ಕಿರಿಯಶ್ರೇಣಿ ನ್ಯಾಯಾಧೀಶರಾದ ಹೆಚ್. ಓಂಕಾರಮೂರ್ತಿ ಮನವಿ ಮಾಡಿದರು ..

ಅವರು ಕೆ.ಆರ್.ಪೇಟೆ ಪಟ್ಟಣದ ಗ್ರಾಮಭಾರತಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು..

ಆಟಪಾಟವಾಡಿಕೊಂಡು ಕಾಲ ಕಳೆದು ಭವಿಷ್ಯದ ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕಾದ ಮಕ್ಕಳ ಹಕ್ಕುಗಳನ್ನು ಧಮನ ಮಾಡಿ ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿ ಮಾಡಿ ಶೋಷಣೆ ಮಾಡುವುದು, ಶಿಕ್ಷಣದಿಂದ ವಂಚಿಸಿ ಮನೆಗೆಲಸ ಮಾಡಿಕೊಳ್ಳುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಮಕ್ಕಳ ಹಕ್ಕುಗಳನ್ನು ಧಮನ ಮಾಡುವ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಶಿಕ್ಷೆಗೆ ಒಳಪಡಿಸಲಾಗುವುದು ಆದ್ದರಿಂದ ಮಕ್ಕಳಿಗೆ ಸಿಗಬೇಕಾದ ಶಿಕ್ಷಣ ಸೇರಿದಂತೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕೊಡಿಸುವ ಬದ್ಧತೆಯನ್ನು ತಂದೆತಾಯಿಗಳು ಹಾಗೂ ಪೋಷಕರು ಪ್ರದರ್ಶನ ಮಾಡಿ ಇತರರಿಗೆ ಮಾದರಿಯಾಗಬೇಕು ಎಂದು ನ್ಯಾಯಾಧೀಶರಾದ ಹೆಚ್. ಓಂಕಾರಮೂರ್ತಿ ಕರೆ ನೀಡಿದರು.

ವಕೀಲರ ಸಂಘದ ಅಧ್ಯಕ್ಷ ಎನ್.ಆರ್.ರವಿಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.. ತಹಶೀಲ್ದಾರ್ ಎಂ.ವಿ.ರೂಪ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಮಾತನಾಡಿದರು..

ಗ್ರಾಮಭಾರತಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಹೆಚ್.ಎಸ್.ಕೃಷ್ಣ, ಸಿಡಿಪಿಓ ಅರುಣಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಸೀತಾರಾಮ್, ವಕೀಲರ ಸಂಘದ ಕಾರ್ಯದರ್ಶಿ ಆರ್.ಕೆ.ರಾಜೇಗೌಡ, ಸರ್ಕಾರಿ ಅಭಿಯೋಜಕ ಬಿ.ಸಿ.ರಾಜೇಶ್, ವಕೀಲರ ಸಂಘದ ಪದಾಧಿಕಾರಿಗಳಾದ ಜಗಧೀಶ್, ಬಿ.ಎಸ್.ಪ್ರಭಾಕರ್, ಬೊಮ್ಮೇನಹಳ್ಳಿ ಹರ್ಷ, ಅರುಣ್ ಕುಮಾರ್ ಮತ್ತು ಮಕ್ಕಳ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು..
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ
.

error: