May 3, 2024

Bhavana Tv

Its Your Channel

ಸೆಪ್ಟೆಂಬರ್ 6 ಮತ್ತು 7 ಕ್ಕೆ ಕೆ.ಆರ್.ಪೇಟೆ ಯಲ್ಲಿ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ

ಕೃಷ್ಣರಾಜಪೇಟೆ:- ಸೆಪ್ಟೆಂಬರ್ 6 ಮತ್ತು 7ರಂದು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಎರಡು ದಿನಗಳ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ..ರಾಜ್ಯದ ಯುವಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಡಾ.ನಾರಾಯಣಗೌಡ ಅವರಿಂದ ಕ್ರೀಡಾಕೂಟಕ್ಕೆ ಚಾಲನೆ ..

ಕೃಷ್ಣರಾಜಪೇಟೆ ಪಟ್ಟಣದಲ್ಲಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಾಲ್ಲೂಕು ಮಟ್ಟದ ಎರಡು ದಿನಗಳ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು ಸೆಪ್ಟೆಂಬರ್ 06ಮತ್ತು 07ರಂದು ನಡೆಯಲಿರುವ ಕ್ರೀಡಾಕೂಟಕ್ಕೆ ರಾಜ್ಯದ ಕ್ರೀಡಾ ಸಚಿವರಾದ ಡಾ.ನಾರಾಯಣಗೌಡ ಚಾಲನೆ ನೀಡುವರು ಎಂದು ಕ್ರೀಡಾಕೂಟದ ಆಯೋಜಕರಾದ ಪ್ರಾಂಶುಪಾಲ ಕೆ.ಮೋಹನ್ ತಿಳಿಸಿದ್ದಾರೆ..

ಕೆ.ಆರ್.ಪೇಟೆ ಪಟ್ಟಣದಲ್ಲಿ ಸಚಿವ ನಾರಾಯಣಗೌಡರ ನಿವಾಸದಲ್ಲಿ ಸಚಿವರನ್ನು ಕ್ರೀಡಾಕೂಟಕ್ಕೆ ಆಹ್ವಾನಿಸಿದ ಪ್ರಾಂಶುಪಾಲ ಮೋಹನ್ ಸೆಪ್ಟೆಂಬರ್ 06ರ ಮಂಗಳವಾರ ಕ್ರೀಡಾಕೂಟವು ಉದ್ಘಾಟನೆಯಾಗಲಿದ್ದು ಸೆಪ್ಟೆಂಬರ್ 07ರ ಬುಧವಾರ ಕ್ರೀಡಾಕೂಟದ ಸಮಾರೋಪ ಸಮಾರಂಭವು ನಡೆಯಲಿದೆ. ಆದ್ದರಿಂದ ಕ್ರೀಡಾಪಟುಗಳು ಕ್ರೀಡಾ ಉತ್ಸಾಹ ಹಾಗೂ ಕ್ರೀಡಾ ಮನೋಭಾವನೆಯಿಂದ ಕ್ರೀಡಾ ಕೂಟದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ ಮೋಹನ್ ರಾಜ್ಯದ ಯುವಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಡಾ.ನಾರಾಯಣಗೌಡರ ಸ್ವಕ್ಷೇತ್ರವಾದ ಕೃಷ್ಣರಾಜಪೇಟೆ ಪಟ್ಟಣದ ಪುರಸಭಾ ಕಾರ್ಯಾಲಯದ ಪಕ್ಕದ ವಿಶಾಲವಾದ ಮೈದಾನದಲ್ಲಿ ಅದ್ದೂರಿಯಾಗಿ ನಡೆಯುತ್ತಿರುವ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಯಶಸ್ಸಿಗೆ ಸರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ವಿವರಿಸಿದರು..

ಸಚಿವ ಡಾ.ನಾರಾಯಣಗೌಡ ಮಾತನಾಡಿ ತಾವು ಕ್ರೀಡಾ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಕ್ರೀಡಾ ಇಲಾಖೆಯು ಯಾರಿಗೂ ಬೇಡವಾದ ಇಲಾಖೆ ಎಂದು ಮೂಗು ಮುರಿಯುತ್ತಿದ್ದವರಿಗೆ ಕ್ರೀಡಾ ಇಲಾಖೆಯಲ್ಲಿಯೂ ಸಾಧನೆ ಮಾಡಿ ತೋರಿಸಬಹುದು ಎಂಬುದನ್ನು ಸಾಧಿಸಿ ತೋರಿಸಿಕೊಟ್ಟಿದ್ದೇನೆ. ಪ್ರತೀ ಗ್ರಾಮಗಳಲ್ಲಿಯೂ ಕ್ರೀಡಾಂಗಣಗಳನ್ನು ನಿರ್ಮಿಸಲು ಕ್ರಿಯಾಯೋಜನೆ ರೂಪಿಸಿ ಕಾರ್ಯೋನ್ಮುಖನಾಗಿದ್ದೇನೆ. ಖೇಲೋ ಇಂಡಿಯಾ ಯೂನಿವರ್ಸಿಟಿ ಕ್ರೀಡಾಕೂಟದ ಸ್ಪರ್ಧೆಗಳನ್ನು ಕರ್ನಾಟಕ ರಾಜ್ಯದಲ್ಲಿ ನಡೆಸಿ ಇಡೀ ರಾಷ್ಟ್ರದ ಗಮನ ಸೆಳೆದಿದ್ದೇನೆ. ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ, ಒಲಂಪಿಕ್ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ನೀಡಿ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸುವ ಕೆಲಸ ಮಾಡುತ್ತಿದ್ದೇನೆ. ಯುವಜನರು ಸೋಮಾರಿಗಳಾಗಿ ವ್ಯರ್ಥವಾಗಿ ಕಾಲಹರಣ ಮಾಡದೇ ಸಕ್ರಿಯವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಕ್ರೀಡಾಸ್ಪೂರ್ತಿಯನ್ನು ಮೆರೆಯಬೇಕು. ಸತತವಾದ ಅಭ್ಯಾಸದಿಂದ ಉತ್ತಮವಾದ ಕ್ರೀಡಾಪಟುಗಳಾಗುವ ಮೂಲಕ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಸಾಧನೆ ಮಾಡಬೇಕು ಎಂದು ಮನವಿ ಮಾಡಿದರು..

ಈ ಸಂದರ್ಭದಲ್ಲಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಕೃಷ್ಣರಾಜಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಮನ್ವಯಾಧಿಕಾರಿ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ, ಮಂಡ್ಯ .

error: