April 24, 2024

Bhavana Tv

Its Your Channel

ಶ್ರೀ ಮರಡಿಲಿಂಗೇಶ್ವರ ದೇವಾಲಯದ ಪುನರ್ ನಿರ್ಮಾಣ ಕಾಮಗಾರಿಯ ಪರಿಶೀಲನೆ ನಡೆಸಿದ ಸಚಿವ ಡಾ.ನಾರಾಯಣಗೌಡ

ಕೃಷ್ಣರಾಜಪೇಟೆ :- ಹಾಲುಮತ ಕುರುಬ ಸಮಾಜದ ಆರಾಧ್ಯದೈವ ಕೆ.ಆರ್.ಪೇಟೆ ತಾಲ್ಲೂಕಿನ ಶ್ರೀ ಮರಡಿಲಿಂಗೇಶ್ವರ ದೇವಾಲಯದ ಪುನರ್ ನಿರ್ಮಾಣ ಕಾಮಗಾರಿಯ ಪರಿಶೀಲನೆ ನಡೆಸಿದ ಸಚಿವ ಡಾ.ನಾರಾಯಣಗೌಡ. ಗ್ರಾನೈಟ್ ಕಲ್ಲನ್ನು ಬಳಸಿ ಭರದಿಂದ ನಡೆಯುತ್ತಿರುವ ದೇವಾಲಯ ಜೀರ್ಣೋದ್ಧಾರ ಕಾಮಗಾರಿಗೆ ಮೆಚ್ಚುಗೆ ಸೂಚಿಸಿದ ಸಚಿವರು …

ಕೃಷ್ಣರಾಜಪೇಟೆ ತಾಲ್ಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಹಾಲುಮತ ಕುರುಬ ಸಮಾಜದ ಆರಾಧ್ಯದೈವ ಶ್ರೀ ಮರಡಿಲಿಂಗೇಶ್ವರ ಕ್ಷೇತ್ರವು ಎಂಟೂವರೆ ಕೋಟಿ ರೂಗಳ ವಿಶೇಷ ಅನುದಾನದಲ್ಲಿ ಸಮಗ್ರವಾಗಿ ಅಭಿವೃದ್ಧಿಯಾಗುತ್ತಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕರು ಹಾಗೂ ರಾಜ್ಯದ ಸಚಿವರಾದ ಡಾ.ನಾರಾಯಣಗೌಡ ಅವರು ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್ ಅವರೊಂದಿಗೆ ಭೇಟಿ ನೀಡಿ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು..

ದೊಡ್ಡಯ್ಯ ಚಿಕ್ಕಯ್ಯನವರ ಜೋಡಿ ರಥ ನಡೆಯುವ ಮರಡಿಲಿಂಗೇಶ್ವರ ಕ್ಷೇತ್ರವನ್ನು ವಿಶೇಷವಾಗಿ ವಾಸ್ತುಬದ್ಧವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಸುಸಜ್ಜಿತವಾದ ರಸ್ತೆಗಳು, ಬಾಕ್ಸ್ ಚರಂಡಿ, ಕಲ್ಯಾಣಿ ಸೇರಿದಂತೆ ಮರಡಿಲಿಂಗೇಶ್ವರ ದೇವಾಲಯವನ್ನು ಗ್ರಾನೈಟ್ ಶಿಲೆಯಿಂದ ನಿರ್ಮಿಸಲಾಗುತ್ತಿದೆ. ಕ್ಷೇತ್ರದ ಶಾಸಕರು ಹಾಗೂ ರಾಜ್ಯದ ಯುವಸಬಲೀಕರಣ ಕ್ರೀಡೆ ಹಾಗೂ ರೇಷ್ಮೆ ಸಚಿವರಾದ ಡಾ.ನಾರಾಯಣಗೌಡ ಅವರ ಆಸಕ್ತಿಯ ಮೇರೆಗೆ 8.5 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿಸಿ ತಂದಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಪುನರೋತ್ಥಾನ ಟ್ರಸ್ಟ್ ನ ಸಹಯೋಗದಲ್ಲಿ ದೇವಾಲಯವನ್ನು ಜೀರ್ಣೋದ್ಧಾರ ಮಾಡುವ ಗುತ್ತಿಗೆ ಕಂಪನಿಯು ಮರಡಿಲಿಂಗೇಶ್ವರ ದೇವಾಲಯದ ಪುನರ್ ನಿರ್ಮಾಣ ಮಾಡುತ್ತಿದ್ದು ಗುಣಮಟ್ಟದ ಕಾಮಗಾರಿಯು ನಡೆಯುತ್ತಿರುವುದನ್ನು ಗಮನಿಸಿದ ಸಚಿವರು ಹಾಗೂ ಹಾಲುಮತ ಕುರುಬ ಸಮಾಜದ ಮುಖಂಡರು ಮೆಚ್ಚುಗೆ ವ್ಯಕ್ತಪಡಿಸಿದರು…ದೇವಾಲಯದ ಸುತ್ತಲೂ ಪ್ರಾಂಗಣ ನಿರ್ಮಾಣ ಕಾಮಗಾರಿಯು ಭರದಿಂದ ನಡೆಯುತ್ತಿದ್ದು ಗರ್ಭಗುಡಿಯನ್ನು ತೆರವುಗೊಳಿಸಿ ಪುನರ್ ನಿರ್ಮಾಣ ಮಾಡುವ ಕೆಲಸವು ವಾಸ್ತುಬದ್ಧವಾಗಿ ಸ್ಥಪತಿಗಳ ಮಾರ್ಗದರ್ಶನದಲ್ಲಿ ನಡೆಯುತ್ತಿದೆ..

ಈ ಸಂದರ್ಭದಲ್ಲಿ ಕಿಕ್ಕೇರಿ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ಸುನೀಲ್ ಕುಮಾರ್, ತಾಲ್ಲೂಕು ಪಂಚಾಯತಿ ಮಾಜಿಅಧ್ಯಕ್ಷ ಬಿ.ಜವರಾಯಿಗೌಡ, ಪ್ರಥಮದರ್ಜೆ ಗುತ್ತಿಗೆದಾರ ಡಿ.ಪಿ.ಪರಮೇಶ್, ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಕಿಕ್ಕೇರಿ ಪ್ರಭಾಕರ್, ಶೀಳನೆರೆ ಅಂಬರೀಶ್, ಸಚಿವ ನಾರಾಯಣಗೌಡರ ಆಪ್ತಸಹಾಯಕ ದಯಾನಂದ ಸೇರಿದಂತೆ ಹಾಲುಮತ ಕುರುಬ ಸಮಾಜದ ಮುಖಂಡರು ಹಾಗೂ ನಗರೂರು, ಮಾರ್ಗೋನಹಳ್ಳಿ ಗ್ರಾಮಗಳ ಗ್ರಾಮಸ್ಥರು ಉಪಸ್ಥಿತರಿದ್ದರು..

ವರದಿ. ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ, ಮಂಡ್ಯ

error: