December 22, 2024

Bhavana Tv

Its Your Channel

ಕೋವಿಡ್- ೧೯ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಡಾ ಕೆ ಅನ್ನದಾನಿ

ಮಳವಳ್ಳಿ : ಮಳವಳ್ಳಿ ಪಟ್ಟಣದ ಸರ್ಕಾರಿ ಆಯುರ್ವೇದಿಕ್ ಆಸ್ಪತ್ರೆ ಆವರಣದಲ್ಲಿ ಕೋವಿಡ್- ೧೯ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಡಾ ಕೆ ಅನ್ನದಾನಿ ನಂತರ ಮಾತನಾಡಿದ ಅವರು ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ಸಾವಿರಾರು ಜನರನ್ನು ಕಳೆದುಕೊಂಡಿದ್ದು ಅತ್ಯಂತ ನೋವಿನ ಸಂಗತಿ. ಈ ಮಾರಕ ಸೋಂಕಿನಿoದ ಮನುಕುಲವನ್ನು ರಕ್ಷಣೆ ಮಾಡಬೇಕಾದ ಜವಾಬ್ದಾರಿ ನಮ್ಮಂತ ಜನಪ್ರತಿನಿಧಿಗಳ ಕರ್ತವ್ಯವಾಗಿದ್ದು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇಂದಿನಿoದ ಲಸಿಕೆ ಅಭಿಯಾನ ವನ್ನು ಆರಂಭಿಸಿರುವುದು ಸಂತೋಷಕರ ಸಂಗತಿಯಾಗಿದೆ ಎಂದು ತಿಳಿಸಿದರು.
ಇಂದಿನಿoದ ತಾಲೂಕಿನ ೬೨ ಸೆಂಟರ್ ಗಳಲ್ಲಿ ಲಸಿಕೆ ಅಭಿಯಾ£ ವನ್ನು ಆರಂಭಿಸಲಾಗಿದ್ದು ೧೮ ವರ್ಷ ಮೇಲ್ಪಟ್ಟವರೆಲ್ಲರಿಗೂ ಲಸಿಕೆ ನೀಡಲಾಗುತ್ತಿದ್ದು ಸಾರ್ವಜನಿಕರು ಯಾವುದೇ ಗೊಂದಲ ಆತಂಕಕ್ಕೆ ಅವಕಾಶ ನೀಡದೆ ಪ್ರತಿಯೊಬ್ಬರು ಲಸಿಕೆ ಪಡೆಯುವ ಮೂಲಕ ಕರೋನವನ್ನು ಸಂಪೂರ್ಣವಾಗಿ ತಡೆಗಟ್ಟಲು ಸಹಕರಿಸಬೇಕೆಂದು ಕೋರಿದರು.


ಈ ಸಂದರ್ಭದಲ್ಲಿ ಪುರಸಭಾಧ್ಯಕ್ಷೆ ರಾಧ ನಾಗರಾಜು, ಉಪಾಧ್ಯಕ್ಷ ಟಿ. ನಂದಕುಮಾರ್, ತಹಸೀಲ್ದಾರ್ ವಿಜಯಣ್ಣ, ತಾಲ್ಲೂಕು ವೈದ್ಯಾಧಿಕಾರಿ, ಡಾ. ವೀರಭದ್ರಪ್ಪ, ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ, ಮಹಾದೇವಪ್ಪ, ಪುರಸಭೆ ಮುಖ್ಯಾಧಿಕಾರಿ ಚಂದ್ರಶೇಖರ್, ಸೇರಿದಂತೆ ಹಲವಾರು ಪುರಸಭಾ ಸದಸ್ಯರು ಕಾರ್ಯಕ್ರಮ ದಲ್ಲಿ ಪಾಲ್ಗೊಂಡಿದ್ದರು.

error: