April 29, 2024

Bhavana Tv

Its Your Channel

ಗುಂಡಿ ಬಿದ್ದು ಹಾಳಾಗಿರುವ ರಸ್ತೆಗಳನ್ನು ಸರಿಪಡಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರಿಂದ ಪ್ರತಿಭಟನೆ

ಕೃಷ್ಣರಾಜಪೇಟೆ ತಾಲ್ಲೂಕಿನಾದ್ಯಂತ ಗುಂಡಿ ಬಿದ್ದು ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಬೇಕು. ಕಳಪೆ ಕಾಮಗಾರಿಯನ್ನು ನಡೆಸಿ ಸರ್ಕಾರದ ಹಣವನ್ನು ಕೊಳ್ಳೆ ಹೊಡೆಯುತ್ತಿರುವ ಭ್ರಷ್ಠ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ತಾಲ್ಲೂಕು ಘಟಕದ ಅಧ್ಯಕ್ಷ ಹೊನ್ನೇನಹಳ್ಳಿ ವೇಣು ನೇತೃತ್ವದಲ್ಲಿ ಪಟ್ಟಣದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು …

ಮೈಸೂರು ಚನ್ನರಾಯಪಟ್ಟಣ ರಸ್ತೆ, ಕೆ.ಆರ್.ಪೇಟೆ ಶ್ರವಣಬೆಳಗೊಳ ರಸ್ತೆ, ಕಿಕ್ಕೇರಿ ಊಗಿನಹಳ್ಳಿ ಮಾದಾಪುರ ರಸ್ತೆ ಸೇರಿದಂತೆ ಬಹುತೇಕ ಗ್ರಾಮೀಣ ಸಂಪರ್ಕ ರಸ್ತೆಗಳಲ್ಲಿ ಭಾರೀ ಪ್ರಮಾಣದಲ್ಲಿ ಗುಂಡಿ ಬಿದ್ದಿದ್ದು ಸಂಪೂರ್ಣವಾಗಿ ವಾಹನಗಳು ಸೇರಿದಂತೆ ಜನ ಜಾನುವಾರುಗಳು ಸಂಚರಿಸಲು ಕಷ್ಟಕರವಾಗಿದೆ. ರಸ್ತೆಗಳಲ್ಲಿ ಗುಂಡಿ ಬಿದ್ದು ಹಾಳಾಗಿರುವುದರಿಂದ ದಿನಕ್ಕೆ ನಾಲ್ಕೈದು ಅಪಘಾತಗಳು ಸಂಭವಿಸುತ್ತಿವೆ. ಇತ್ತೀಚಿಗೆ ನಾಲ್ಕೈದು ಜನರು ರಸ್ತೆ ಅಪಘಾತದಲ್ಲಿ ಅಕಾಲಿಕವಾಗಿ ಸಾವನ್ನಪ್ಪಿದ್ದಾರೆ. ಆದ್ದರಿಂದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕೂಡಲೇ ಗುಂಡಿ ಬಿದ್ದಿರುವ ರಸ್ತೆಯನ್ನು ದುರಸ್ತಿ ಮಾಡಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಇಲ್ಲದಿದ್ದರೆ ನಮ್ಮ ತಾಲ್ಲೂಕಿನಿಂದ ಜಾಗ ಖಾಲಿ ಮಾಡಬೇಕು ಎಂದು ಎಚ್ಚರಿಸಿದ ಕರವೇ ತಾಲ್ಲೂಕು ಅಧ್ಯಕ್ಷ ವೇಣು..
ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವು ತಾಂಡವವಾಡುತ್ತಿದ್ದು ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿದೆ. ಆದ್ದರಿಂದ ಭ್ರಷ್ಢ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕೈಗೊಂಡು ಕಳಪೆ ಕೆಲಸ ನಡೆಸಿ ಸರ್ಕಾರದ ಹಣವನ್ನು ಲೂಟಿ ಮಾಡುತ್ತಿರುವ ಭ್ರಷ್ಠ ಗುತ್ತಿಗೆದಾರರ ಹೆಸರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದ
ಕರವೇ ತಾಲ್ಲೂಕು ಅಧ್ಯಕ್ಷ ವೇಣು ಲೋಕೋಪಯೋಗಿ ಇಲಾಖೆಯ ಎಇಇ ರಾಜಶೇಖರ್ ಅವರಿಗೆ ಮನವಿ ಪತ್ರವನ್ನು ನೀಡಿ ಒತ್ತಾಯಿಸಿದರು..

ತಾಲ್ಲೂಕು ಕರವೇ ಪದವೀಧರ ಘಟಕದ ಅಧ್ಯಕ್ಷ ಸಿ.ಬಿ.ಚೇತನ್ ಕುಮಾರ್, ನಗರ ಘಟಕದ ಅಧ್ಯಕ್ಷ ಮದನ್ ಗೌಡ, ಯುವ ಘಟಕದ ಅಧ್ಯಕ್ಷ ಆನಂದ, ತಾಲ್ಲೂಕು ಉಪಾಧ್ಯಕ್ಷ ಶ್ರೀನಿಧಿ ಶ್ರೀನಿವಾಸ್, ತಾಲ್ಲೂಕು ಸಂಚಾಲಕ ಜಹೀರ್, ಮುಖಂಡರಾದ ಫಯಾಜ್, ಕಲೀಲ್, ಶೀಳನೆರೆ ಹೋಬಳಿ ಘಟಕದ ಅಧ್ಯಕ್ಷ ಚನ್ನೇಗೌಡ, ಸಂಘಟನಾ ಕಾರ್ಯದರ್ಶಿ ಸ್ವಾಮಿ, ಬಸವೇಗೌಡ, ಯುವ ಘಟಕದ ಕಾರ್ಯದರ್ಶಿ ಮನು, ಈಶ್ವರ, ಅಶ್ವಥ್, ಬೂಕನಕೆರೆ ಮಧು ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು..

ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ಲೋಕೋಪಯೋಗಿ ಇಲಾಖೆಯ ಎಇಇ ರಾಜಶೇಖರ್ ಈ ಬಾರಿ ವಾಡಿಕೆಗಿಂತ ಹೆಚ್ಚಾಗಿ ಮಳೆಯಾಗಿದೆ. ರಸ್ತೆಯಲ್ಲಿ ಭಾರೀ ಪ್ರಮಾಣದಲ್ಲಿ ಗುಂಡಿಗಳು ಉಂಟಾಗಿದ್ದು ಸಚಿವ ನಾರಾಯಣಗೌಡ ಅವರ ಒತ್ತಾಸೆಯ ಮೇರೆಗೆ 8ಕೋಟಿ ರೂ ವಿಶೇಷ ಅನುದಾನವು ರಸ್ತೆಗಳ ಗುಂಡಿ ಮುಚ್ಚಲು ಬಿಡುಗಡೆಯಾಗಿದೆ. ಪ್ರಸ್ತುತ ಗುಂಡಿ ಮುಚ್ಚುವ ಕಾಮಗಾರಿ ನಡೆಸಿ ಡಿಸೆಂಬರ್ ಅಂತ್ಯದ ವೇಳೆಗೆ ಸುಸಜ್ಜಿತವಾದ ರಸ್ತೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಎಂಜಿನಿಯರ್ ರಾಜಶೇಖರ್ ತಿಳಿಸಿದರು…

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ, ಮಂಡ್ಯ

error: