
ಕೆ.ಆರ್.ಪೇಟೆ ಪಟ್ಟಣದ ಚನ್ನರಾಯಪಟ್ಟಣ ಮೈಸೂರು ರಸ್ತೆಯಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಛೇರಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಅಂಗವಾಗಿ ಗಣಹೋಮ ನಡೆಸಿ ದೇವಿಪೂಜೆ ಮಾಡಿ ಲೋಕ ಕಲ್ಯಾಣಾರ್ಥವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು .
ತಾಲ್ಲೂಕು ಯೋಜನಾಧಿಕಾರಿ ಮಮತಾಶೆಟ್ಟಿ ಹಾಗೂ ಯೋಜನಾ ಕಛೇರಿಯ ಸಿಬ್ಬಂಧಿಗಳು ಗಣಹೋಮದಲ್ಲಿ ಭಾಗವಹಿಸಿ ಪೂರ್ಣಾಹುತಿ ಸಲ್ಲಿಸಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿಗಳಿಗೆ ಪ್ರಸಾದವನ್ನು ನೀಡಿ ಸಂಭ್ರಮಿಸಿದರು..
ದುಷ್ಠ ಮಹಿಷಾಸುರನ ಸಂಹಾರಕ್ಕಾಗಿ ದೇವಿಯು ಶ್ರೀ ಚಾಮುಂಡೇಶ್ವರಿಯಾಗಿ ಅವತರಿಸಿ ನವದುರ್ಗಿಯರ ರೂಪತಾಳಿ ಲೋಕಕಲ್ಯಾಣ ಮಾಡಿದ ಶರನ್ನವರಾತ್ರಿಯ ಅಂಗವಾಗಿ ಆಯುಧಪೂಜೆ ಮಾಡಿ ಗಣಹೋಮ ನಡೆಸಿ ಸಂಭ್ರಮಿಸಿದ ಸಿಬ್ಬಂಧಿಗಳು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿಗಳು, ಸಂಘಸAಸ್ಥೆಗಳ ಪ್ರತಿನಿಧಿಗಳು ಹಾಗೂ ಪತ್ರಿಕಾ ಮಿತ್ರರಿಗೆ ಗಣಹೋಮದ ಪೂರ್ಣ ಫಲ ನೀಡಿ ಅತಿಥಿಗಳನ್ನು ಸನ್ಮಾನಿಸಿ ಗೌರವಿಸಿದರು.
ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬೆಡದಹಳ್ಳಿಯ ಶ್ರೀ ಪಂಚಭೂತೇಶ್ವರ ಕ್ಷೇತ್ರದ ಶ್ರೀ ರುದ್ರಮುನಿಶ್ರೀಗಳು ಮಾತನಾಡಿ ಹಬ್ಬಹರಿದಿನಗಳು ಹಾಗೂ ಉತ್ಸವಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿವೆ. ಹಬ್ಬದ ಸಂಭ್ರಮದಲ್ಲಿ ಎಲ್ಲರೂ ಒಂದಾಗಿ ಸೇರಿ ಸಹೋದರತೆಯ ಸಂದೇಶ ಸಾರಿದಾಗ ಸಂತೋಷ ಸಮೃದ್ಧಿ ಹೆಚ್ಚಾಗುತ್ತದೆ. ಮಹಿಳಾ ಸಬಲೀಕರಣ ಹಾಗೂ ಗ್ರಾಮಾಭಿವೃದ್ಧಿಗೆ ಒತ್ತು ನೀಡಿ ಕೆಲಸ ಮಾಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯು ತಾಲ್ಲೂಕಿನ ಜನತೆಗೆ ಭಾಗ್ಯದ ಬಾಗಿಲು ತೆರೆದಿದೆ ಎಂದು ಅಭಿಮಾನದಿಂದ ಹೇಳಿದರು..
ವರದಿ.ಡಾ.ಕೆ.ಆರ್.ನೀಲಕಂಠ .
More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ