
ಕೆ.ಆರ್. ಪೇಟೆ : ಶ್ರಾವಣ ಮಾಸದ ಕೊನೆಯ ಶ್ರಾವಣ ಶನಿವಾರದ ಅಂಗವಾಗಿ ಕೃಷ್ಣರಾಜಪೇಟೆ ಪಟ್ಟಣದ ಕೆರೆ ಬೀದಿಯಲ್ಲಿರುವ ಕಾರ್ಯಸಿದ್ಧಿ ಆಂಜನೇಯ ಸ್ವಾಮಿಯವರಿಗೆ ವಿಶೇಷ ಪೂಜಾ ಪುರಸ್ಕಾರಗಳು ಶ್ರದ್ಧಾ ಭಕ್ತಿಯಿಂದ ನಡೆದವು ..
ವಾಯುಪುತ್ರ ಶ್ರೀಆಂಜನೇಯ ಸ್ವಾಮಿಯವರ ಶಿಲಾಮೂರ್ತಿಗೆ ವಿಶೇಷ ಅಭಿಷೇಕ, ಪುಷ್ಪಭಿಷೇಕ ಹಾಗೂ ಹೋಮ ಹವನಗಳು ನೂರಾರು ಭಕ್ತರ ಸಮಕ್ಷಮದಲ್ಲಿ ನಡೆದವು.. ಸಾಂಸ್ಕೃತಿಕ ಸಂಘಟಕ ವೇದಬ್ರಹ್ಮ ಶ್ರೀ ಗೋಪಾಲಕೃಷ್ಣ ಅವಧಾನಿಗಳು ಪೂಜಾ ವಿಧಿ ವಿಧಾನಗಳ ನೇತೃತ್ವ ವಹಿಸಿದ್ದರು..
ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಹಾಗೂ ಕೆ ಆರ್ ಪೇಟೆ ಪಟ್ಟಣದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕೋಮ ಹವನಗಳು ಹಾಗೂ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು..
ವರದಿ: ಡಾ.ಕೆ.ಆರ್.ನೀಲಕಂಠ ಕೃಷ್ಣರಾಜಪೇಟೆ, ಮಂಡ್ಯ.
More Stories
ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..
ಇಂಧನ ದಕ್ಷ ಪಂಪ್ ಉಪಕರಣಗಳ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ
ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ