April 19, 2024

Bhavana Tv

Its Your Channel

ಚಿಕ್ಕೋನಹಳ್ಳಿ ರೇಷ್ಮೆ ತರಬೇತಿ ಶಾಲೆಯ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಕೃಷ್ಣರಾಜಪೇಟೆ :-ಕೃಷ್ಣರಾಜಪೇಟೆ ತಾಲ್ಲೂಕಿನ ಸಮಗ್ರವಾದ ಅಭಿವೃದ್ಧಿಗೆ ಕ್ಷೇತ್ರದ ಶಾಸಕನಾಗಿ ನಾನು ಬದ್ಧನಾಗಿದ್ದೇನೆ. ಆನೆಗೊಳ ಗ್ರಾಮದಿಂದ ಅಶೋಕನಗರದವರೆಗೆ ರಾಜ್ಯ ಹೆದ್ದಾರಿಯ ಗುಂಡಿಗಳನ್ನು ಮುಚ್ಚಿ ರಸ್ತೆಯನ್ನು ಅಭಿವೃದ್ಧಿಪಡಿಸಲು 15ಕೋಟಿ ರೂಪಾಯಿಗಳ ಅನುದಾನವು ಬಿಡುಗಡೆಯಾಗಿದ್ದು ಸಧ್ಯದಲ್ಲಿಯೇ ಕಾಮಗಾರಿ ಆರಂಭವಾಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ಹೇಳಿದರು ..

ಅವರು ತಾಲ್ಲೂಕಿನ ಚಿಕ್ಕೋನಹಳ್ಳಿ ರೇಷ್ಮೆ ತರಬೇತಿ ಶಾಲೆಯ ಸಭಾಂಗಣದಲ್ಲಿ ನಡೆದ ತಾಲ್ಲೂಕಿನ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಇಲಾಖೆಯ ಪ್ರಗತಿಯನ್ನು ಅವಲೋಕನ ನಡೆಸಿ ಮಾತನಾಡಿದರು..
ಸರ್ಕಾರದ ಜನಪರವಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಬೇಜವಬ್ದಾರಿತನವನ್ನು ಪ್ರದರ್ಶನ ಮಾಡುವ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮಕ್ಕೆ ಶಿಫಾರಸ್ಸು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ ಸಚಿವರು ವಿವಿಧ ಯೋಜನೆಗಳಿಗೆ ರಾಜ್ಯ ಸರ್ಕಾರವು ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಬಿಡುಗಡೆ ಮಾಡಿರುವ ಅನುದಾನ ಹಾಗೂ ಕಾಮಗಾರಿಗಳ ಬಗ್ಗೆ ಪತ್ರಕರ್ತರು ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಪತ್ರಕರ್ತರನ್ನು ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಕರೆದೊಯ್ದು ಮಾಹಿತಿ ನೀಡಬೇಕು. ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂದು ಟೀಕೆ ಟಿಪ್ಪಣಿ ಮಾಡುವವರಿಗೆ ನಾನು ಮಂಜೂರು ಮಾಡಿಸಿ ತಂದಿರುವ ಕಾಮಗಾರಿಗಳೇ ಉತ್ತರ ನೀಡುತ್ತವೆ..ಸಣ್ಣ ನೀರಾವರಿ ಯೋಜನೆಯೊಂದರಲ್ಲಿಯೇ ಕೆರೆ ಕಟ್ಟೆಗಳ ಅಭಿವೃದ್ಧಿಗೆ 500ಕೋಟಿರೂಗಳಿಗೂ ಹೆಚ್ಚಿನ ಅನುದಾನವು ಬಿಡುಗಡೆಯಾಗಿದ್ದು ಕಾಮಗಾರಿಗಳು ಪ್ರಗತಿಯಲ್ಲಿವೆ.35 ಶಾಲಾ ಕಟ್ಟಡಗಳ ನಿರ್ಮಾಣಕ್ಕೆ 10 ಕೋಟಿ ರೂ, ಭಾರಿ ಮಳೆಯಿಂದಾಗಿ ಹಾಳಿಗೊಳಗಾಗಿರುವ ಕೆರೆ ಕಟ್ಟೆಗಳ ದುರಸ್ತಿಗೆ 50 ಕೋಟಿ ರೂ ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಸಚಿವ ನಾರಾಯಣಗೌಡ ಸಭೆಯಲ್ಲಿ ಮಾಹಿತಿ ನೀಡಿದರು..

ಕೃಷ್ಣರಾಜಪೇಟೆ ತಾಲ್ಲೂಕಿನ 34 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಬಸವ ವಸತಿ ಯೋಜನೆ ಹಾಗೂ ಅಂಬೇಡ್ಕರ್ ವಸತಿ ಯೋಜನೆ ಅಡಿಯಲ್ಲಿ 3 ಸಾವಿರ ಆಶ್ರಯ ಮನೆಗಳು ಮಂಜೂರಾಗಿದ್ದು ಫಲಾನುಭವಿಗಳ ಆಯ್ಕೆ ಮಾಡಲಾಗಿದೆ. ಆಶ್ರಯ ಯೋಜನೆಯ ಅಡಿಯಲ್ಲಿ ಮನೆಗಳನ್ನು ನಿರ್ಮಿಸಲು ನಿವೇಶನರಹಿತರಿಗೆ ನಿವೇಶನ ನೀಡಲು ಭೂಮಿಯನ್ನು ಗುರುತಿಸಿ ತಾಲ್ಲೂಕು ಪಂಚಾಯತಿಗೆ ಹಸ್ತಾಂತರ ಮಾಡಲಾಗಿದೆ ಎಂದು ತಹಶೀಲ್ದಾರ್ ಎಂ.ವಿ.ರೂಪ ಸಭೆಗೆ ಮಾಹಿತಿ ನೀಡಿದರು..

ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಸೀತಾರಾಮ್, ಗ್ರಾಮೀಣ ಕುಡಿಯುವ ನೀರು ಇಲಾಖೆಯ ಎಇಇ ರವಿಕುಮಾರ್, ಜಿಲ್ಲಾ ಪಂಚಾಯತಿ ಎಂಜಿನಿಯರಿAಗ್ ಉಪವಿಭಾಗದ ಲಕ್ಚ್ಮೀಕಾಂತ್, ತಾಲ್ಲೂಕು ಪಂಚಾಯತಿ ಇಓ ಸತೀಶ್, ಹೇಮಾವತಿ ಜಲಾಶಯ ಯೋಜನೆಯ ಕಾರ್ಯಪಾಲಕ ಎಂಜಿನಿಯರ್ ಕಿಜರ್ ಅಹಮದ್, ಲೋಕೋಪಯೋಗಿ ಇಲಾಖೆಯ ಎಇಇ ಪುಟ್ಟರಾಜು, ಕಾರ್ಯಪಾಲಕ ಎಂಜಿನಿಯರ್ ಭಾಸ್ಕರ್, ವಲಯ ಅರಣ್ಯಾಧಿಕಾರಿ ಗಂಗಾಧರ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಶೈಲೇಂದ್ರಕುಮಾರ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್, ತೋಟಗಾರಿಕೆ ಇಲಾಖೆ ಸಹಾಯಕನಿರ್ದೇಶಕ ಲೋಕೇಶ್, ಅಭ್ಕಾರಿ ಇನ್ಸ್ ಪೆಕ್ಟರ್ ಭವ್ಯ, ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ರಘು, ಪುರಸಭೆ ಮುಖ್ಯಾಧಿಕಾರಿ ಕುಮಾರ್, ಭೂದಾಖಲೆಗಳ ಸಹಾಯಕನಿರ್ದೇಶಕ ಪರಶಿವನಾಯಕ್, ಉಪನೊಂದಣಾಧಿಕಾರಿ ಕುಮಾರಸ್ವಾಮಿ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು ಪ್ರಗತಿ ಮಾಹಿತಿ ನೀಡಿದರು..

ಸಭೆಯಲ್ಲಿ ಜಿಲ್ಲಾಧಿಕಾರಿ ಗೋಪಾಲಕೃಷ್ಣ, ಸಚಿವ ಡಾ.ನಾರಾಯಣಗೌಡರ ಆಪ್ತಕಾರ್ಯದರ್ಶಿ ಪ್ರಭಾಕರ್, ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ಧನರಾಜ್ ಬೋಳಾರೆ, ತಾಲ್ಲೂಕು ಪಂಚಾಯತಿ ಆಡಳಿತಾಧಿಕಾರಿ ನಾಗರಾಜು ಪಾಂಡವಪುರ ಉಪವಿಭಾಗಾಧಿಕಾರಿ ನೊಂಜಾಯ ಮಹಮದ್ ಅಕ್ರಂ, ತಹಶೀಲ್ದಾರ್ ರೂಪ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್, ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಡಾ.ನರಸಿಂಹರಾಜು ಉಪಸ್ಥಿತರಿದ್ದರು.. ಇದೇ ಮೊದಲ ಬಾರಿಗೆ ಕೆ.ಆರ್.ಪೇಟೆಗೆ ಆಗಮಿಸಿದ ನೂತನ ಜಿಲ್ಲಾಧಿಕಾರಿ ಗೋಪಾಲಕೃಷ್ಣ ಮತ್ತು ನೂತನ ಉಪವಿಭಾಗಾಧಿಕಾರಿ ನೊಂಜಾಯ ಮಹಮದ್ ಅಕ್ರಂ ಅವರನ್ನು ಸಚಿವ ಡಾ.ನಾರಾಯಣಗೌಡ ಸನ್ಮಾನಿಸಿ ಗೌರವಿಸಿದರು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ, ಮಂಡ್ಯ

error: