May 4, 2024

Bhavana Tv

Its Your Channel

ಕೆ.ಆರ್.ಪೇಟೆ ತಾಲ್ಲೂಕು ವ್ಯಾಪ್ತಿಯ ವಸತಿಶಾಲೆಗಳಲ್ಲಿ ಪೌರಕಾರ್ಮಿಕರ ಮಕ್ಕಳಿಗೆ 6ನೇ ತರಗತಿಗೆ ನೇರ ಪ್ರವೇಶ, ಅವಕಾಶ ಸದ್ಬಳಕೆ ಮಾಡಿಕೊಳ್ಳಲು ಪುರಸಭೆ ಅಧ್ಯಕ್ಷೆ ಮಹಾದೇವಿ ಮನವಿ

ಕೆ.ಆರ್.ಪೇಟೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತಿಗಳು ಸೇರಿದಂತೆ ಕೆ.ಆರ್.ಪೇಟೆ ಪುರಸಭೆಯ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರ ಮಕ್ಕಳಿಗೆ ಮೊರಾರ್ಜಿ ದೇಸಾಯಿ ವಸತಿಶಾಲೆ ಸೇರಿದಂತೆ ಕಿತ್ತೂರರಾಣಿ ಚೆನ್ನಮ್ಮ ವಸತಿಶಾಲೆಯ 6ನೇ ತರಗತಿಗೆ ನೇರವಾಗಿ ಪ್ರವೇಶ ನೀಡಲಾಗುವುದು. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕಿತ್ತೂರರಾಣಿ ಚೆನ್ನಮ್ಮ ವಸತಿಶಾಲೆಯ ಪ್ರಾಂಶುಪಾಲರಾದ ಪವಿತ್ರ ಹೇಳಿದರು..

ಅವರು ಇಂದು ಕೆ.ಆರ್.ಪೇಟೆ ಪುರಸಭಾ ಕಾರ್ಯಾಲಯಕ್ಕೆ ಸಾರಂಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿಶಾಲೆಯ ಪ್ರಾಂಶುಪಾಲೆ ಲಲಿತಾ ಅವರೊಂದಿಗೆ ಭೇಟಿ ನೀಡಿ ಪುರಸಭೆ ಅಧ್ಯಕ್ಷೆ ಮಹಾದೇವಿ ನಂಜುAಡ ಅವರಿಗೆ ಸರ್ಕಾರದ ಆದೇಶ ಪತ್ರವನ್ನು ನೀಡಿ ಕೆ.ಆರ್.ಪೇಟೆ ತಾಲ್ಲೂಕಿನ ವ್ಯಾಪ್ತಿಯ ಜೈನಹಳ್ಳಿ, ಆದಿಹಳ್ಳಿ, ಗವಿಮಠ, ಮಾದಾಪುರ, ಸಾರಂಗಿ ಹಾಗೂ ಶೆಟ್ಟನಾಯಕನ ಕೊಪ್ಪಲಿನಲ್ಲಿರುವ ವಸತಿಶಾಲೆಗಳಲ್ಲಿ 6ನೇ ತರಗತಿಗೆ ನೇರವಾಗಿ ಪ್ರವೇಶ ನೀಡಲಾಗುವುದು. ಆದ್ದರಿಂದ ಪುರಸಭೆಯ ವ್ಯಾಪ್ತಿಯಲ್ಲಿರುವ ಪೌರಕಾರ್ಮಿಕರ ಮಕ್ಕಳನ್ನು 6ನೇ ತರಗತಿಗೆ ಪ್ರವೇಶ ಪಡೆಯಲು ಕಳಿಸಿಕೊಡಬೇಕು. ವಸತಿಶಾಲೆಯಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಶಾಲಾಸಮವಸ್ತ್ರ, ವಸತಿ, ಪುಸ್ತಕಗಳು, ನೋಟ್ ಬುಕ್ ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದರು..

ಅಧ್ಯಕ್ಷೆ ಮಹಾದೇವಿ ನಂಜುAಡ ಮಾತನಾಡಿ ಪುರಸಭೆಯಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರ ಮಕ್ಕಳನ್ನು ಗುರುತಿಸಿ 6ನೇ ತರಗತಿಗೆ ಪ್ರವೇಶ ಪಡೆಯಲು ಕಳಿಸಿಕೊಡಬೇಕು ಎಂದು ಪರಿಸರ ಎಂಜಿನಿಯರ್ ಅರ್ಚನಾಆರಾಧ್ಯ ಹಾಗೂ ಸ್ವರ್ಣಜಯಂತಿ ಶಹರಿ ರೋಜ್ಗಾರ್ ಯೋಜನಾಧಿಕಾರಿ ಭಾರತಿ ಅನಂತಶಯನ ಅವರಿಗೆ ಸೂಚಿಸಿದರು..ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ಕುಮಾರ್ ಉಪಸ್ಥಿತರಿದ್ದರು.

ರದಿ. ಡಾ.ಕೆ.ಆರ್.ನೀಲಕಂಠ. ಕೃಷ್ಣರಾಜಪೇಟೆ. ಮಂಡ್ಯ

error: