May 2, 2024

Bhavana Tv

Its Your Channel

ಮಾ. 16 ಕ್ಕೆ ಜಗದ್ಗುರು ಡಾ.ಬಾಲಗಂಗಾಧರನಾಥ ಸ್ವಾಮೀಜಿ ಒಳಾಂಗಣ ಕ್ರೀಡಾಂಗಣ ಲೋಕಾರ್ಪಣೆ

ಕೃಷ್ಣರಾಜಪೇಟೆ :-15ಕೋಟಿ ರೂ ವೆಚ್ಚದಲ್ಲಿ ಕೆ.ಆರ್.ಪೇಟೆ ಪಟ್ಟಣದಲ್ಲಿ ನಿರ್ಮಿಸಿರುವ ಜಗದ್ಗುರು ಡಾ.ಬಾಲಗಂಗಾಧರನಾಥ ಸ್ವಾಮೀಜಿ ಒಳಾಂಗಣ ಕ್ರೀಡಾಂಗಣ ಮಾರ್ಚ 16 ರಂದು ಲೋಕಾರ್ಪಣೆ..ಕ್ರೀಡಾ ಸಚಿವ ಡಾ.ನಾರಾಯಣಗೌಡ ಪ್ರಕಟಣೆ ..

ಕೃಷ್ಣರಾಜಪೇಟೆ ತಾಲ್ಲೂಕಿನ ಯುವಜನರಿಗೆ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸಲು ಅನುಕೂಲವಾಗುವಂತೆ ರಾಜ್ಯದ ಯುವಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಡಾ.ನಾರಾಯಣಗೌಡ ಅವರ ವಿಶೇಷ ಕಾಳಜಿಯ ಫಲವಾಗಿ 15 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಹೈಟೆಕ್ ಒಳಾಂಗಣ ಕ್ರೀಡಾಂಗಣ ನಿರ್ಮಾಣವಾಗಿದ್ದು ಇದೇ ಮಾರ್ಚ್ 16 ರಂದು ಲೋಕಾರ್ಪಣೆಗೆ ಸಿದ್ಧತೆಗಳನ್ನು ನಡೆಸಲಾಗುತ್ತಿದೆ.

ನಡೆದಾಡುವ ದೇವರು, ಪದ್ಮಭೂಷಣ, ಯುಗಯೋಗಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರುಗಳಾದ ಭೈರವೈಕ್ಯ ಡಾ. ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಒಳಾಂಗಣ ಕ್ರೀಡಾಂಗಣ ಎಂದು ನಾಮಕರಣ ಮಾಡಲಾಗಿದೆ.

ರಾಜ್ಯದ ಉನ್ನತಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಹಾಗೂ ಕ್ಷೇತ್ರದ ಶಾಸಕರು ರಾಜ್ಯದ ಯುವಸಬಲೀಕರಣ ಕ್ರೀಡೆ ಹಾಗೂ ರೇಷ್ಮೆ ಸಚಿವರಾದ ಡಾ.ನಾರಾಯಣಗೌಡರ ಸಮಕ್ಷಮದಲ್ಲಿ ಆದಿಚುಂಚನಗಿರಿ ಪೀಠದ ಜಗದ್ಗುರು ಡಾ.ನಿರ್ಮಲಾನಂದನಾಥ ಸ್ವಾಮೀಜಿಗಳು ನೂತನವಾಗಿ ನಿರ್ಮಾಣವಾಗಿರುವ ಒಳಾಂಗಣ ಕ್ರೀಡಾಂಗಣವನ್ನು ಲೋಕಾರ್ಪಣೆ ಮಾಡಲಿರುವ ಹಿನ್ನೆಲೆಯಲ್ಲಿ ಅಂತಿಮ ಹಂತದ ಸಿದ್ಧತಾ ಕೆಲಸಗಳನ್ನು ಸಚಿವ ನಾರಾಯಣಗೌಡ ವೀಕ್ಷಿಸಿದರು.

ಮಾರ್ಚಿ 16ರಂದು ಒಳಾಂಗಣ ಕ್ರೀಡಾಂಗಣವು ಲೋಕಾರ್ಪಣೆಗೊಂಡ ನಂತರ ಸಾರ್ವಜನಿಕ ಸಭೆಯು ಕ್ರೀಡಾಂಗಣದ ಆವರಣದಲ್ಲಿ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ಹಾಗೂ ಯುವಜನರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಸಚಿವ ನಾರಾಯಣಗೌಡ ಮನವಿ ಮಾಡಿದರು.. ಒಳಾಂಗಣ ಕ್ರೀಡಾಂಗಣದಲ್ಲಿ ಯುವಜನರು ಹಾಗೂ ಮಕ್ಕಳಿಗೆ ಸುಸಜ್ಜಿತವಾದ ಈಜುಕೊಳಗಳು, ಶಟಲ್ ಬ್ಯಾಡ್ಮಿಂಟನ್ ಕೋರ್ಟ್, ಸ್ನೂಕರ್, ಬಿಲಿಯರ್ಡ್ಸ್, ವಾಲಿಬಾಲ್ ಕೋರ್ಟ್ ಗಳು, ಸುಸಜ್ಜಿತವಾದ ಜಿಮ್, ಧ್ಯಾನಕೇಂದ್ರ, ಗ್ರಂಥಾಲಯ, ಸ್ನಾನಗೃಹಗಳು ಸೇರಿದಂತೆ ಕ್ರೀಡಾ ಚಟುವಟಿಕೆಗಳಿಗೆ ಬೇಕಾದ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಲಾಗಿದೆ ಎಂದು ಸಚಿವರ ಆಪ್ತಕಾರ್ಯದರ್ಶಿ ಪ್ರಭಾಕರ್ ಮಾಹಿತಿ ನೀಡಿದರು..

ಈ ಸಂದರ್ಭದಲ್ಲಿ ಸಚಿವರ ಆಪ್ತಕಾರ್ಯದರ್ಶಿ ಪ್ರಭಾಕರ್, ಮಂಡ್ಯದ ನಿರ್ಮಿತಿ ಕೇಂದ್ರದ ಕಾರ್ಯಪಾಲಕ ಎಂಜಿನಿಯರ್ ನರೇಶ್, ಮೂಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಜಿಪಂ ಮಾಜಿಉಪಾಧ್ಯಕ್ಷ ಶೀಳನೆರೆ ಅಂಬರೀಶ್, ತಹಶೀಲ್ದಾರ್ ನಿಸರ್ಗಪ್ರಿಯ, ಪುರಸಭೆಯ ಮುಖ್ಯಾಧಿಕಾರಿ ಬಸವರಾಜು, ಮುಖಂಡರಾದ ಕಟ್ಟೆಕ್ಯಾತನಹಳ್ಳಿ ಪಾಪಣ್ಣ, ಬಿ.ಜವರಾಯಿಗೌಡ, ಚಂದ್ರಮೋಹನ್, ಸಚಿವರ ಆಪ್ತಸಹಾಯಕ ದಯಾನಂದ ಮತ್ತಿತರರು ಉಪಸ್ಥಿತರಿದ್ದರು..

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ, ಮಂಡ್ಯ

error: