April 27, 2024

Bhavana Tv

Its Your Channel

ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ

ಕೆ.ಆರ್. ಪೇಟೆ ; ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಚುನಾವಣಾಧಿಕಾರಿ ಚಂದ್ರಯ್ಯ ಮನವಿ ಮಾಡಿದರು .

ಅವರು ಕೃಷ್ಣರಾಜಪೇಟೆ ಪಟ್ಟಣದ ತಾಲೂಕು ಆಡಳಿತ ಕಾರ್ಯಸೌಧದ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು, ತಿದ್ದುಪಡಿಗೆ ಮನವಿ ಸಲ್ಲಿಸಲು ಈ ತಿಂಗಳ 25ರ ವರೆಗೆ ಅವಕಾಶ ನೀಡಲಾಗಿದೆ. ಆದ್ದರಿಂದ ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು ತಮ್ಮ ಬೂತ್ ಮಟ್ಟದ ಅಧಿಕಾರಿಗಳಿಗೆ ಮನವಿ ಸಲ್ಲಿಸಬೇಕು ಎಂದು ತಿಳಿಸಿದ ಚುನಾವಣಾಧಿಕಾರಿ ಚಂದ್ರಯ್ಯ ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಎಚ್ಚರ ವಹಿಸಲಾಗಿದೆ. ಚುನಾವಣಾ ಅಕ್ರಮಗಳು ನಡೆಯುತ್ತಿರುವುದು ಕಂಡುಬAದರೆ ಸಾರ್ವಜನಿಕರು ಚುನಾವಣಾ ಶಾಖೆ ಅಥವಾ ತಾಲೂಕು ಕಚೇರಿಗೆ ಇಲ್ಲವೇ ಪೊಲೀಸರಿಗೆ ಮಾಹಿತಿ ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಡಾ. ಲೋಕೇಶ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಅಧಿಕಾರಿಗಳು ಉಸ್ಥಿತರಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ . ಕೃಷ್ಣರಾಜಪೇಟೆ, ಮಂಡ್ಯ .

error: