ಮಳವಳ್ಳಿ : ದಲಿತರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಮಳವಳ್ಳಿ ಪಟ್ಟಣದಲ್ಲಿ ಇಂದು ದಲಿತರ ಹಕ್ಕುಗಳ ಹೋರಾಟ ಸಮಿತಿ ಮುಖಂಡರು ಪ್ರತಿಭಟನೆ ನಡೆಸಿದರು. ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಮುಖಂಡರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಜಿ ಪಂ ಸದಸ್ಯರಾದ ಎಂ ಎನ್ ಜಯರಾಜು, ಮಾಜಿ ಪುರಸಭಾಧ್ಯಕ್ಷ ದೊಡ್ಡಯ್ಯ, ಅಂಬೇಡ್ಕರ್ ಕ್ರಾಂತಿ ದಳದ ಡಾ ಎಂ ಅರ್ ಪ್ರಸಾದ್, ಸಂಘಟನೆಯ ತಾಲ್ಲೂಕು ಸಂಚಾಲಕ ಎಂ ಡಿ ಶಂಕರ್ ಅವರುಗಳು ಸ್ವಾತಂತ್ರ‍್ಯ ಬಂದು ೭೪ ವರ್ಷ ಕಳೆದರೂ ದಲಿತರ ಮೇಲಿನ ದೌರ್ಜನ್ಯ ಅತ್ಯಾಚಾರ ಹೆಚ್ಚಾಗುತ್ತಲೇ ಇರುವುದು ದುರಂತ ಎಂದು ವಿಷಾಧಿಸಿದರಲ್ಲದೆ ಅದರಲ್ಲೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದಲಿತರ ಮೇಲಿನ ಅತ್ಯಾಚಾರ, ದೌರ್ಜನ್ಯ ಮಿತಿಮೀರಿ ಹೋಗಿರುವುದು ಸರ್ಕಾರದ ವೈಫಲ್ಯವೇ ಕಾರಣವೆಂದು ಖಂಡಿಸಿದರು.
ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ದೌರ್ಜನ್ಯದ ತಡೆಗಟ್ಟಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು, ದೌರ್ಜನ್ಯಕ್ಕೊಳಗಾದ ಕುಟುಂಬಕ್ಕೆ ೫ ಲಕ್ಷ ರೂ ಪರಿಹಾರ ನೀಡಬೇಕು, ದೌರ್ಜನ್ಯ ವಿರೋಧಿ ಸಮಿತಿಗಳ ಸಭೆಯನ್ನು ಜಿಲ್ಲಾ ಮಟ್ಟದಲ್ಲಿ ನಡೆಸಿ ದೌರ್ಜನ್ಯ ತಡೆಗೆ ಜಿಲ್ಲಾಡಳಿತಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಮುಖಂಡರು ಈ ಕುರಿತ ಮನವಿ ಪತ್ರವನ್ನು ತಹಸೀಲ್ದಾರ್ ವಿಜಯಣ್ಣ ಅವರ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಡಿ ಎಸ್ ಎಸ್ ತಾಲ್ಲೂಕು ಸಂಚಾಲಕ ಯತೀಶ್ ದ್ಯಾವಪಟ್ಟಣ, ಎಂ ಜಯಲಕ್ಷ್ಮಮ್ಮ, ಸಿದ್ದರಾಜು ಮತ್ತಿತರರು ಪಾಲ್ಗೊಂಡಿದ್ದರು.
ವರದಿ ಚಂದ್ರಮೌಳಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ