March 29, 2024

Bhavana Tv

Its Your Channel

ವಿಶ್ವ ಕಿವುಡು ದಿನದ ಅಂಗವಾಗಿ ಆಯೋಜಿಸಿದ್ದ ಉಚಿತ ಶ್ರವಣ ದೋಷ ತಪಾಸಣಾ ಶಿಬಿರ

ಕೃಷ್ಣರಾಜಪೇಟೆ :– ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯ ಯಾವುದೂ ಇಲ್ಲವಾದ್ದರಿಂದ ಜನಸಾಮಾನ್ಯರು ವಯಕ್ತಿಕ ಸ್ವಚ್ಛತೆಗೆ ಒತ್ತು ನೀಡಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಚಿವ ಡಾ.ನಾರಾಯಣಗೌಡ ಹೇಳಿದರು ..

ಅವರು ಇಂದು ಕೃಷ್ಣರಾಜಪೇಟೆ ಪಟ್ಟಣದ ಅಗ್ರಹಾರ ಸರ್ಕಲ್ ನ ಗಂಗಾಮತಸ್ಥರ ಶ್ರೀರಾಮ ಮಂದಿರದಲ್ಲಿ ವಿಶ್ವ ಕಿವುಡು ದಿನದ ಅಂಗವಾಗಿ ಆಯೋಜಿಸಿದ್ದ ಉಚಿತ ಶ್ರವಣ ದೋಷ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು..

ನಾವು ಮಾತನಾಡುವ ಸಂಭಾಷಣೆಯನ್ನು ಕೇಳಿಸಿಕೊಂಡು ಕಾರ್ಯೋನ್ಮುಖರಾಗಲು ಕಿವಿಯ ಸಮಸ್ಯೆಯಿಂದ ಮುಕ್ತವಾಗುವುದು ಅಗತ್ಯವಾಗಿದೆ. ಕಿವುಡುತನದಿಂದಾಗಿ ಮಾತು ಬಾರದೇ ಕಿವಿಯು ಕೇಳಿಸದಂತಾದರೇ ಕಿವುಡುತನದಿಂದ ಬಳಲಬೇಕಾಗುತ್ತದಲ್ಲದೇ ಮೂಕ ಭಾಷೆಯಾದ ಕೈಸನ್ನೆಯ ಮೂಲಕ ವ್ಯವಹರಿಸಬೇಕಾಗುತ್ತದೆ. ಆದ್ದರಿಂದ ಶ್ರವಣ ದೋಷದಿಂದ ಬಳಲುತ್ತಿರುವ ಬಡವರು ಹಾಗೂ ಮಧ್ಯಮ ವರ್ಗದ ಜನರಿಗಾಗಿ ಉಚಿತವಾಗಿ ಶ್ರವಣಯಂತ್ರ ಸಾಧನವನ್ನು ವಿತರಿಸುವ ಜೊತೆಗೆ ಶ್ರವಣ ದೋಷ ತಪಾಸಣಾ ಶಿಬಿರವನ್ನು ಆಯೋಜಿಸಿರುವುದು ಒಳ್ಳೆಯ ಕೆಲಸವಾಗಿದೆ. ಈ ಭಾಗದ ಪುರಸಭಾ ಸದಸ್ಯರಾದ ಕೆ.ಎಸ್.ಪ್ರಮೋದ್ ಹಾಗೂ ನಟರಾಜ್ ಉಚಿತ ಶ್ರವಣ ದೋಷ ತಪಾಸಣಾ ಶಿಬಿರವನ್ನು ಆಯೋಜಿಸಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು..

ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಕೆ.ಎಸ್.ಶಿವಕುಮಾರ್ ಮಾತನಾಡಿ ಮಕ್ಕಳು, ಮಹಿಳೆಯರು, ವಯೋವೃದ್ಧರು ಸೇರಿದಂತೆ ಯುವಜನರ ಶ್ರವಣ ಸಮಸ್ಯೆಗೆ ಪರಿಹಾರವನ್ನು ಕಂಡು ಹಿಡಿಯುವ ನಿಟ್ಟಿನಲ್ಲಿ ಶಿಬಿರವು ಸಂಪೂರ್ಣವಾಗಿ ಯಶಸ್ವಿಯಾಗಿದೆ. ಸರ್ಕಾರದ ವತಿಯಿಂದ ಅಗತ್ಯವಿರುವ ರೋಗಿಗಳಿಗೆ ಶ್ರವಣಯಂತ್ರ ಸಾಧನವನ್ನು ವಿತರಿಸಲಾಗುತ್ತಿದೆ. ತಜ್ಞ ವೈದ್ಯರು ಶಿಬಿರದಲ್ಲಿ ಭಾಗವಹಿಸಿ ಕಿವುಡುತನದ ಸಮಸ್ಯೆಗೆ ಪರಿಹಾರವನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ ಎಂದು ಸಚಿವರಿಗೆ ಮಾಹಿತಿ ನೀಡಿದರು…

ಮೂಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತಿ ಮಾಜಿಉಪಾಧ್ಯಕ್ಷ ಶೀಳನೆರೆ ಅಂಬರೀಶ್, ಪುರಸಭೆ ಅಧ್ಯಕ್ಷೆ ಮಹಾದೇವಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ, ಮಂಡ್ಯ

error: