May 18, 2024

Bhavana Tv

Its Your Channel

ವಿದ್ಯಾರ್ಥಿಗಳು ಏಕಾಗ್ರತೆಯಿಂದ ವ್ಯಾಸಂಗ ಮಾಡಿ ಗುರಿ ಸಾಧನೆ ಮಾಡಬೇಕು -ಎಂ.ಆರ್.ಪ್ರಸನ್ನಕುಮಾರ್

ಕೆ.ಆರ್.ಪೇಟೆ :- ವಿದ್ಯಾರ್ಥಿಗಳು ಏಕಾಗ್ರತೆಯಿಂದ ವ್ಯಾಸಂಗ ಮಾಡಿ ಗುರಿ ಸಾಧನೆ ಮಾಡಬೇಕು ಎಂದು ತಾಲ್ಲೂಕು ವಕೀಲರ ಸಂಘದ ಮಾಜಿಅಧ್ಯಕ್ಷ ಎಂ.ಆರ್.ಪ್ರಸನ್ನಕುಮಾರ್ ಹೇಳಿದರು ..

ಅವರು ಇಂದು ಕೆ.ಆರ್.ಪೇಟೆ ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ದತ್ತಿನಿಧಿ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು..

ಜಾಗತಿಕ ಜಗತ್ತಿನ ಇಂದಿನ ಸ್ಪರ್ಧಾ ಪ್ರಪಂಚದಲ್ಲಿ ನಗರ ಪ್ರದೇಶದ ವಿದ್ಯಾರ್ಥಿಗಳು ಒಡ್ಡುವ ತೀವ್ರವಾದ ಸ್ಪರ್ಧೆಯನ್ನು ಎದುರಿಸಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಗುರಿಯನ್ನು ಸಾಧನೆ ಮಾಡಬೇಕಾಗಿರುವುದರಿಂದ ವಿದ್ಯಾರ್ಥಿಗಳು ಶ್ರದ್ಧೆಯಿಂದ ವ್ಯಾಸಂಗ ಮಾಡಿ ಆತ್ಮವಿಶ್ವಾಸದಿಂದ ಗುರಿಮುಟ್ಟಬೇಕು..ಧತ್ತಿನಿಧಿಯ ಮೂಲಕ ಬರುವ ಬಡ್ಡಿಯ ಹಣದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಧನಸಹಾಯ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕೆಲಸವನ್ನು ಮಾಡಲಾಗುತ್ತಿದೆ. ಸ್ವಾರ್ಥವೇ ತುಂಬಿರುವ ಇಂದಿನ ಸಮಾಜದಲ್ಲಿ ಉಳ್ಳವರು ತಾವು ಗಳಿಸಿರುವ ಹಣದಲ್ಲಿ ಅಲ್ಪ ಭಾಗವನ್ನು ಬಡವರು ಹಾಗೂ ಧೀನ ದಲಿತರಿಗೆ ದಾನ ಮಾಡಬೇಕು. ಬಡಜನರ ಸೇವೆಯಲ್ಲಿ ಭಗವಂತನನ್ನು ಕಾಣಬೇಕು ಎಂಬ ಆಶಯದಿಂದ ದತ್ತಿನಿಧಿಯನ್ನು ಸ್ಥಾಪಿಸಲಾಗಿದೆ.ಇಂತಹ ದತ್ತಿನಿಧಿಗಳನ್ನು ಹೆಚ್ಚಾಗಿ ಸ್ಥಾಪಿಸುವ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿಕಾಸಕ್ಕೆ ಸಹಾಯವಾಗುವಂತಾಗಬೇಕು ಎಂದು ಪ್ರಸನ್ನಕುಮಾರ್ ಮನವಿ ಮಾಡಿದರು..

ಕಾಲೇಜಿನ ಪ್ರಾಂಶುಪಾಲರಾದ ಡಾ.ಟಿ.ಎಂ.ದೇವರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದತ್ತಿನಿಧಿಯ ಪ್ರೋತ್ಸಾಹ ಧನದ ಚೆಕ್ ಗಳನ್ನು ವಿತರಿಸಿ ವಿದ್ಯಾರ್ಥಿಗಳು ಶ್ರಧ್ಧಾಭಕ್ತಿಯಿಂದ ವ್ಯಾಸಂಗ ಮಾಡಿ ಗುರಿ ಮುಟ್ಟಬೇಕು. ಸೇವಾ ಮನೋಭಾವನೆ ಹಾಗೂ ಪರೋಪಕಾರ ಗುಣಗಳು ಜೀವನದ ಉಸಿರಾಗಬೇಕು ಎಂದು ದೇವರಾಜು ಹೇಳಿದರು..

ಕಾಲೇಜಿನ ಪತ್ರಾಂಕಿತ ಅಧೀಕ್ಷಕ ಬಿ.ಎ.ಮಂಜುನಾಥ್, ಪುರಸಭಾ ಸದಸ್ಯ ಕೆ.ಆರ್.ನೀಲಕಂಠ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಹಾಯಕ ಪ್ರಾಧ್ಯಾಪಕರಾದ ಮಂಜುನಾಥ್, ನಂಜುAಡಯ್ಯ, ಧನಂಜಯ, ಶ್ಯಾಮ್, ಪತ್ರಕರ್ತ ಸೈಯ್ಯದ್ ಖಲೀಲ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ .

error: