February 6, 2023

Bhavana Tv

Its Your Channel

ಕುರುಬರ ಸಂಘದ ನೂತನ ಅಧ್ಯಕ್ಷ ಕೆ.ಪುರುಷೋತ್ತಮ್ ನೇತೃತ್ವದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ, ಕಾಯಕಯೋಗಿ ಪ್ರಶಸ್ತಿ ಪ್ರಧಾನ, ಹಿರಿಯ ನಾಗರಿಕರಿಗೆ ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ

ಕೃಷ್ಣರಾಜಪೇಟೆ ;– ಹಾಲುಮತ ಕುರುಬ ಸಮುದಾಯದ ಬಂಧುಗಳು ಸಂಘಟಿತರಾಗಿ ನಿಮ್ಮ ಮಕ್ಕಳನ್ನು ಕಡ್ಡಾಯವಾಗಿ ವಿದ್ಯಾವಂತರನ್ನಾಗಿ ಮಾಡಿಸಿ ಸಮಾಜದ ಮುಖ್ಯವಾಹಿನಿಗೆ ಬಂದು ಸಾಧನೆ ಮಾಡಬೇಕು ಎಂದು ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಸುಬ್ರಹ್ಮಣ್ಯ ಕರೆ ನೀಡಿದರು ..

ಅವರು ಕೆ.ಆರ್.ಪೇಟೆ ತಾಲ್ಲೂಕು ಕುರುಬರ ಸಂಘದ ನೂತನ ಅಧ್ಯಕ್ಷ ಕೆ.ಪುರುಷೋತ್ತಮ್ ನೇತೃತ್ವದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ, ಕಾಯಕಯೋಗಿ ಪ್ರಶಸ್ತಿ ಪ್ರಧಾನ, ಹಿರಿಯ ನಾಗರಿಕರಿಗೆ ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು…

ಸುಮಾರು 20 ವರ್ಷಗಳ ನಂತರ ಕೆ.ಆರ್.ಪೇಟೆ ತಾಲ್ಲೂಕು ಕುರುಬರ ಸಂಘವು ಅಸ್ತಿತ್ವಕ್ಕೆ ಬಂದಿದೆ. ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾನ್ಯತೆ ಪಡೆದಿರುವ ಈ ಸಂಘವೇ ಅಧಿಕೃತವಾದ ಸಂಘವಾಗಿದೆ. ಸಮಾಜದ ಬಂಧುಗಳು ಅಪಪ್ರಚಾರಗಳಿಗೆ ಕಿವಿಗೊಡದೆ ಸಂಘದ ನೂತನ ಅಧ್ಯಕ್ಷ ಕೆ.ಪುರುಷೋತ್ತಮ್ ಅವರ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿರುವ
ಸಂಘವೇ ಅಧಿಕೃತ ಸಂಘವೆAದು ರಾಜ್ಯಾಧ್ಯಕ್ಷ ಸುಬ್ರಹ್ಮಣ್ಯ ಮತ್ತು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಸುರೇಶ್ ಘೋಷಿಸಿದರು..

ದಾಸಶ್ರೇಷ್ಠ ಭಕ್ತ ಕನಕದಾಸರು, ಸ್ವಾತಂತ್ರ‍್ಯವೀರ ಸಂಗೊಳ್ಳಿ ರಾಯಣ್ಣನಂತಹ ಕೆಚ್ಚೆದೆಯ ಸೇನಾನಿಗಳನ್ನು ಕೊಡುಗೆಯಾಗಿ ನೀಡಿರುವ ಸಮುದಾಯದವರಾದ ಹಾಲುಮತ ಕುರುಬ ಸಮಾಜಕ್ಕೆ ಸೇರಿರುವ ನಾವುಗಳು ನಮ್ಮ ನಮ್ಮಲ್ಲಿ ಏನೇ ಭಿನ್ನಾಭಿಪ್ರಾಯಗಳಿದ್ದರೂ ಎಲ್ಲವನ್ನೂ ಬದಿಗಿಟ್ಟು ಸಮಾಜದ ಸಂಘಟನೆಗಾಗಿ ಎಲ್ಲರೂ ಒಂದಾಗಿ ಹೆಜ್ಜೆಹಾಕಬೇಕು. ಕಷ್ಟಜೀವಿಗಳಾದ ಸಮಾಜದ ಬಂಧುಗಳು ನಿಮ್ಮ ಮಕ್ಕಳಿಗಾಗಿ ಹಣ, ಆಸ್ತಿ ಸಂಪಾದನೆ ಮಾಡುವ ಕಡೆಗೆ ಗಮನ ನೀಡದೇ ನಿಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳಿಸಿ ವಿದ್ಯಾವಂತರನ್ನಾಗಿ ಮಾಡಿಸಿ ಸಮಾಜಕ್ಕೆ ಆಸ್ತಿಯಾಗಿ ಕೊಡುಗೆ ನೀಡಬೇಕು ಎಂದು ಸುಬ್ರಹ್ಮಣ್ಯ ಕರೆ ನೀಡಿದರು ..

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಮಾತನಾಡಿ ಹಾಲುಮತ ಕುರುಬ ಸಮಾಜದ ಆರಾಧ್ಯದೈವ ಶ್ರೀ ಮರಡಿಲಿಂಗೇಶ್ವರ ಕ್ಷೇತ್ರದ ಅಭಿವೃದ್ಧಿಗೆ ಸಚಿವರಾದ ಡಾ.ನಾರಾಯಣಗೌಡ ಅವರು ಎಂಟೂವರೆ ಕೋಟಿ ರೂಪಾಯಿಗಳ ವಿಶೇಷ ಅನುದಾನ ಹಾಗೂ ಕೆ.ಆರ್.ಪೇಟೆ ಪಟ್ಟಣದ ಚನ್ನರಾಯಪಟ್ಟಣ ಮುಖ್ಯ ರಸ್ತೆಗೆ ಹೊಂದಿಕೊAಡAತೆ ಸುಸಜ್ಜಿತವಾದ ನಿವೇಶನದಲ್ಲಿ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಭವ್ಯವಾದ ಕನಕಭವನದ ನಿರ್ಮಾಣ ಕಾಮಗಾರಿಗೆ ಕಾಗಿನೆಲೆ ಕನಕ ಗುರುಪೀಠದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ನಿರಂಜನಾನAದಪುರಿ ಸ್ವಾಮೀಜಿಗಳು ಭೂಮಿಪೂಜೆ ಮಾಡುತ್ತಿದ್ದಾರೆ. ನವೆಂಬರ್ 14ರ ಸೋಮವಾರ ನಡೆಯುತ್ತಿರುವ ಎರಡೂ ಕಾರ್ಯಕ್ರಮಗಳಿಗೆ ಸಹಸ್ರಾರು ಸಂಖ್ಯೆಯಲ್ಲಿ ಸಮಾಜದ ಬಂಧುಗಳು ಭಾಗವಹಿಸುವ ಮೂಲಕ ಜಗದ್ಗುರುಗಳನ್ನು ಭಕ್ತಿಪೂರ್ವಕವಾಗಿ ಸ್ವಾಗತಿಸುವ ಜೊತೆಗೆ ಕಾರ್ಯಕ್ರಮಕ್ಕೆ ಶಕ್ತಿತುಂಬಬೇಕು ಎಂದು ಮನವಿ ಮಾಡಿದ ಶ್ರೀನಿವಾಸ್ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ತಾಲ್ಲೂಕು ಸಂಘವು ಸಮಾಜದ ಹಿರಿಯ ಅಧಿಕಾರಿಗಳು, ಹಿರಿಯರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡುವ ಮೂಲಕ ನಾಗರಿಕ ಸಮಾಜವೇ ಮೆಚ್ಚುವಂತಹ ಕೆಲಸ ಮಾಡಿದ್ದಾರೆ. ನೂತನ ಸಂಘವು ಸಮಾಜಕ್ಕೆ ಶಕ್ತಿತುಂಬುವ ಕೆಲಸ ಮಾಡಲಿ ಎಂದು ಶ್ರೀನಿವಾಸ್ ಶುಭ ಹಾರೈಸಿದರು ..

ಜಿಲ್ಲಾ ಸಂಘದ ಅಧ್ಯಕ್ಷ ಸುರೇಶ್, ಪ್ರಧಾನ ಕಾರ್ಯದರ್ಶಿ ಶಶಿಧರ್, ಆರ್.ಟಿ.ಓ ಅಧಿಕಾರಿ ಮಲ್ಲಿಕಾರ್ಜುನ, ವಿಶೇಷ ಭೂಸ್ವಾಧೀನ ಅಧಿಕಾರಿ ನಟರಾಜ್, ಜಿಲ್ಲಾ ಪಂಚಾಯತಿ ಮಾಜಿಸದಸ್ಯ ಕೋಡಿಮಾರನಹಳ್ಳಿ ದೇವರಾಜು, ರಾಜ್ಯ ಕುರುಬರ ಸಂಘದ ನಿರ್ದೇಶಕಿ ಶಾಂತಮ್ಮ, ತಾಲ್ಲೂಕು ಸಂಘದ ಕಾರ್ಯದರ್ಶಿ ಕಾಡುಮೆಣಸ ಚಂದ್ರು, ಕೆ.ಆರ್.ಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಕೆ.ಎಸ್.ಶಿವಕುಮಾರ್, ನಿರ್ದೇಶಕರಾದ ಸಾಯಿಸುಮೀತ್, ಪುರಸಭೆ ಮಾಜಿಅಧ್ಯಕ್ಷೆ ಶಕುಂತಲಾ ರವಿಕುಮಾರ್, ಪುರಸಭೆ ಮಾಜಿಸದಸ್ಯ ಕೆ.ವಿನೋದ್, ತಾಲ್ಲೂಕು ಪ್ರಾಥಮಿಕ ಶಾಲಾಶಿಕ್ಷಕರ ಸಂಘದ ಅಧ್ಯಕ್ಷ ಧರ್ಮಪ್ಪ, ಸವಿತಾರಮೇಶ್, ರೇಖಾ ಸೇರಿದಂತೆ ಸಾವಿರಾರು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು..

ಕಾಗಿನೆಲೆ ಕನಕ ಗುರುಪೀಠದ ಕೆ.ಆರ್.ನಗರ ಶಾಖಾಮಠದ ಶ್ರೀ ಗುರುಸಿದ್ಧೇಶ್ವರ ಸ್ವಾಮೀಜಿ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದರು..ಉದಯೋನ್ಮುಖ ಗಾಯಕರಾದ ಕೇಶವ್ ನೇತೃತ್ವದ ಓಂ ಮೆಲೊಡೀಸ್ ಸುಗಮ ಸಂಗೀತ ತಂಡವು ನಾಡಗೀತೆ ಮತ್ತು ರೈತಗೀತೆಗಳನ್ನು ಹಾಡಿದರು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ, ಮಂಡ್ಯ

About Post Author

error: