April 24, 2024

Bhavana Tv

Its Your Channel

ಸಾರ್ವಜನಿಕ ಆಸ್ಪತ್ರೆಯಲ್ಲಿ ಗಾಂಧಿಜಯoತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿ ಅಂಗವಾಗಿ ಬಡಜನರಿಗೆ ರೇಷನ್ ಕಿಟ್ ಹಾಗೂ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ.

ಕೃಷ್ಣರಾಜಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಗಾಂಧಿಜಯAತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿ ಸಮಾರಂಭದ ಅಂಗವಾಗಿ ಬಡಜನರಿಗೆ ರೇಷನ್ ಕಿಟ್ ಗಳು ಹಾಗೂ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು ..

ತಹಶೀಲ್ದಾರ್ ಎಂ.ವಿ.ರೂಪ, ಪುರಸಭೆ ಅಧ್ಯಕ್ಷೆ ಮಹಾದೇವಿ ಹಾಗೂ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಕೆ.ಎಸ್.ಶಿವಕುಮಾರ್ ಅವರ ನೇತೃತ್ವದಲ್ಲಿ ಮಹಾನ್ ಚೇತನಗಳಾದ ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಭಾವಚಿತ್ರಗಳಿಗೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿದ ಗಣ್ಯರು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವ ಒಳರೋಗಿಗಳಿಗೆ ಹಣ್ಣುಹಂಪಲು ಹಾಗೂ ಬ್ರೆಡ್ ವಿತರಿಸಲಾಯಿತು.
ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಬಡ ಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರಿಗೆ ಆಸ್ಪತ್ರೆಯ ವೈದ್ಯರು ಹಾಗೂ ದಾದಿಯರಿಂದ ಸಂಗ್ರಹಿಸಿದ ಹಣದಿಂದ ಖರೀದಿಸಿದ 50 ಕ್ಕೂ ಹೆಚ್ಚಿನ ದಿನಬಳಕೆಯ ವಸ್ತುಗಳ ಆಹಾರ ಧಾನ್ಯಗಳ ಕಿಟ್ ಅನ್ನು ತಹಶೀಲ್ದಾರ್ ರೂಪ, ಪುರಸಭೆ ಅಧ್ಯಕ್ಷೆ ಮಹಾದೇವಿ ಹಾಗೂ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಕೆ.ಎಸ್.ಶಿವಕುಮಾರ್ ವಿತರಿಸಿದರು..

ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಕುಮಾರ್, ತಾಲ್ಲೂಕು ಬಿಸಿಎಂ ಅಧಿಕಾರಿ ವೆಂಕಟೇಶ್, ಉಪತಹಶೀಲ್ದಾರ್ ಲಕ್ಷ್ಮೀಕಾಂತ್, ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷೆ ಚಂದ್ರಕಲಾ, ಮಂಡ್ಯ ಜಿಲ್ಲಾ ಗ್ರಾಮಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್, ತಜ್ಞ ವೈದ್ಯರಾದ ಡಾ.ಶಶಿಧರ್, ಡಾ.ಪ್ರಿಯಾಂಕಾ, ಡಾ.ಜಯಪ್ರಕಾಶ್, ಆಸ್ಪತ್ರೆಯ ಹಿರಿಯ ಶುಷ್ರೂಶಕಿ ಸೀತಮ್ಮ, ಫಾರ್ಮಸಿ ಅಧಿಕಾರಿ ಸತೀಶ್ ಬಾಬೂ, ಸೇರಿದಂತೆ ಆಸ್ಪತ್ರೆಯ ಸಿಬ್ಬಂಧಿಗಳು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ
ಕೃಷ್ಣರಾಜಪೇಟೆ, ಮಂಡ್ಯ

error: