April 29, 2024

Bhavana Tv

Its Your Channel

ರಾಷ್ಟ್ರೀಯ ಹಬ್ಬಗಳ ಸಮಿತಿಯ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ

ಕೃಷ್ಣರಾಜಪೇಟೆ :- ನಮ್ಮ ಜೀವನದ ಸಾರವಾದ ರಾಮಾಯಣ ಮಹಾಕಾವ್ಯವನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿರುವ ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಜೀವನದ ಆದರ್ಶಗಳನ್ನು ಯುವಜನರು ಪಾಲಿಸುವ ಮೂಲಕ ಜಾತಿ ಮತ ಪಂಥಗಳಿAದ ಮುಕ್ತವಾದ ಸಮ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ರಾಜ್ಯದ ಯುವಸಬಲೀಕರಣ ಕ್ರೀಡೆ ಹಾಗೂ ರೇಷ್ಮೆ ಸಚಿವರಾದ ಡಾ.ನಾರಾಯಣಗೌಡ ಕರೆ ನೀಡಿದರು ..

ಅವರು ಇಂದು ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿಯ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು…

ಸಮಾಜದ ಎಲ್ಲಾ ಜಾತಿ ವರ್ಗಗಳ ಜನರೊಂದಿಗೆ ಕೂಡಿ ಬಾಳುವ ಸದ್ಗುಣಗಳನ್ನು ಹೊಂದಿರುವ ವಾಲ್ಮೀಕಿ ನಾಯಕ ಸಮಾಜದ ಕೀರ್ತಿಯ ಕಳಸವಾಗಿರುವ ಮಹರ್ಷಿ ವಾಲ್ಮೀಕಿಯವರು ಬದಲಾವಣೆ ಜಗದ ನಿಯಮ ಎಂಬುದನ್ನು ಸಾಧಿಸಿ ತೋರಿಸಿಕೊಟ್ಟಿದ್ದಾರೆ. ಬೇಡ ಕುಲದಲ್ಲಿ ಹುಟ್ಟಿ ದರೋಡೆ ಸುಲಿಗೆ ಮಾಡುತ್ತಾ ಜೀವನ ನಡೆಸುತ್ತಿದ್ದ ರತ್ನಾಕರ ನಾರದ ಮಹರ್ಷಿಗಳ ಮಾರ್ಗದರ್ಶನದಂತೆ ಕಠಿಣವಾದ ತಪಸ್ಸು ಮಾಡಿ ದೈವದ ಸಾಕ್ಷಾತ್ಕಾರ ಹೊಂದುವ ಮೂಲಕ ಸ್ವಯಂ ಪರಿವರ್ತನೆಯಾಗಿ ವಾಲ್ಮೀಕಿ ಮಹರ್ಷಿಯಾಗಿ ಬದಲಾವಣೆಗೊಂಡು ವಿಶ್ವಮಾನ್ಯ ರಾಮಾಯಣ ಮಹಾಕಾವ್ಯವನ್ನು ರಚಿಸಿ ನಮಗೆ ಕೊಡುಗೆಯಾಗಿ ನೀಡಿದ್ದಾರೆ. ಮನಸ್ಸಿದ್ದಲ್ಲಿ ಮಾರ್ಗವಿದೆ ಎಂಬ ಸಂದೇಶವನ್ನು ಕೊಡುಗೆಯಾಗಿ ನೀಡಿದ ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಜೀವನದ ಸಂದೇಶಗಳು ನಮಗೆ ದಾರಿದೀಪವಾಗಿವೆ ಎಂದು ಸಚಿವ ನಾರಾಯಣಗೌಡ ಹೇಳಿದರು..

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರುಗಳಾದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳ ಮನವಿಯಂತೆ ರಾಜ್ಯ ಸರ್ಕಾರವು ಎಸ್.ಟಿ ಜನಾಂಗದ ಮೀಸಲಾತಿಯ ಪ್ರಮಾಣವನ್ನು ಶೇ.3ರಿಂದ ಶೇ. 7ಕ್ಕೆ ಹೆಚ್ಚಿಸಿ ಜಸ್ಟೀಸ್ ನಾಗಮೋಹನದಾಸ್ ಸಮಿತಿಯು ನೀಡಿರುವ ಶಿಫಾರಸ್ಸು ಆದೇಶಕ್ಕೆ ರಾಜ್ಯ ಸಚಿವ ಸಂಪುಟವು ಒಪ್ಪಿಗೆ ನೀಡಿ ಮೀಸಲಾತಿ ಹೆಚ್ಚಳದ ಆದೇಶವನ್ನು ಅನುಷ್ಠಾನಕ್ಕೆ ತಂದಿದೆ. ಕೆ.ಆರ್.ಪೇಟೆ ಪಟ್ಟಣದ ಟಿಬಿ ಬಡಾವಣೆಯಲ್ಲಿ ಸಮಾಜದ ಮನವಿಯಂತೆ ಎರಡೂವರೆ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಭವ್ಯವಾದ ವಾಲ್ಮೀಕಿ ಭವನದ ನಿರ್ಮಾಣಕ್ಕೆ ಭೂಮಿಪೂಜೆ ಮಾಡಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಸಚಿವ ನಾರಾಯಣಗೌಡ ತಿಳಿಸಿದರು.

ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ತಹಶೀಲ್ದಾರ್ ಎಂ.ವಿ.ರೂಪ ಮಾತನಾಡಿ ಸಮಾಜದ ಎಲ್ಲಾ ಜಾತಿ ಹಾಗೂ ವರ್ಗಗಳ ಜನರೊಂದಿಗೆ ಕೂಡಿಬಾಳುವ ಸದ್ಗುಣಗಳನ್ನು ಹೊಂದಿರುವ ನಾಯಕ ಸಮಾಜವು ಶಾಂತಿ ಸೌಹಾರ್ಧತೆಗೆ ಹೆಸರುವಾಸಿಯಾಗಿದೆ. ಸಮಾಜದ ಬಂಧುಗಳು ತಮ್ಮ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಬದಲಾವಣೆಯ ದಿಕ್ಕಿನಲ್ಲಿ ಸಾಗುತ್ತಾ ಪ್ರಗತಿಹೊಂದುತ್ತಿದ್ದಾರೆ ಎಂದು ಹೇಳಿದರು..

ಮೂಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಪುರಸಭೆ ಅಧ್ಯಕ್ಷೆ ಮಹಾದೇವಿ, ತಾಲ್ಲೂಕು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕಾರಿಗನಹಳ್ಳಿ ಕುಮಾರ್, ಮಂಡ್ಯ ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಆರ್.ಜಗಧೀಶ್, ಜಿಲ್ಲಾ ಪಂಚಾಯತಿ ಮಾಜಿಉಪಾಧ್ಯಕ್ಷ ಶೀಳನೆರೆ ಅಂಬರೀಶ್ ಮಹರ್ಷಿ ವಾಲ್ಮೀಕಿ ಅವರ ಜೀವನ ಸಂದೇಶವನ್ನು ಕುರಿತು ಮಾತನಾಡಿದರು. ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಡಾ.ನರಸಿಂಹರಾಜು ಮಹರ್ಷಿ ವಾಲ್ಮೀಕಿ ಅವರ ಜೀವನ ಸಂದೇಶಗಳನ್ನು ಕುರಿತು ಉಪನ್ಯಾಸ ನೀಡಿದರು..
ಕೆ.ಆರ್.ಪೇಟೆ ತಾಲ್ಲೂಕು ನಾಯಕ ಸಮಾಜದ ಅಧ್ಯಕ್ಷ ರಾಜಾನಾಯಕ, ಸಮಾಜದ ಮುಖಂಡರಾದ ನರಸನಾಯಕ, ನರೇಂದ್ರನಾಯಕ, ಟಿಎಪಿಸಿಎಂಎಸ್ ಮಾಜಿಅಧ್ಯಕ್ಷ ಜಯರಾಮೇಗೌಡ, ತಾ.ಪಂ ಇಓ ಸತೀಶ್, ಬಿಇಓ ಸೀತಾರಾಮ್, ಕಸಾಪ ಜಿಲ್ಲಾಧ್ಯಕ್ಷ ರವಿಕುಮಾರ್ ಚಾಮಲಾಪುರ, ತಾಲ್ಲೂಕು ಅಧ್ಯಕ್ಷ ಪೂರ್ಣಚಂದ್ರತೇಜಸ್ವಿ, ದಲಿತ ಮುಖಂಡ ಬಸ್ತಿರಂಗಪ್ಪ, ತಾಲ್ಲೂಕು ಸಮಾಜಕಲ್ಯಾಣಾಧಿಕಾರಿ ಜಗಧೀಶ್, ಮಹೇಶನಾಯಕ, ರಾಜು, ಪುರಸಭೆ ಮುಖ್ಯಾಧಿಕಾರಿ ಕುಮಾರ್, ಉಪಾಧ್ಯಕ್ಷೆ ಗಾಯತ್ರಿ ಸುಬ್ಬಣ್ಣ, ಸದಸ್ಯರಾದ ನಟರಾಜ್, ಶುಭಾ ಗಿರೀಶ್, ಕೆ.ಆರ್.ನೀಲಕಂಠ, ಗ್ರೇಡ್ 2 ತಹಶೀಲ್ದಾರ್ ವಿಖಾರ್ ಅಹಮದ್, ಶಿರಸ್ತೇದಾರ್ ರವಿ, ಸುಕುಮಾರ್, ಜವರಪ್ಪ, ಹಣ್ಣಿನ ಅಂಗಡಿ ರಾಮಣ್ಣ, ಕಡ್ಲೆಕಾಯಿ ಕೃಷ್ಣ ಸೇರಿದಂತೆ ಸಮಾಜದ ನೂರಾರು ಗಣ್ಯರು ಗ್ರಾಮ ಪಂಚಾಯತಿ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.. ಇದೇ ಸಂದರ್ಭದಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ, ಮಂಡ್ಯ

error: