April 24, 2024

Bhavana Tv

Its Your Channel

ನಾಳೆ ಬಿ.ಎಲ್.ದೇವರಾಜು ಅವರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರ ಸ್ವಾಭಿಮಾನಿ ಸಮಾವೇಶ

ಕೃಷ್ಣರಾಜಪೇಟೆ:– ನಾನು ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಪ್ರಕಟಿಸಿರುವ ಅಭ್ಯರ್ಥಿ ಹೆಸರನ್ನು ಪುನರ್ ಪರಿಶೀಲನೆ ಮಾಡಿ ತಮಗೊಂದು ಅವಕಾಶ ಮಾಡಿಕೊಡಬೇಕು ಎಂಬುದಷ್ಟೇ ನನ್ನ ಆಗ್ರಹವಾಗಿದೆ. ನಾಳೆ ನಡೆಯಲಿರುವ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ..ನಾಳಿನ ಸಭೆಯಲ್ಲಿ ಕನಿಷ್ಠ ಹತ್ತು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ..ನಾನು ಬಂಡಾಯಗಾರನಲ್ಲ, ನನಗಾಗಿರುವ ಅನ್ಯಾಯದ ವಿರುದ್ಧವಷ್ಟೇ ನನ್ನ ಹೋರಾಟ ಬಿ.ಎಲ್.ದೇವರಾಜು ಸ್ಪಷ್ಟೋಕ್ತಿ ..

ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರ ಸ್ವಾಭಿಮಾನಿ ಸಮಾವೇಶವು ಹಿರಿಯ ಜೆಡಿಎಸ್ ನಾಯಕರಾದ ಬಿ.ಎಲ್.ದೇವರಾಜು ಅವರ ನೇತೃತ್ವದಲ್ಲಿ ನಡೆಯಲಿದ್ದು ಕೆ.ಆರ್.ಪೇಟೆ ಪಟ್ಟಣದ ಟಿಎಪಿಸಿಎಂಎಸ್ ನ ಎಸ್.ಎಂ.ಲಿAಗಪ್ಪ ಸಹಕಾರ ಭವನದ ಆವರಣದಲ್ಲಿ ಶಾಮಿಯಾನ ಹಾಕಿ ವೇದಿಕೆಯನ್ನು ಸಿದ್ಧಪಡಿಸುವ ಕಾರ್ಯವು ಭರದಿಂದ ನಡೆಯುತ್ತಿವೆ.

ಜೆಡಿಎಸ್ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಿರುವ ಹೆಚ್.ಟಿ.ಮಂಜು ಅವರ ಹೆಸರನ್ನು ಅಂತಿಮಗೊಳಿಸುವ ಮೊದಲು ತಾಲ್ಲೂಕಿನ ಕಾರ್ಯಕರ್ತರು ಹಾಗೂ ಮುಖಂಡರೊAದಿಗೆ ಒಮ್ಮೆ ಪರಾಮರ್ಶೆ ನಡೆಸಿ ಪಕ್ಷದಲ್ಲಿ ಅತ್ಯಂತ ಹಿರಿಯನಾಗಿರುವ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತ್ಯಲ್ಪ ಮತಗಳ ಅಂತರದಿAದ ಪರಾಭವಗೊಂಡಿರುವ ತಮಗೆ ಒಂದು ಅವಕಾಶ ಮಾಡಿಕೊಡಬೇಕು. ಕೆ.ಆರ್.ಪೇಟೆ ತಾಲ್ಲೂಕಿನ ನಿಷ್ಠಾವಂತ ಹಾಗೂ ಮೂಲ ಜೆಡಿಎಸ್ ಕಾರ್ಯಕರ್ತರ ಆಶಯದಂತೆ ತಮಗೆ ಒಂದು ಅವಕಾಶ ಮಾಡಿಕೊಡುವಂತೆ ಜೆಡಿಎಸ್ ಪಕ್ಷದ ವರಿಷ್ಠರ ಗಮನ ಸೆಳೆಯಲು ಹತ್ತು ಸಾವಿರಕ್ಕೂ ಹೆಚ್ಚಿನ ಕಾರ್ಯಕರ್ತರ ನೇತೃತ್ವದಲ್ಲಿ ಸಭೆ ನಡೆಸಿ ಟಿಕೆಟ್ ಹಂಚಿಕೆಯನ್ನು ಮರುಪರಿಶೀಲನೆ ಮಾಡುವಂತೆ ಮನವಿ ಮಾಡಲಾಗುತ್ತಿದೆ ಎಂದು ದೇವರಾಜು ಪತ್ರಕರ್ತರಿಗೆ ತಿಳಿಸಿದರು..

ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರವು ಜೆಡಿಎಸ್ ಭದ್ರಕೋಟೆಯಾಗಿದ್ದು 2023 ರ ವಿಧಾನಸಭಾ ಚುನಾವಣೆಯು ನನ್ನ ರಾಜಕೀಯ ಜೀವನದ ಕೊನೆಯ ಚುನಾವಣೆಯಾಗಿರುವುದರಿಂದ ನನಗೆ ಒಂದು ಅವಕಾಶ ಮಾಡಿಕೊಡಿ ಎಂದು ವರಿಷ್ಠರಿಗೆ ಮನವಿ ಮಾಡಿ ಒತ್ತಾಯಿಸುತ್ತೇನೆ. ಪಕ್ಷದ ವಿರುದ್ಧ ಬಂಡಾಯ ಸಾರುವ ಸಣ್ಣವ್ಯಕ್ತಿ ನಾನಲ್ಲ..ನನ್ನ ರಾಜಕೀಯ ಜೀವನದ 40ವರ್ಷಗಳಲ್ಲಿ ನನಗೆ ಟಿಕೆಟ್ ಸಿಗಲಿ ಸಿಗದಿರಲಿ ಎಂದಿಗೂ ನಾನು ಪಕ್ಷದ್ರೋಹ ಮಾಡಿಲ್ಲ..ಜೆಡಿಎಸ್ ಪಕ್ಷದಿಂದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಮಗೊಂದು ಅವಕಾಶ ಮಾಡಿಕೊಡಬೇಕು ಎಂಬುದಷ್ಟೇ ನನ್ನ ಆಗ್ರಹವಾಗಿದೆ ಎಂದು ದೇವರಾಜು ಹೇಳಿದರು..

ಜನವರಿ 18ರ ಬುಧವಾರ ನಡೆಯಲಿರುವ ನಿಷ್ಠಾವಂತ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದ್ದು ಶಾಮಿಯಾನ, ಆಸನಗಳು, ವೇದಿಕೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಸಭೆಯಲ್ಲಿ ಭಾಗವಹಿಸುವ ಕಾರ್ಯಕರ್ತರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ..ಜೆಡಿಎಸ್ ಕಾರ್ಯಕರ್ತರು ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಪಕ್ಷದ ಸಂಘಟನೆಗೆ ಶಕ್ತಿತುಂಬಿ ಕಾರ್ಯಕರ್ತರ ನೋವು ನಲಿವುಗಳಿಗೆ ಶಕ್ತಿ ತುಂಬಬೇಕು ಎಂದು ಜೆಡಿಎಸ್ ಮುಖಂಡ ಬಸ್ ಕೃಷ್ಣೇಗೌಡ ಮನವಿ ಮಾಡಿದರು..

ನಾಳೆ ನಡೆಯಲಿರುವ ಜೆಡಿಎಸ್ ಕಾರ್ಯಕರ್ತರ ಸಭೆಯ ಸಿದ್ಧತೆಗಳನ್ನು ಜಿಲ್ಲಾ ಪಂಚಾಯತಿ ಮಾಜಿಸದಸ್ಯರಾದ ರಾಮದಾಸ್, ಮುಖಂಡರಾದ ಬಸ್ ಸಂತೋಷ್ ಕುಮಾರ್, ಅಂಬಿಗರಹಳ್ಳಿ ಶಿವರಾಂ, ಮಡುವಿನಕೋಡಿ ಕಾಂತರಾಜು, ಚೌಡಸಮುದ್ರ ಚಂದ್ರು ಸೇರಿದಂತೆ ಬಿ.ಎಲ್.ದೇವರಾಜು ಅವರ ನೂರಾರು ಅಭಿಮಾನಿಗಳು ಉಪಸ್ಥಿತರಿದ್ದರು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ, ಮಂಡ್ಯ

error: