ಮಳವಳ್ಳಿ : ಮಳವಳ್ಳಿ ತಾಲ್ಲೂಕಿನ ಹಿಟ್ಟಿನಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ೫ ಕೋಟಿ ರೂ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಶಾಸಕ ಡಾ. ಕೆ ಅನ್ನದಾನಿ ಪ್ರಕಟಿಸಿದ್ದಾರೆ.
ಅವರು ಹಿಟ್ಟಿನಹಳ್ಳಿ ಗ್ರಾಮದಲ್ಲಿ ಸುಮಾರು ೫೦ ಲಕ್ಷ ರೂ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣದ ಜೊತೆಗೆ ಗ್ರಾಮದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿ ಗೆ ಚಾಲನೆ ನೀಡಿ ಮಾತನಾಡುತ್ತ
ಹಿಟ್ಟಿನಹಳ್ಳಿ ಗ್ರಾಮ ಈ ಹಿಂದೆ ಜನತಾ ಪಕ್ಷವಿದ್ದ ಕಾಲದಿಂದಲೂ ನಮ್ಮ ಪಕ್ಷಕ್ಕೆ ಹೆಚ್ಚಿನ ಬೆಂಬಲ ನೀಡುತ್ತಲೇ ಬಂದಿದ್ದು ಪ್ರಸ್ತುತ ಜೆಡಿಎಸ್‌ನ ಭದ್ರ ಕೋಟೆಯಾಗಿರುವ ಈ ಗ್ರಾಮ ಪ್ರತೀ ಚುನಾವಣೆಯಲ್ಲಿ ಸಹ ನನಗೆ ಅತಿ ಹೆಚ್ಚಿನ ಬಹುಮತ ನೀಡುತ್ತಿರುವುದು ಹೆಮ್ಮೆಯ ವಿಚಾರವಾಗಿದ್ದು ಈ ಕಾರಣ ದಿಂದ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು ಸದ್ಯದಲ್ಲಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ೫ ಕೋಟಿ ವೆಚ್ಚದಲ್ಲಿ ಹೈಟೆಕ್ ಆಸ್ಪತ್ರೆ ಯನ್ನಾಗಿ ಮೇಲ್ದರ್ಜೆಗೆ ಏರಿಸಿ ಈ ಆಸ್ಪತ್ರೆಯಲ್ಲಿ ಎಲ್ಲಾ ತಜ್ಞ ವೈದ್ಯರ ಸೇವೆ, ಲ್ಯಾಬ್ ಮುಂತಾದ ಇನ್ನಿತರ ಸೌಕರ್ಯಗಳು ದೊರಕುವ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿ ಪಂ ಸದಸ್ಯರಾದ ಹನುಮಂತು, ಮಾಜಿ ತಾ ಪಂ ಸದಸ್ಯ ಹೆಚ್ ಪುಟ್ಟಸ್ವಾಮಿ, ನಟರಾಜು, ಬಾಲು, ಪರ್ವತಯ್ಯ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ