
ಕೃಷ್ಣರಾಜಪೇಟೆ:- ವೈಕುಂಠ ಏಕಾದಶಿ ಕೆ.ಆರ್.ಪೇಟೆಯ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಗಳ ಸಂಭ್ರಮ, ಸಾವಿರಾರು ಭಕ್ತಾದಿಗಳ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದರು
ವೈಕುಂಠ ಏಕಾದಶಿಯ ಅಂಗವಾಗಿ ಇಂದು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಪೂಜೆ ಪುರಸ್ಕಾರಗಳು ನಡೆದವು..
ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತಾದಿಗಳು ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ, ಪದ್ಮಾವತಿ ಅಮ್ಮನವರು ಹಾಗೂ ಶ್ರೀಮಹಾಲಕ್ಷ್ಮೀ ಅಮ್ಮನವರ ಉತ್ಸವ ಮೂರ್ತಿಗಳ ದರ್ಶನ ಪಡೆದು ಪುನೀತರಾದರು..
ಇಂದು ವೈಕುಂಠ ಏಕಾದಶಿಯ ಶುಭ ದಿವಸವಾದ್ದರಿಂದ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ದೇವಾಲಯದಲ್ಲಿ ಸಡಗರ ಸಂಭ್ರಮವು ನೆಲೆಸಿತ್ತು. ಮುಂಜಾನೆ ಐದು ಗಂಟೆಯಿAದಲೇ ಸ್ವಾಮಿಯವರಿಗೆ ವಿಶೇಷ ಪೂಜೆಗಳು, ಪುಷ್ಪಾಭಿಷೇಕ ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮಗಳು ದೇವಾಲಯದ ಪ್ರಧಾನ ಅರ್ಚಕರಾದ ವೇದಬ್ರಹ್ಮ ಶ್ರೀ. ನಾರಾಯಣಾಚಾರ್ಯ ಅವರ ನೇತೃತ್ವದಲ್ಲಿ ನಡೆದವು.
ಲೋಕಕಲ್ಯಾಣಾರ್ಥವಾಗಿ ನಡೆದ ವಿಶೇಷ ಪೂಜಾಕಾರ್ಯಗಳಲ್ಲಿ ಸಾವಿರಾರು ಭಕ್ತಾದಿಗಳು ಭಾಗವಹಿಸಿದ್ದರು..
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ, ಮಂಡ್ಯ

More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ