July 14, 2024

Bhavana Tv

Its Your Channel

ಚಿಕ್ಕೋಸಹಳ್ಳಿ ಶ್ರವಣಬೆಳಗೊಳ ಕೃಷ್ಣರಾಜಪೇಟೆ ಜೋಡಿ ರಸ್ತೆ ಕಾಮಗಾರಿಗೆ ಸಚಿವ ನಾರಾಯಣಗೌಡರಿಂದ ಭೂಮಿಪೂಜೆ

ಕೆ.ಆರ್.ಪೇಟೆ ತಾಲ್ಲೂಕಿನ ಚಿಕ್ಕೋಸಹಳ್ಳಿ ಶ್ರವಣಬೆಳಗೊಳ ಕೃಷ್ಣರಾಜಪೇಟೆ ಜೋಡಿ ರಸ್ತೆ ಕಾಮಗಾರಿಗೆ ಸಚಿವ ನಾರಾಯಣಗೌಡ ಭೂಮಿಪೂಜೆ ಮಾಡಿ ಚಾಲನೆ ನೀಡಿದರು..

ಚಿಕ್ಕೋಸಹಳ್ಳಿ ಗ್ರಾಮದ ಮುಖ್ಯರಸ್ತೆಯೊಂದನ್ನೇ ಎಂಟೂವರೆ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಜೋಡಿರಸ್ತೆಯನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ..
ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರಕ್ಕೆ 1700ಕೋಟಿ ರೂಪಾಯಿಗಳಿಗೂ ಹೆಚ್ಚಿನ ಅನುದಾನ ಬಂದಿದೆಯಾದರೂ ನನ್ನ ರಾಜಕೀಯ ವಿರೋಧಿಗಳು ಕೆ.ಆರ್.ಪೇಟೆ ಅಭಿವೃದ್ಧಿಗೆ ಸಚಿವರ ಕೊಡುಗೆ ಶೂನ್ಯ ಎಂದು ಬೊಬ್ಬೆ ಹಾಕುತ್ತಿದ್ದಾರೆ. ಟೀಕೆಗಳು ಸಾಯುತ್ತವೆ ಆದರೆ ನಾವು ಕೈಗೊಳ್ಳುವ ಅಭಿವೃದ್ಧಿ ಕೆಲಸ ಕಾರ್ಯಗಳು ಶಾಶ್ವತವಾಗಿ ಉಳಿಯುತ್ತವೆ..ಕೆ.ಆರ್.ಪೇಟೆ ಪಟ್ಟಣದ ಅಭಿವೃದ್ಧಿಗೆ 150 ಕೋಟಿ ರೂಗಳಿಗೂ ಹೆಚ್ಚಿನ ಅನುದಾನ ತಂದಿದ್ದೇನೆ. 28 ಕೋಟಿ ರೂ ವೆಚ್ಚದಲ್ಲಿ ತಾಯಿಮಗು ಆಸ್ಪತ್ರೆ ನಿರ್ಮಾಣವಾಗುತ್ತಿದೆ..ಈ ಕೆಲಸಗಳು ಅಭಿವೃದ್ಧಿ ಕೆಲಸಗಳಲ್ಲವೇ ಎಂದು ಪ್ರಶ್ನಿಸಿದ ಸಚಿವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ. ಕ್ಷೇತ್ರದ ಪ್ರಬುದ್ಧ ಮತದಾರರು ನನ್ನ ಕೈಹಿಡಿದು ಮತ್ತೊಮ್ಮೆ ಗೆಲುವು ತಂದುಕೊಡುತ್ತಾರೆ ಎಂಬ ವಿಶ್ವಾಸವಿದೆ..ನನ್ನ ವಿರುದ್ಧ ಸುಳ್ಳು ಸುದ್ದಿಗಳು ಹಾಗೂ ವದಂತಿಯನ್ನು ಹಬ್ಬಿಸುತ್ತಿದ್ದಾರೆ. ಕಾಲವೇ ಎಲ್ಲಕ್ಕೂ ಉತ್ತರ ನೀಡುತ್ತದೆ..ನಾನು ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು ಅಭಿವೃದ್ಧಿಯನ್ನು ಮೂಲಮಂತ್ರವನ್ನಾಗಿಸಿಕೊoಡು ಕೆಲಸಮಾಡುತ್ತಿದ್ದೇನೆ ಎಂದು ಹೇಳಿದರು..

ಅಗ್ರಹಾರಬಾಚಹಳ್ಳಿ ಗ್ರಾಮ ಪಂಚಾಯತಿ ಮಾಜಿಅಧ್ಯಕ್ಷ ರಮೇಶಗೌಡ, ಸಮಾನಸೇವಕ ಅನಿಲ್, ರಾಜಘಟ್ಟರೇವಣ್ಣ, ಪುರಸಭಾ ಸದಸ್ಯ ಕೆ.ಆರ್.ನೀಲಕಂಠ, ಸಚಿವರ ಆಪ್ತಸಹಾಯಕ ದಯಾನಂದ, ಲೋಕೋಪಯೋಗಿ ಇಲಾಖೆಯ ಎಇಇ ರಾಜಶೇಖರ್, ಸಹಾಯಕ ಎಂಜಿನಿಯರ್ ಶಿವಕುಮಾರ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು..

ವರದಿ. ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ, ಮಂಡ್ಯ

error: