December 22, 2024

Bhavana Tv

Its Your Channel

ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ

ಮಳವಳ್ಳಿ : ಮಳವಳ್ಳಿ ಪಟ್ಟಣದ ಭಗವಾನ್ ಬುದ್ದ ಕಾಲೇಜು ಆವರಣದಲ್ಲಿ ಬಿ ಇಡಿ ಹಾಗೂ ಪದವಿ ತರಗತಿಯ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮ ಇಂದು ಜರುಗಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಡಿವೈಎಸ್ಪಿ ಲಕ್ಷ್ಮಿ ನಾರಾಯಣ ಪ್ರಸಾದ್ ಅವರು ಕಾಲೇಜಿನ ಪ್ರತಿಯೊಬ್ಬ ವಿದ್ಯಾರ್ಥಿಯೂ ತಪ್ಪದೇ ಕೋವಿಡ್ ಲಸಿಕೆ ಪಡೆದು ತಮ್ಮ ಆರೋಗ್ಯ ರಕ್ಷಣೆ ಮಾಡಿಕೊಳ್ಳುವುದರ ಜೊತೆಗೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕೆಂದು ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ತಾಲ್ಲೂಕು ಅರೋಗ್ಯಾಧಿಕಾರಿ ಡಾ. ವೀರಭದ್ರಪ್ಪ ಅವರು ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಸಂದರ್ಭದಲ್ಲಿ ಲಸಿಕೆ ಇಲ್ಲದ ಕಾರಣ ಅಪಾರ ಪ್ರಮಾಣದ ಸಾವುನೋವು ಉಂಟಾಯಿತು ಎಂದು ವಿಷಾಧಿಸಿದರು.
ಆದರೆ ಇದೀಗ ದೇಶಾದ್ಯಂತ ಲಸಿಕೆ ಅಭಿಯಾನ ನಡೆಯುತ್ತಿದ್ದು ಪ್ರಾರಂಭದಲ್ಲಿ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದ ಜನ ಈಗ ತಾವಾಗಿಯೇ ಕಾದುನಿಂತು ಲಸಿಕೆ ಪಡೆಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು ಪ್ರತಿಯೊಬ್ಬರಿಗೂ ಹಂತ ಹಂತವಾಗಿ ಲಸಿಕೆ ನೀಡುತ್ತಿದ್ದು ಎಲ್ಲರೂ ಲಸಿಕೆ ಪಡೆಯುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ಭಗವಾನ್ ಬುದ್ದ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಯಮದೂರು ಸಿದ್ದರಾಜು ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮ ದಲ್ಲಿ ನೋಡೆಲ್ ಅಧಿಕಾರಿ ಡಾ ನವೀನ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ವರದಿ ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

error: