May 19, 2024

Bhavana Tv

Its Your Channel

ಬೆಡದಹಳ್ಳಿಯ ಶ್ರೀ ಪಂಚಭೂತೇಶ್ವರ ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ಡಾ.ನಾರಾಯಣಗೌಡ

ಕೃಷ್ಣರಾಜಪೇಟೆ ;-ರಾಜ್ಯದ ಯುವಸಬಲೀಕರಣ ಕ್ರೀಡೆ ಹಾಗೂ ರೇಷ್ಮೆ ಸಚಿವರಾದ ಡಾ.ನಾರಾಯಣಗೌಡ ಕೃಷ್ಣರಾಜಪೇಟೆ ತಾಲ್ಲೂಕಿನ ಪವಿತ್ರ ಪುಣ್ಯಕ್ಷೇತ್ರವಾದ ಬೆಡದಹಳ್ಳಿಯ ಶ್ರೀ ಪಂಚಭೂತೇಶ್ವರ ಕ್ಷೇತ್ರಕ್ಕೆ ಭೇಟಿ ನೀಡಿ ಕ್ಷೇತ್ರಪಾಲಕ ಶ್ರೀ ಪಂಚಭೂತೇಶ್ವರ ಹಾಗೂ ಲೋಕರಕ್ಷಕಿ ಜಗನ್ಮಾತೆ ಶ್ರೀ ಪಾರ್ವತಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿದರು …

ಪಂಚಭೂತೇಶ್ವರ ಕ್ಷೇತ್ರಕ್ಕೆ ಆಗಮಿಸಿದ ರಾಜ್ಯದ ಯುವಸಬಲೀಕರಣ ಕ್ರೀಡೆ ಹಾಗೂ ರೇಷ್ಮೆ ಸಚಿವರಾದ ಡಾ.ನಾರಾಯಣಗೌಡ ಹಾಗೂ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್ ಅವರನ್ನು ಕ್ಷೇತ್ರದ ಪೀಠಾಧ್ಯಕ್ಷರಾದ ರುದ್ರಮುನಿ ಸ್ವಾಮೀಜಿಯವರು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡರು..

ಶ್ರೀ ಪಾರ್ವತಿ ಅಮ್ಮನವರು ಹಾಗೂ ಪಂಚಭೂತೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಸಚಿವ ನಾರಾಯಣಗೌಡ ಲೋಕಕಲ್ಯಾಣಾರ್ಥವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶ್ರೀ ಕ್ಷೇತ್ರವು ದಿನದಿಂದ ದಿನಕ್ಕೆ ಪ್ರವರ್ಧಮಾನಕ್ಕೆ ಬರುತ್ತಿದೆ. ರಾಜ್ಯದಾದ್ಯಂತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಂಚಭೂತೇಶ್ವರ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ ಆದ್ದರಿಂದ ಭಕ್ತರು ಕ್ಷೇತ್ರದಲ್ಲಿ ಉಳಿದು ಭಗವಂತನ ಪೂಜೆ ಪುರಸ್ಕಾರಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ಒಂದು ಸುಸಜ್ಜಿತವಾದ ಯಾತ್ರಿನಿವಾಸದ ಕಟ್ಟಡವನ್ನು ನಿರ್ಮಿಸಲು ಸಹಾಯ ಮಾಡುವುದಾಗಿ ಭರವಸೆ ನೀಡಿದ ಸಚಿವರು ಶ್ರೀ ಕ್ಷೇತ್ರದ ವತಿಯಿಂದ ನೀಡಿದ ಹೃದಯಸ್ಪರ್ಶಿ ಅಭಿನಂದನೆ ಸ್ವೀಕರಿಸಿ ಪಂಚಭೂತೇಶ್ವರ ಕ್ಷೇತ್ರದ ಸಮಾಜಮುಖಿ ಕೆಲಸ ಕಾರ್ಯಗಳನ್ನು ಶ್ಲಾಘಿಸಿದರು..

ಇಂದಿನ ಒತ್ತಡದ ಜೀವನದಲ್ಲಿ ಮಾನವರಾದ ನಾವು ಮನಸ್ಸಿಗೆ ಶಾಂತಿ ನೆಮ್ಮದಿಯನ್ನು ಪಡೆಯಲು ದೇವರು ಮತ್ತು ಧರ್ಮದ ಮಾರ್ಗದಲ್ಲಿ ಸಾಗುವುದು ಅನಿವಾರ್ಯವಾಗಿದೆ. ಮನಸ್ಸಿನ ದುಗುಡ ಹಾಗೂ ಕ್ಲೇಷವನ್ನು ಕಳೆಯಲು ನ್ಯಾಯ, ನೀತಿ, ಸತ್ಯ ಹಾಗೂ ಧರ್ಮದ ದಾರಿಯಲ್ಲಿಯೇ ಸಾಗಬೇಕು. ನೂರು ದೇವರುಗಳನ್ನು ಪೂಜಿಸಿ ದೂರದ ಕ್ಷೇತ್ರಗಳಿಗೆ ಹೋಗಿ ಪೂಜೆ ಪುರಸ್ಕಾರಗಳನ್ನು ಮಾಡಿ ಮನೆಯಲ್ಲಿರುವ ವಯಸ್ಸಾದ ತಂದೆತಾಯಿಗಳನ್ನು ಕಡೆಗಣಿಸದೇ ತಂದೆತಾಯಿಗಳು ಹಾಗೂ ಗುರುಹಿರಿಯರಿಗೆ ಶ್ರದ್ಧಾ ಭಕ್ತಿಯಿಂದ ಸೇವೆ ಮಾಡುವ ಮೂಲಕ ಭಗವಂತನ ಒಲುಮೆಗೆ ಪಾತ್ರರಾಗಬೇಕು ಎಂದು ಸಚಿವ ನಾರಾಯಣಗೌಡ ಮನವಿ ಮಾಡಿದರು..

ಇದೇ ಸಂದರ್ಭದಲ್ಲಿ ಸಚಿವ ನಾರಾಯಣಗೌಡ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಪುರಸಭೆ ಸದಸ್ಯ ಡಾ.ಕೆ.ಎಸ್.ರಾಜೇಶ್, ಭಾರತೀಪುರ ಕ್ರಾಸ್ ಗ್ರಾಮ ಪಂಚಾಯತಿ ಅಧ್ಯಕ್ಷ- ಉಪಾಧ್ಯಕ್ಷ ಹಾಗೂ ಮುಖಂಡರನ್ನು ಶ್ರೀ ಕ್ಷೇತ್ರದ ವತಿಯಿಂದ ರುದ್ರಮುನಿ ಸ್ವಾಮೀಜಿಯವರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಅಭಿವೃದ್ಧಿ ಟ್ರಸ್ಟ್ ಕಾರ್ಯದರ್ಶಿ ಕಾಂತಪ್ಪ, ಸಂಚಾಲಕ ಕಾಡುಮೆಣಸ ಚಂದ್ರು ಮತ್ತಿತರರು ಉಪಸ್ಥಿತರಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ . ಕೃಷ್ಣರಾಜಪೇಟೆ , ಮಂಡ್ಯ

error: