May 15, 2024

Bhavana Tv

Its Your Channel

ಭೂವರಹನಾಥಸ್ವಾಮಿ ಕ್ಷೇತ್ರಕ್ಕೆ ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಭೇಟಿ

ಕೃಷ್ಣರಾಜಪೇಟೆ ತಾಲ್ಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಭೂವರಹನಾಥಸ್ವಾಮಿ ಕ್ಷೇತ್ರಕ್ಕೆ ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಭೇಟಿ ನೀಡಿದರು.ಶ್ರೀ ಲಕ್ಷ್ಮೀ ಸಮೇತನಾಗಿ ನೆಲೆಸಿರುವ ಭೂವರಹನಾಥಸ್ವಾಮಿಯ ೧೭ ಅಡಿ ಎತ್ತರದ ಬೃಹತ್ ಶಿಲಾಮೂರ್ತಿಯ ಕಲಾ ವೈಭವಕ್ಕೆ ಮನಸೋತ ಸಚಿವ ನಾಗೇಶ್…

ಶ್ರೀ ಕ್ಷೇತ್ರವು ಮೈಸೂರಿನ ಪರಕಾಲ ಮಠದ ನೇತೃತ್ವದಲ್ಲಿ ಸಮಗ್ರವಾಗಿ ಅಭಿವೃದ್ಧಿಯಾಗುತ್ತಿದೆ. ಮುಂದೊAದು ದಿನ ತಿರುಮಲ ತಿರುಪತಿ ಕ್ಷೇತ್ರದಂತೆ ಭೂವೈಕುಂಠವಾಗಿ ಪ್ರಸಿದ್ಧಿ ಹೊಂದಲಿದೆ ಎಂದು ಭವಿಷ್ಯ ನುಡಿದ ಸಚಿವರು..

ದೇವಾಲಯವನ್ನು ಹೊಯ್ಸಳ ವಾಸ್ತುಶಿಲ್ಪದ ಮಾದರಿಯಲ್ಲಿ ಮೂರು ಪ್ರಾಕಾರಗಳ ದೇವಾಲಯವನ್ನು ನಿರ್ಮಾಣ ಮಾಡಲಾಗುತ್ತಿದೆ. ಶ್ರೀ ಕ್ಷೇತ್ರದ ದರ್ಶನ ಮಾಡಿ ಮನಸ್ಸು ಹಗುರವಾಗಿದೆ.

ನಮ್ಮ ದೇಶದ ಸಂಸ್ಕೃತಿ ಹಾಗೂ ಪರಂಪರೆಯ ಬಗ್ಗೆ ಬೆಳಕು ಚೆಲ್ಲುವ ಜೀವಂತ ಸ್ಮಾರಕಗಳಾದ ದೇವಾಲಯಗಳನ್ನು ಸಂರಕ್ಷಿಸಿ ನಮ್ಮ ಮುಂದಿನ ತಲೆಮಾರಿಗೆ ಜೋಪಾನ ಮಾಡಬೇಕಾಗಿರುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ ಎಂದು ಸಚಿವ ನಾಗೇಶ್ ಹೇಳಿದರು…

ಪೂರ್ಣಕುಂಭ ಸ್ವಾಗತ ನೀಡಿ ವೇದಮಂತ್ರಗಳ ಪಠಣೆ ಮಾಡಿದ ಸಚಿವರಿಗೆ ಸ್ವಾಗತ ನೀಡಿದ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮ್ಯಾನೇಜಿಂಗ್ ಟ್ರಸ್ಟಿ ಶ್ರೀನಿವಾಸರಾಘವನ್ ವರಹನಾಥಸ್ವಾಮಿಯ ಶಿಲಾ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ನೀಡಿ ಸಚಿವರನ್ನು ಗೌರವಿಸಿದರು…

ಮಂಡ್ಯ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಟಿ.ಜವರೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಸೀತಾರಾಮ್, ಹೇಮಾವತಿ ಜಲಾಶಯ ಯೋಜನೆಯ ಕಾರ್ಯಪಾಲಕ ಎಂಜಿನಿಯರ್ ಕಿಜರ್ ಅಹಮದ್, ಎಇಇ ದೇವೇಗೌಡ, ಕೆ.ಆರ್.ಪೇಟೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಜೆ.ಕುಮಾರ್, ಜನಮೆಚ್ಚಿದ ಶಿಕ್ಷಕರಾದ ಭಗವಾನ್, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕರಾದ ಸಿ.ಎನ್.ಯತೀಶ್, ಶಿಕ್ಷಣ ಸಂಯೋಜಕರಾದ ಜ್ಞಾನೇಶ್, ಗ್ರಾಮಾಂತರ ಪೋಲಿಸ್ ಠಾಣೆಯ ಆರಕ್ಷಕ ನಿರೀಕ್ಷಕ ನಿರಂಜನ, ಗಂಜಿಗೆರೆ ಗ್ರಾಮದ ಮುಖಂಡ ವಿಜಯಕುಮಾರ್, ಬೋರೇಗೌಡ, ಧಾದಾಪೀರ್, ರಮೇಶ್ ಮತ್ತಿತರರು ಉಪಸ್ಥಿತರಿದ್ದರು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: