May 17, 2024

Bhavana Tv

Its Your Channel

ತಮಟೆಯ ಸದ್ದಿಗೆ ಲಯಬದ್ದವಾಗಿ ಹೆಜ್ಜೆ ಹಾಕಿ ರಂಗ ಕುಣಿದು ಸಂಭ್ರಮಿಸಿದ ಗ್ರಾಮಸ್ಥರು..

ಕೆ.ಆರ್.ಪೇಟೆ ತಾಲ್ಲೂಕಿನ ಕೈಗೋನಹಳ್ಳಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿ ರಂಗದ ಹಬ್ಬದ ಸಂಭ್ರಮ ..
ಹಬ್ಬ, ಜಾತ್ರೆ ಉತ್ಸವಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿವೆ. ಹಬ್ಬದ ಸಂಭ್ರಮದಲ್ಲಿ ಎಲ್ಲರೂ ಒಂದಾಗಿ ಜಾತಿ ಮತ ಪಂಥಗಳಿಲ್ಲದೆ ಸಡಗರ ಸಂಭ್ರಮದಿAದ ಭಾಗವಹಿಸಿದಾಗ ಸಹೋದರತ್ವ ಹಾಗೂ ಸಹಬಾಳ್ವೆಯು ವೃದ್ಧಿಯಾಗುತ್ತದೆ. ಆದ್ದರಿಂದ ಒಡೆದ ಮನಸ್ಸುಗಳನ್ನು ಒಗ್ಗೂಡಿಸುವ ಹಬ್ಬ ಹರಿದಿನಗಳು ನಮ್ಮ ಸಂಸ್ಕೃತಿ ಪರಂಪರೆಯ ಮೇಲೆ ಬೆಳಕು ಚೆಲ್ಲುವ ನೈಜ ಘಟನೆಗಳಾಗಿವೆ ಎಂದು ಗ್ರಾಮದ ಹಿರಿಯ ಮುಖಂಡ ಮಂಜಪ್ಪ ಅಭಿಮಾನದಿಂದ ಹೇಳಿದರು.

ಶ್ರೀ ವೀರಭದ್ರೇಶ್ವರ ಸ್ವಾಮಿ ರಂಗದ ಹಬ್ಬದ ಸಂಭ್ರಮದಲ್ಲಿ ರಾಜ್ಯದ ಮಾಜಿ ಸಚಿವ ಡಾ. ನಾರಾಯಣಗೌಡ, ಮನಮುಲ್ ನಿರ್ದೇಶಕ ಡಾಲು ರವಿ, ಮುಖಂಡರಾದ ಕುಮಾರ್, ಪಟೇಲ್ ಮಂಜಪ್ಪ, ಹರೀಶ್ ಸೇರಿದಂತೆ ಸಾವಿರಾರು ಗ್ರಾಮಸ್ಥರು ಉಪಸ್ಥಿತರಿದ್ದರು. ರಂಗದ ಹಬ್ಬದ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಹತ್ತು ಸಾವಿರಕ್ಕೂ ಹೆಚ್ಚಿನ ಭಕ್ತರು ಭಾಗವಹಿಸಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ , ಕೃಷ್ಣರಾಜಪೇಟೆ, ಮಂಡ್ಯ .

error: