April 29, 2024

Bhavana Tv

Its Your Channel

ಚಿಲ್ಲದಹಳ್ಳಿ ಗ್ರಾಮದಲ್ಲಿ ತಹಶೀಲ್ದಾರ್ ಎಂ.ವಿ.ರೂಪ ಸಂಚಾರ, ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಯಶಸ್ವಿ ಅನುಷ್ಠಾನ

ಕೆ.ಆರ್.ಪೇಟೆ :-ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಇಂದು ಕೃಷ್ಣರಾಜಪೇಟೆ ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಲ್ಲದಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಎಂ.ವಿ.ರೂಪ ಗ್ರಾಮದಲ್ಲಿ ಸಂಚರಿಸಿ ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರವನ್ನು ದೊರಕಿಸಿಕೊಟ್ಟರು..
ಕೃಷ್ಣರಾಜಪೇಟೆ ತಾಲ್ಲೂಕು ಮಟ್ಟದ ಅಧಿಕಾರಿಗಳ ತಂಡದೊAದಿಗೆ ಚಿಲ್ಲದಹಳ್ಳಿ ಗ್ರಾಮಕ್ಕೆ ಗ್ರಾಮ ಪಂಚಾಯತಿ ಸದಸ್ಯ ಆರ್.ಶ್ರೀನಿವಾಸ್ ಅವರೊಂದಿಗೆ ಭೇಟಿ ನೀಡಿದ ತಹಶೀಲ್ದಾರ್ ರೂಪ ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಿದರು..

ಗ್ರಾಮೀಣ ಪ್ರದೇಶದ ಬಡಜನರು ಹಾಗೂ ರೈತಬಾಂಧವರು ಪಟ್ಟಣಕ್ಕೆ ಬಂದು ಸರ್ಕಾರಿ ಕಛೇರಿಗಳಿಗೆ ತಿರುಗಾಡಿ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳಲು ಅನವಶ್ಯಕವಾಗಿ ಸುತ್ತಾಡಬಾರದು ಎಂಬ ಉದ್ಧೇಶದಿಂದ ಸರ್ಕಾರವೇ ಗ್ರಾಮಗಳಿಗೆ ತೆರಳಿ ರೈತರ ಸಮಸ್ಯೆಯನ್ನು ಆಲಿಸಿ ಸ್ಥಳದಲ್ಲಿಯೇ ಸಣ್ಣಪುಟ್ಟ ಸಮಸ್ಯೆಗಳಿಗೆ ಪರಿಹಾರವನ್ನು ದೊರಕಿಸಿಕೊಡುವ ಜೊತೆಗೆ ನಿಗಧಿತ ಸಮಯದಲ್ಲಿ ಉಳಿದ ಕಾನೂನು ಬದ್ಧ ಕೆಲಸಗಳನ್ನು ಮಾಡಿಕೊಡಲು ಮುಂದಾಗಿದೆ. ರೈತಬಾಂಧವರು ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಂಡು ನೆಮ್ಮದಿಯ ಜೀವನ ನಡೆಸಲು ಸರ್ಕಾರದ ಈ ವಿನೂತನ ಕಾರ್ಯಕ್ರಮದಿಂದ ಅನುಕೂಲವಾಗುತ್ತದೆ. ಗ್ರಾಮೀಣ ಜನರು ಯಾವುದೇ ಮಧ್ಯವರ್ತಿಗಳು ಹಾಗೂ ದಳ್ಳಾಳಿಗಳ ಕಾಟವಿಲ್ಲದೇ ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಂಡು ತಾವು ಸಮಸ್ಯೆಗಳ ಸುಳಿಯಿಂದ ಮುಕ್ತರಾಗುವ ಜೊತೆಗೆ ಇಡೀ ಗ್ರಾಮವನ್ನು ಅಭಿವೃದ್ಧಿಯ ಪಥದತ್ತ ಮುನ್ನಡೆಸಬಹುದಾಗಿದೆ ಎಂದು ತಹಶೀಲ್ದಾರ್ ರೂಪ ಹೇಳಿದರು..
ಅಗ್ರಹಾರಬಾಚಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ದೇವೇಗೌಡ, ಕಸಬಾ ಹೋಬಳಿಯ ರಾಜಶ್ವನಿರೀಕ್ಷಕಿ ಚಂದ್ರಕಲಾ, ಗ್ರಾಮಲೆಕ್ಕಾಧಿಕಾರಿ ಹರೀಶ್ ಸೇರಿದಂತೆ ಗ್ರಾಮದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ , ಮಂಡ್ಯ

error: