April 16, 2025

Bhavana Tv

Its Your Channel

ಕಿತ್ತೂರರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ

ಕೃಷ್ಣರಾಜಪೇಟೆ ತಾಲ್ಲೂಕಿನ ಶೆಟ್ಟನಾಯಕನಕೊಪ್ಪಲು ಗ್ರಾಮದ ಕಿತ್ತೂರರಾಣಿ ಚೆನ್ನಮ್ಮ ವಸತಿ ಶಾಲೆಯ ಮಕ್ಕಳು ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ …

ಮಂಡ್ಯ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ಕ್ರೀಡಾಕೂಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕೃಷ್ಣರಾಜಪೇಟೆ ತಾಲ್ಲೂಕಿನ ಶೆಟ್ಟನಾಯಕನಕೊಪ್ಪಲು ಗ್ರಾಮದ ಕಿತ್ತೂರರಾಣಿ ಚೆನ್ನಮ್ಮ ವಸತಿ ಶಾಲೆಯ ಮಕ್ಕಳು ಪ್ರಥಮ ಸ್ಥಾನ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಂಡ್ಯ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳಾದ ಡಾ.ಹೆಚ್.ಎಲ್.ನಾಗರಾಜು ಅವರು ವಿದ್ಯಾರ್ಥಿನಿಯರಿಗೆ ಟ್ರೋಫಿ ಹಾಗೂ ಪ್ರಶಸ್ತಿಪತ್ರಗಳನ್ನು ವಿತರಿಸಿ ಶುಭ ಕೋರಿದರು…

ಕೆ.ಆರ್.ಪೇಟೆ ತಾಲ್ಲೂಕಿನ ಶೆಟ್ಟನಾಯಕನಕೊಪ್ಪಲು ಕಿತ್ತೂರರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯದಲ್ಲಿ ಗೆದ್ದು ಸಾಧನೆ ಮಾಡಲು ಕಾರಣರಾದ ಕೋಚ್ ಅಶ್ವಿನಿ, ಶಿಕ್ಷಕ ಮಂಜು ಅವರನ್ನು ಶಾಲೆಯ ಪ್ರಾಂಶುಪಾಲರಾದ ಪವಿತ್ರ, ಶಾಲೆಯ ಸಿಬ್ಬಂಧಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ..

ವರದಿ: ಡಾ.ಕೆ.ಆರ್.ನೀಲಕಂಠ. ಕೃಷ್ಣರಾಜಪೇಟೆ. ಮಂಡ್ಯ

error: