
ಕೃಷ್ಣರಾಜಪೇಟೆ ತಾಲ್ಲೂಕು ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಕುರಿತು ಸಚಿವ ಡಾ.ನಾರಾಯಣಗೌಡರ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು ..
ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಡಬಲ್ ಎಂಜಿನ್ ಸರ್ಕಾರದ ಸಾಧನೆಯನ್ನು ಮುಂದಿಟ್ಟುಕೊoಡು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಢ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ ಸಚಿವ ನಾರಾಯಣಗೌಡ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತಾವು ಶಾಸಕರಾಗಿ ರಾಜ್ಯದ ಸಚಿವರಾಗಿ ತಾವು ಅನುಷ್ಠಾನಗೊಳಿಸಿರುವ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮುಂದಿಟ್ಟುಕೊAಡು ಮತಯಾಚನೆ ಮಾಡುವ ಮೂಲಕ ಮತ್ತೊಮ್ಮೆ ಕೃಷ್ಣರಾಜಪೇಟೆ ಕ್ಷೇತ್ರದಿಂದ ಗೆದ್ದು ಇತಿಹಾಸ ನಿರ್ಮಿಸುವುದಾಗಿ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
ನಾನು ಕಾಂಗ್ರೆಸ್ ಪಕ್ಷವನ್ನು ಸೇರಿ ಕಾಂಗ್ರೆಸ್ ನಿಂದ ಮುಂಬರುವ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗುತ್ತೇನೆ ಎಂಬ ವದಂತಿಯನ್ನು ಕಾಂಗ್ರೆಸ್ ಮುಖಂಡರೇ ಹಬ್ಬಿಸುತ್ತಿದ್ದಾರೆ. ನಾನು ಬಿಜೆಪಿ ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಪಕ್ಷ ಸೇರುವ ಪ್ರಶ್ನೆಯೇ ಇಲ್ಲ ನನ್ನ ಅಳಿವು ಉಳಿವು ಬಿಜೆಪಿ ಪಕ್ಷದಲ್ಲಿ ಮಾತ್ರ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವ ನಾರಾಯಣಗೌಡ ಅವರು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 1700 ಕೋಟಿ ರೂಗಳಿಗೂ ಹೆಚ್ಚು ಅನುದಾನವನ್ನು ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸುತ್ತಿದ್ದೇನೆ. ತಾಲ್ಲೂಕು ಜಿಲ್ಲೆಯಲ್ಲಿಯೇ ಮಾದರಿಯಾಗಿ ಅಭಿವೃದ್ಧಿಯಾಗುತ್ತಿದೆ. ಬಿಜೆಪಿ ಪಕ್ಷವು ನನ್ನನ್ನು ಗುರುತಿಸಿ ಮಂತ್ರಿಯನ್ನಾಗಿ ಮಾಡಿ ನನ್ನ ಜೀವನದಲ್ಲಿಯೇ ಮರೆಯಲಾಗದ ಕಾಣಿಕೆ ನೀಡಿದೆ. ನನಗೆ ತಾಯಿಯಂತಿರುವ ಬಿಜೆಪಿ ಪಕ್ಷಕ್ಕೆ ಪಕ್ಷದ್ರೋಹ ಮಾಡುವ ಬಗ್ಗೆ ಕನಸುಮನಸಿನಲ್ಲಿಯೂ ಆಲೋಚನೆ ಮಾಡಿಲ್ಲ. ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರಿಗೆ ತಕ್ಕಪಾಠ ಕಲಿಸುತ್ತೇನೆ. ಸ್ನೇಹ ವಿಶ್ವಾಸವೇ ಬೇರೆ ರಾಜಕಾರಣವೇ ಬೇರೆ ನಾನು ಹಿಂದೆ ಜೆಡಿಎಸ್ ಪಕ್ಷದಿಂದ ಶಾಸಕನಾಗಿದ್ದಾಗ ಮಾನ್ಯ ಸಿದ್ಧರಾಮಯ್ಯನವರು ಹಾಗೂ ಡಿ.ಕೆ.ಶಿವಕುಮಾರ್ ಅಭಿವೃದ್ಧಿ ವಿಚಾರದಲ್ಲಿ ಸಹಾಯ ಮಾಡಿದ್ದಾರೆ. ಅವರ ಸಹಾಯವನ್ನು ನಾನು ಸ್ಮರಿಸುತ್ತೇನೆ ಎಂದು ನಾರಾಯಣಗೌಡ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಉಧ್ಯಮಿ ಪೂನಾಶಂಕರ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ, ಪ್ರಧಾನ ಕಾರ್ಯದರ್ಶಿ ಚೋಕನಹಳ್ಳಿ ಪ್ರಕಾಶ್, ತಾಲ್ಲೂಕು ಪಂಚಾಯತಿ ಮಾಜಿಅಧ್ಯಕ್ಷ ಬಿ.ಜವರಾಯಿಗೌಡ, ಜಿಲ್ಲಾ ಮಾಧ್ಯಮ ವಕ್ತಾರ ಡಾ. ಕೆ.ಕಾಳೇಗೌಡ, ಬಿಜೆಪಿ ಮುಖಂಡರಾದ ದಯಾನಂದ, ಕೆ.ವಿನೋದ್, ಬಿಲ್ಲೇನಹಳ್ಳಿ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ, ಮಂಡ್ಯ
More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ