April 29, 2024

Bhavana Tv

Its Your Channel

ಕೆ.ಆರ್.ಪೇಟೆಯ ಮಿನಿವಿಧಾನಸೌಧದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನೆ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದ ಆಡಳಿತ ಸೌಧವಾದ ಮಿನಿವಿಧಾನಸೌಧದಲ್ಲಿ ಪ್ರತಿಷ್ಠಾಪಿಸಿದ್ದ ಸಿದ್ಧಿವಿನಾಯಕನ ಮೂರ್ತಿಯನ್ನು ಇಂದು ಸಂಪ್ರದಾಯಬದ್ಧವಾಗಿ ಪೂಜೆ ಸಲ್ಲಿಸಿ ಅದ್ದೂರಿಯಾಗಿ ಮೆರವಣಿಗೆ ನಡೆಸಿ ಇತಿಹಾಸ ಪ್ರಸಿದ್ಧ ದೇವಿರಮ್ಮಣ್ಣಿ ಕೆರೆಯಲ್ಲಿ ವಿಸರ್ಜಿಸಲಾಯಿತು ..

ತಹಶೀಲ್ದಾರ್ ಎಂ.ವಿ.ರೂಪ, ಗ್ರೇಡ್ 2 ತಹಶೀಲ್ದಾರ್ ವಿಖಾರ್ ಅಹಮದ್, ಉಪತಹಶೀಲ್ದಾರ್ ಲಕ್ಷ್ಮೀಕಾಂತ್, ತಾಲ್ಲೂಕು ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷೆ ಚಂದ್ರಕಲಾ ಪ್ರಕಾಶ್, ಮಂಡ್ಯ ಜಿಲ್ಲಾ ಗ್ರಾಮಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್ ಸಿದ್ಧಿವಿನಾಯಕನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ತೆರೆದ ವಾಹನದಲ್ಲಿ ಅಲಂಕರಿಸಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಇತಿಹಾಸ ಪ್ರಸಿದ್ಧವಾದ ದೇವೀರಮ್ಮಣ್ಣಿ ಕೆರೆಯಲ್ಲಿ ವಿಸರ್ಜಿಸಲಾಯಿತು.
ಪಟ್ಟಣದ ತಾಲ್ಲೂಕು ಆಡಳಿತ ಸೌಧವಾದ ಮಿನಿ ವಿಧಾನಸೌಧದ ಆವರಣದಿಂದ ಆರಂಭವಾದ ವರ್ಣರಂಜಿತ ಮೆರವಣಿಗೆಯಲ್ಲಿ ತಹಶೀಲ್ದಾರ್ ರೂಪ ಸೇರಿದಂತೆ ಕಂದಾಯ ಇಲಾಖೆಯ ಸಿಬ್ಬಂಧಿಗಳು ಹಾಗೂ ಗ್ರಾಮಲೆಕ್ಕಾಧಿಕಾರಿಗಳು, ರಾಜಶ್ವನಿರೀಕ್ಷಕರು, ಕಂದಾಯ ಇಲಾಖೆಯ ಗ್ರಾಮ ಸಹಾಯಕರು ಹಾಗೂ ಪಟ್ಟಣದ ಗಣ್ಯರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು..

ಕೃಷ್ಣರಾಜಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಶಿವಕುಮಾರ್, ಶಿರಸ್ತೇದಾರ್ ರವಿ, ಉಪತಹಶೀಲ್ದಾರ್ ಗೌರಮ್ಮ, ಲಕ್ಷ್ಮೀ ಕಾಂತ್, ಲಲಿತಾ ಸೇರಿದಂತೆ ಕಂದಾಯ ಇಲಾಖಾ ನೌಕರರು ಹಾಗೂ ಸಿಬ್ಬಂಧಿಗಳು ಸಿದ್ಧಿವಿನಾಯಕನ ಮೂರ್ತಿಯ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು…

ತಹಶೀಲ್ದಾರ್ ಎಂ.ವಿ.ರೂಪ ಮಾತನಾಡಿ ಸಿದ್ಧಿವಿನಾಯಕನು ಆರೋಗ್ಯವಂತ ಸಮಾಜದ ನಿರ್ಮಾಣಕ್ಕಾಗಿ ಸರ್ವರನ್ನೂ ಹರಸಿ ಆಶೀರ್ವದಿಸಿದ್ದಾನೆ. ಈ ಭಾರಿ ಒಳ್ಳೆಯ ಮಳೆಯಾಗಿ ಉತ್ತಮವಾಗಿ ಸುಭೀಕ್ಷತೆಯು ನೆಲೆಸಿದೆ. ಶ್ರೀ ಸಾಮಾನ್ಯರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ವಿಘ್ನನಿವಾರಕನಾದ
ಗಣಪತಿಯು ಎಲ್ಲರನ್ನೂ ಹರಸಿ ಆಶೀರ್ವದಿಸಿ ಕೈಹಿಡಿದು ಮುನ್ನಡೆಸುತ್ತಿದ್ದಾನೆ. ಮಾನವರಾದ ನಾವು ಸ್ವಾರ್ಥಿಗಳಾಗದೇ ಸಮಾಜಕ್ಕಾಗಿ ನಾವು ಎಂಬ ವಿಶಾಲವಾದ ಮನೋಭಾವನೆಯನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು..ಸಾಧನೆ ಮಾಡಲು ಕಷ್ಟವಾದರೂ ನ್ಯಾಯ, ನೀತಿ, ಧರ್ಮ ಹಾಗೂ ಸತ್ಯದ ಹಾದಿಯಲ್ಲಿಯೇ ಮುನ್ನಡೆದು ಗುರಿಸಾಧನೆ ಮಾಡಬೇಕು ಎಂದು ತಹಶೀಲ್ದಾರ್ ರೂಪ ಕರೆ ನೀಡಿದರು..

ಗಣೇಶೋತ್ಸವ ಮೆರವಣಿಗೆಯಲ್ಲಿ ಸಾರ್ವಜನಿಕರು ಹಾಗೂ ಕಂದಾಯ ಇಲಾಖಾ ಸಿಬ್ಬಂಧಿಗಳ ಸಂಭ್ರಮವು ಮುಗಿಲು ಮುಟ್ಟಿತ್ತು.
ಕಂದಾಯ ಇಲಾಖೆಯ ಸಿಬ್ಬಂಧಿಗಳು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಶ್ರೀ ಲಕ್ಷ್ಮೀನಾರಾಯಣಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ರಾದ ವೇದಬ್ರಹ್ಮ ಶ್ರೀ ನಾರಾಯಣಾಚಾರ್ಯ ಅವರು ಪೂಜಾ ವಿಧಿವಿಧಾನಗಳ ನೇತೃತ್ವ ವಹಿಸಿದ್ದರು..

ವರದಿ ಡಾ.ಕೆ.ಆರ್.ನೀಲಕಂಠ. ಕೃಷ್ಣರಾಜಪೇಟೆ. ಮಂಡ್ಯ

error: