May 21, 2024

Bhavana Tv

Its Your Channel

ಜನತೆಯ ಪ್ರೀತಿ ವಿಶ್ವಾಸ ಗಳಿಸಿರುವ ಸಚಿವ ನಾರಾಯಣಗೌಡರ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ- ದೇವರಾಜು

ಕೆ.ಆರ್.ಪೇಟೆಯಲ್ಲಿ ಬಿಜೆಪಿ ಸಂಘಟನೆ ಚುರುಕಾಗಿದೆ. ತಾಲ್ಲೂಕಿನ ಜನತೆಯ ಪ್ರೀತಿ ವಿಶ್ವಾಸ ಗಳಿಸಿರುವ ಸಚಿವ ನಾರಾಯಣಗೌಡರ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ..ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಮೈಸೂರು ದೇವರಾಜು ವಿಶ್ವಾಸ ..

ಕೆ.ಆರ್.ಪೇಟೆ ತಾಲ್ಲೂಕು ಜಿಲ್ಲೆಯಲ್ಲಿಯೇ ಮಾದರಿ ತಾಲೂಕಾಗಿದ್ದು ಅಭಿವೃದ್ಧಿ ಕೆಲಸ ಕಾರ್ಯಗಳ ಅನುಷ್ಠಾನದಲ್ಲಿ ಮೊದಲ ಸ್ಥಾನದಲ್ಲಿದೆ. ಬಿಜೆಪಿ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಪ್ರಾಮಾಣಿಕವಾಗಿ ದುಡಿಯಿತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮೈಸೂರು ದೇವರಾಜು ಹೇಳಿದರು..

ಅವರು ಇಂದು ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದ ಬೂತ್ ವಿಜಯ ಅಭಿಯಾನದ ಅಂಗವಾಗಿ ನಡೆದ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡಿದರು..

ಕೆ.ಆರ್.ಪೇಟೆ ತಾಲ್ಲೂಕಿನ ಎಲ್ಲಾ 258 ಬೂತ್ ಗಳಲ್ಲಿಯೂ ಬೂತ್ ವಿಜಯ ಅಭಿಯಾನವನ್ನು ನಡೆಸಿ ಕಾರ್ಯಕರ್ತರ ಮನೆಗಳ ಮೇಲೆ ಬಿಜೆಪಿ ಪಕ್ಷದ ಬಾವುಟವನ್ನು ಹಾರಿಸಲಾಗಿದೆ. ಬೂತ್ ಮಟ್ಟದಲ್ಲಿ ಪೇಜ್ ಪ್ರಮುಖ್ ಕಾರ್ಯಕರ್ತರನ್ನು ಗುರುತಿಸಿ ಪಕ್ಷದ ಸಂಘಟನೆ ಮಾಡುವಲ್ಲಿ ಶಕ್ತಿ ತುಂಬುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಲಾಗುತ್ತಿದೆ. ಕಳೆದ ಉಪಚುನಾವಣೆಯಲ್ಲಿ ಡಾ.ನಾರಾಯಣಗೌಡ ಅವರು ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿ ದಿಗ್ವಿಜಯವನ್ನು ಸಾಧಿಸಿ, ಇತಿಹಾಸವನ್ನು ನಿರ್ಮಾಣ ಮಾಡಿದ್ದಾರೆ. ತಾಲ್ಲೂಕಿನ 34 ಗ್ರಾಮ ಪಂಚಾಯತಿಗಳ ಪೈಕಿ 22ಕ್ಕೂ ಹೆಚ್ಚಿನ ಪಂಚಾಯಿತಿಗಳು ಬಿಜೆಪಿ ತೆಕ್ಕೆಯಲ್ಲಿವೆ. ಭಾರತೀಯ ಜನತಾ ಪಕ್ಷದ ಸಂಘಟನೆಯು ತಾಲ್ಲೂಕಿನಲ್ಲಿ ದಿನದಿಂದ ದಿನಕ್ಕೆ ಬಲವರ್ಧನೆಯಾಗುತ್ತಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಹೊಸ ಹುರುಪಿನಿಂದ ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ಪ್ರಾಮಾಣಿಕವಾಗಿ ತೊಡಗಿಸಿಕೊಂಡು 2023 ರಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಸಚಿವ ನಾರಾಯಣಗೌಡ ಅವರನ್ನು ಗೆಲ್ಲಿಸಿ ವಿಜಯಮಾಲೆ ತೊಡಿಸಲು ಸಂಕಲ್ಪ ಮಾಡಿದ್ದಾರೆ. ಜನರ ವಿಶ್ವಾಸ ಹಾಗೂ ಅಭಿಮಾನವನ್ನು ಗಳಿಸಿ ಒಬ್ಬ ಸಾಮಾನ್ಯ ಸೇವಕನಂತೆ ದುಡಿಯುತ್ತಿರುವ ಸಚಿವ ನಾರಾಯಣಗೌಡರ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಈ ದಿಕ್ಕಿನಲ್ಲಿ ಪಕ್ಷದ ಕಾರ್ಯಕರ್ತರು ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅಭಿವೃದ್ಧಿ ಕೆಲಸಗಳು, ಜನೋಪಯೋಗಿ ಕಾರ್ಯಕ್ರಮಗಳ ಬಗ್ಗೆ ಜನಸಾಮಾನ್ಯರಿಗೆ ಮಾಹಿತಿ ನೀಡಿ ಅರಿವಿನ ಜಾಗೃತಿಯನ್ನು ಮೂಡಿಸಬೇಕು ಎಂದು ನಾರಾಯಣಗೌಡ ಕೈಮುಗಿದು ಮನವಿ ಮಾಡಿದರು..

ಕೃಷ್ಣರಾಜಪೇಟೆ ತಾಲ್ಲೂಕು ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಮೈಷುಗರ್ ಮಾಜಿಅಧ್ಯಕ್ಷರು ಹಾಗೂ ತಾಲ್ಲೂಕು ಬಿಜೆಪಿ ಉಸ್ತುವಾರಿಗಳಾದ ಶಿವಲಿಂಗೇಗೌಡ, ಬಿಜೆಪಿ ಕಾರ್ಯದರ್ಶಿ ಚೋಕನಹಳ್ಳಿ ಪ್ರಕಾಶ್, ಸಚಿವರ ಆಪ್ತಸಹಾಯಕ ದಯಾನಂದ ಸೇರಿದಂತೆ ನೂರಾರು ಕಾರ್ಯಕರ್ತರು ಹಾಗೂ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ, ಮಂಡ್ಯ

error: