ಮಳವಳ್ಳಿ : ದೆಹಲಿಯಲ್ಲಿ ನಡೆಯುತ್ತಿರುವ ರೈತರ ಐತಿಹಾಸಿಕ ಹೋರಾಟಕ್ಕೆ ೨೦೦ ದಿನಗಳು ತುಂಬಿದ ಹಿನ್ನೆಲೆಯಲ್ಲಿ ಕೃಷಿ ಕೂಲಿಕಾರರ ಸಂಘದ ಕೂಲಿಕಾರರು ರೈತರ ಹೋರಾಟವನ್ನು ಬೆಂಬಲಿಸಿ ಪ್ರತಿಭಟನೆ ನಡೆಸಿದರು.
ತಾಲೂಕಿನ ಬಂಡೂರು ಗ್ರಾ ಪಂ ವ್ಯಾಪ್ತಿಯ ಗಟ್ಟಿಕೊಪ್ಪಲು ಗ್ರಾಮದ ಬಳಿ ನಡೆಯುತ್ತಿರುವ ನರೇಗ ಯೋಜನೆ ಕಾಮಗಾರಿ ಸ್ಥಳದಲ್ಲೇ ಪ್ರತಿಭಟನೆ ನಡೆಸಿದ ನೂರಾರು ಮಂದಿ ಕೂಲಿಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಪುಟ್ಟಮಾದು ಅವರು ದೇಶದ ನ್ಯಾಯಾಲಯ, ಸಿಬಿಐ, ಐಟಿ, ಚುನಾವಣಾ ಅಯೋಗ ಸೇರಿದಂತೆ ಎಲ್ಲಾ ಸ್ವಾಯತ್ತ ಸಂಸ್ಥೆಗಳನ್ನು ತನ್ನ ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿಯ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಆತಂಕ ವ್ಯಕ್ತಪಡಿಸಿ ದರು. ಲಾಕ್ ಡೌನ್ ನಿಂದ ದೇಶದ ಎಲ್ಲಾ ಕಾರ್ಮಿಕರು, ಬಡವರು ರೈತರು ಜನಸಾಮಾನ್ಯರು ತತ್ತರಿಸುತ್ತಿರುವಾಗಲೇ ಪೆಟ್ರೋಲ್ ಡೀಸೆಲ್ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆಯನ್ನು ಗಗನಕ್ಕೆ ಏರಿಸುವ ಮೂಲಕ ಜನಸಾಮಾನ್ಯರ ಬದುಕನ್ನು ಸರ್ವನಾಶ ಮಾಡಿ ಬಂಡವಾಳ ಶಾಹಿಗಳ ಪರವಾದ ಆಡಳಿತ ನಡೆಸುತ್ತಿರುವ ಮೋದಿ ಅವರು ತಮ್ಮ ನೀತಿಯನ್ನು ಬದಲಾಯಿಸಿಕೊಂಡು ಜನಪರವಾದ ಆಡಳಿತ ನೀಡಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಂಘದ ತಾಲ್ಲೂಕು ಅಧ್ಯಕ್ಷ ಶಿವಮಲ್ಲಯ್ಯ ಮಾತನಾಡಿ ಬಡವರು ಕೂಲಿಕಾರರ ಜನಸಾಮಾನ್ಯರ ವಿರೋಧಿಯಾದ ಆಡಳಿತ ನಡೆಸುತ್ತಿರುವ ಮೋದಿ ಸರ್ಕಾರ ವನ್ನು ಕಿತ್ತೊಗೆಯಲು ಎಲ್ಲಾ ಶ್ರಮಿಕ ವರ್ಗ ಒಂದಾಗ ಬೇಕೆಂದು ಕರೆ ನೀಡಿದರು
ಈ ಸಂದರ್ಭದಲ್ಲಿ ಮುಖಂಡರಾದ ಹನುಮೇಗೌಡ. ರಾಮಣ್ಣ, ಬಸವರಾಜು, ಚಿಕ್ಕತಾಯಮ್ಮ, ಚುಂಚಯ್ಯ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ