March 29, 2024

Bhavana Tv

Its Your Channel

ಕೆ.ಆರ್.ಪೇಟೆಯ ಮಿನಿ ವಿಧಾನಸೌಧದಲ್ಲಿ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿ ಆಚರಣೆ

ಕೆ.ಆರ್.ಪೇಟೆ ಪಟ್ಟಣದ ಆಡಳಿತ ಸೌಧವಾದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿ ಮಹೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು

ತಹಶೀಲ್ದಾರ್ ಎಂ.ವಿ.ರೂಪ ಇಬ್ಬರೂ ಮಹನೀಯರ ಭಾವಚಿತ್ರಗಳಿಗೆ ವಿಶೇಷ ಪೂಜೆ ಮಾಡಿ ಪುಷ್ಪನಮನ ಸಲ್ಲಿಸಿ ಮಾತನಾಡಿದರು…

ಅಹಿಂಸಾ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟ ಮಹಾತ್ಮ ಗಾಂಧಿಯವರು ವಿಶ್ವಮಾನ್ಯ ನಾಯಕರಾಗಿದ್ದಾರೆ. ಜಾತಿ, ಮತ ಹಾಗೂ ಪಂಥಗಳಿAದ ಮುಕ್ತವಾದ ಸಮಾನತೆಯಿಂದ ಕೂಡಿರುವ ಸಮ ಸಮಾಜವನ್ನು ನಿರ್ಮಾಣ ಮಾಡಲು ಪಣ ತೊಡಬೇಕು. ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಒಂದಾಗಿ ದುಡಿಯಬೇಕು. ಗುಡಿ ಕೈಗಾರಿಕೆಗಳು ಹಾಗೂ ಸ್ವದೇಶಿ ಉತ್ಪನ್ನಗಳ ತಯಾರಿಕೆ ಹಾಗೂ ಮಾರಾಟಕ್ಕೆ ಒತ್ತು ನೀಡಬೇಕು ಎಂದು ಸಂದೇಶ ನೀಡಿ ನುಡಿದಂತೆ ನಡೆದು ಖಾದಿ ಉತ್ಪನ್ನಗಳನ್ನು ಬಳಸಿ ಮಾದರಿಯಾಗಿ ಜೀವನ ನಡೆಸಿದ ರಾಷ್ಟ್ರಪಿತ ಜೀವನದ ಆದರ್ಶಗಳನ್ನು ಯುವಜನರು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದ ತಹಶೀಲ್ದಾರ್ ರೂಪ ದೇಶದ ಪ್ರಧಾನಮಂತ್ರಿಗಳಾಗಿ ರಾಷ್ಟ್ರವನ್ನು ಸಮರ್ಥವಾಗಿ ಮುನ್ನಡೆಸಿದ ಶಾಸ್ತ್ರೀಜಿ ಅವರು ಭ್ರಷ್ಟಾಚಾರ ಮುಕ್ತವಾದ ದಕ್ಷ ಆಡಳಿತ ನೀಡಿ ಇತಿಹಾಸದ ಪುಟಗಳಲ್ಲಿ ದಾಖಲಾಗಿದ್ದಾರೆ. ಶಾಸ್ತ್ರೀಜಿ ಅವರ ಪ್ರಾಮಾಣಿಕತೆ ಹಾಗೂ ಕಾರ್ಯದಕ್ಷತೆಯನ್ನು ಯುವಜನರು ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದು ತಹಶೀಲ್ದಾರ್ ರೂಪ ಕರೆ ನೀಡಿದರು.

ಕೆ.ಆರ್.ಪೇಟೆ ತಾಲ್ಲೂಕು ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಡಾ.ನರಸಿಂಹರಾಜು ಮಹಾತ್ಮಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜೀವನ ಸಾಧನೆಯನ್ನು ಕುರಿತು ಮಾತನಾಡಿದರು.

ಪುರಸಭೆ ಮುಖ್ಯಾಧಿಕಾರಿ ಕುಮಾರ್, ಅಗ್ನಿಶಾಮಕ ಠಾಣಾಧಿಕಾರಿ ಶಿವಣ್ಣ, ಶಿಕ್ಷಣ ಸಂಯೋಜಕಿ ನೀಲಾಮಣಿ, ಪುರಸಭೆ ಸದಸ್ಯ ಕೆ.ಆರ್.ನೀಲಕಂಠ, ತಾಲ್ಲೂಕು ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷೆ ಚಂದ್ರಕಲಾ, ಮಂಡ್ಯ ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್, ಆರೋಗ್ಯ ಇಲಾಖೆಯ ರತ್ನ, ಉಪತಹಶೀಲ್ದಾರ್ ಲಕ್ಷ್ಮೀಕಾಂತ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ, ಮಂಡ್ಯ

error: