March 29, 2024

Bhavana Tv

Its Your Channel

ಮಾದಕ ವ್ಯಸನಗಳ ತಡೆ ಕುರಿತು ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮ

ಕೃಷ್ಣರಾಜಪೇಟೆ :-ಯುವಜನರು ಹಾಗೂ ವಿದ್ಯಾರ್ಥಿಗಳು ಮಾದಕ ವ್ಯಸನಗಳ ಚಟದಿಂದ ದೂರವಿದ್ದು ಶಿಸ್ತು, ಸಂಯಮ ಸೇರಿದಂತೆ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಭವಿಷ್ಯದ ನಾಗರಿಕರಾಗಿ, ಉತ್ತಮವಾದ ಸತ್ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಕೆ.ಆರ್.ಪೇಟೆ ಪಟ್ಟಣದ ಜೆ.ಎಂ.ಎಫ್.ಸಿ ಸಿವಿಲ್ ನ್ಯಾಯಾಲಯದ ಕಿರಿಯಶ್ರೇಣಿ ನ್ಯಾಯಾಧೀಶರಾದ ಹೆಚ್.ಓಂಕಾರಮೂರ್ತಿ ಕರೆ ನೀಡಿದರು ..

ಅವರು ಕೃಷ್ಣರಾಜಪೇಟೆ ಪಟ್ಟಣದ ಸರ್ಕಾರಿ ಎಂಜಿನಿಯರಿAಗ್ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಸರ್ಕಾರಿ ಎಂಜಿನಿಯರಿAಗ್ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಮಾದಕ ವ್ಯಸನಗಳ ತಡೆ ಕುರಿತು ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು..

ಇಂದಿನ ದಿನಮಾನದಲ್ಲಿ ಯುವಜನರು ಮಾದಕ ವಸ್ತುಗಳ ಸೇವನೆ ಸೇರಿದಂತೆ ದುಶ್ಚಟಗಳಿಗೆ ದಾಸರಾಗಿ ತಮ್ಮ ಅಮೂಲ್ಯವಾದ ಜೀವನವನ್ನೇ ಹಾಳು ಮಾಡಿಕೊಳ್ಳುವ ಜೊತೆಗೆ ಸಮಾಜ ಕಂಟಕರಾಗಿ ಬದಲಾಗುತ್ತಿದ್ದಾರೆ. ತಂದೆತಾಯಿಗಳಿಗೆ ಹಾಗೂ ಸಮಾಜಕ್ಕೆ ಕೊಡುಗೆಯನ್ನು ನೀಡಬೇಕಾದ ಯುವಜನರು ದುಶ್ಚಟಗಳಿಗೆ ಒಳಗಾಗಿ ಸಮಾಜಕ್ಕೆ ಹೊರೆಯಾಗಿ ಶಾಪವಾಗಿದ್ದಾರೆ. ಹಾದಿತಪ್ಪುತ್ತಿರುವ ಯುವಜನಾಂಗವನ್ನು ಸರಿ ದಾರಿಯಲ್ಲಿ ಕೊಂಡೊಯ್ಯಬೇಕಾದ ಜವಾಬ್ಧಾರಿಯು ತಂದೆತಾಯಿಗಳು ಸೇರಿದಂತೆ ನಾಗರೀಕ ಸಮಾಜದ ಎಲ್ಲರ ಮೇಲಿದೆ ಎಂದು ತಿಳಿಸಿದ ನ್ಯಾಯಾಧೀಶರು ಚರಸ್, ಗಾಂಜಾ, ಅಪೀಮು, ಗುಟ್ಕಾ, ಬೀಡಿ, ಸಿಗರೇಟು ಸೇರಿದಂತೆ ಮಧ್ಯಪಾನದ ಚಟಕ್ಕೆ ಒಳಗಾಗದಂತೆ ಎಚ್ಚರ ವಹಿಸಬೇಕಾಗಿದೆ. ಮಾದಕ ವಸ್ತುಗಳಿಗೆ ಜೀವನದಲ್ಲಿ ಒಮ್ಮೆ ಒಳಗಾದರೆ ಸಾಕು ಮಾದಕ ವಸ್ತುಗಳು ನಮ್ಮ ಅಮೂಲ್ಯವಾದ ಜೀವನವನ್ನೇ ಬಲಿತೆಗೆದುಕೊಳ್ಳುತ್ತವೆ ಎಂಬ ಸತ್ಯವನ್ನು ಅರಿಯಬೇಕು ಎಂದು ನ್ಯಾಯಾಧೀಶರಾದ ಓಂಕಾರಮೂರ್ತಿ ಮನವಿ ಮಾಡಿದರು..

ತಹಶೀಲ್ದಾರ್ ಎಂ.ವಿ.ರೂಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ ಜೀವನದಲ್ಲಿ ಸಾಧನೆ ಮಾಡುವ ಸಮಯದಲ್ಲಿ ಕ್ಷಣಿಕ ಸುಖದ ಆಸೆಗೆ ಒಳಗಾಗಿ ಮಾದಕ ವಸ್ತುಗಳು ಸೇರಿದಂತೆ ದುಶ್ಚಟಗಳಿಗೆ ಒಳಗಾದರೆ, ನಮ್ಮ ಜೀವನ ಹಾಗೂ ಬದುಕೇ ಸಂಪೂರ್ಣವಾಗಿ ನಾಶವಾಗುತ್ತದೆ. ಮಾದಕ ವಸ್ತುಗಳ ಚಟವು ನಮ್ಮನ್ನೇ ಬಲಿ ತೆಗೆದುಕೊಳ್ಳುತ್ತದೆಯಾದ್ದರಿಂದ ಯುವಜನರು ಎಚ್ಚರಿಕೆಯಿಂದ ಹೆಜ್ಜೆ ಹಾಕಬೇಕು. ಶಿಸ್ತುಬದ್ಧ ಜೀವನವನ್ನು ನಡೆಸಿ ಗುರಿಸಾಧನೆ ಮಾಡಬೇಕು ಎಂದು ಕರೆ ನೀಡಿದರು..
ಸರ್ಕಾರಿ ಎಂಜಿನಿಯರಿAಗ್ ಕಾಲೇಜು ಪ್ರಾಂಶುಪಾಲರಾದ ಡಾ.ಕೆ.ಆರ್.ದಿನೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕೆ.ಆರ್.ಪೇಟೆ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎನ್.ಆರ್.ರವಿಶಂಕರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಕೆ.ಎಸ್.ಶಿವಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್, ಅಪರ ನ್ಯಾಯಾಲಯದ ನ್ಯಾಯಾಧೀಶರಾದ ಶಕುಂತಲಾ, ಸರ್ಕಾರಿ ಅಭಿಯೋಜಕ ಬಿ.ಸಿ.ರಾಜೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತಿಮ್ಮರಾಜು, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಕೆ.ರಾಜೇಗೌಡ, ಉಪಾಧ್ಯಕ್ಷ ಬಿ.ಸಿ.ದಿನೇಶ್, ಜಂಟಿ ಕಾರ್ಯದರ್ಶಿ ಸಿ.ನಿರಂಜನ, ಪದಾಧಿಕಾರಿಗಳಾದ ಜಗಧೀಶ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸರ್ಕಾರಿ ಎಂಜಿನಿಯರಿoಗ್ ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿ ರುದ್ರಪ್ಪ ಕಾರ್ಯಕ್ರಮ ನಿರೂಪಿಸಿದರು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: