September 27, 2021

Bhavana Tv

Its Your Channel

ಮಳವಳ್ಳಿ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಜಿ ಮಾದೇಗೌಡರಿಗೆ ಶ್ರದ್ಧಾಂಜಲಿ

ಳವಳ್ಳಿ : ಮಳವಳ್ಳಿ ಪಟ್ಟಣದ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಇಂದು ಇತ್ತೀಚಿಗೆ ಅಗಲಿದ ಜಿಲ್ಲಾ ಕಾವೇರಿ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷರು ಮಂಡ್ಯ ಜಿಲ್ಲೆಯ ಅಗ್ರಗಣ್ಯ ನಾಯಕರೂ ಆದ ಕಾವೇರಿ ವರಪುತ್ರ ಜಿ ಮಾದೇಗೌಡರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಮಾಜಿ ಸಚಿವ ಪಿ ಎಂ ನರೇಂದ್ರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಹಲವಾರು ಕಾಂಗ್ರೇಸ್ ಮುಖಂಡರು ಪಾಲ್ಗೊಂಡು ಮಾದೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಜೊತೆಗೆ ಮೌನಾಚರಣೆ ಮೂಲಕ ಅಗಲಿದ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಪಿ ಎಂ ನರೇಂದ್ರಸ್ವಾಮಿ ಅವರು ಈ ಹಿಂದೆ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಚಿಹ್ನೆಯಿಂದ ವಂಚಿತನಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸಂದರ್ಭದಲ್ಲಿ ಮಾದೇಗೌಡರು ನೀಡಿದ ನೈತಿಕ ಬೆಂಬಲವನ್ನು ನೆನೆದು ಗದ್ಗದಿತರಾಗಿ ಕಣ್ಣೀರು ಹಾಕಿದರು.
ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಸಿಂಹ ಗರ್ಜನೆಯಾಗುತ್ತಿದ್ದ ಜಿ. ಮಾದೇಗೌಡರಂತಹ ಧೀಮಂತ ನಾಯಕ ಮತ್ತೆ ಸಿಗುವುದು ಕಷ್ಟ ಸಾಧ್ಯ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಸಿ ಡಿ ಗಂಗಾಧರ್, ಮೈಷುಗರ್ ಕಾರ್ಖಾನೆಯ ಮಾಜಿ ಅಧ್ಯಕ್ಷ ಸಿದ್ದರಾಮು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೇವರಾಜು, ಸುಂದರ್ ರಾಜು, ಮಾಜಿ ತಾ ಪಂ ಅಧ್ಯಕ್ಷರಾದ ಪುಟ್ಟಸ್ವಾಮಿ, ನಾಗೇಶ್, ಆರ್ ಎನ್ ವಿಶ್ವಾಸ್, ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು.

ವರದಿ: ಮಲ್ಲಿಕಾರ್ಜುನ ಮಳವಳ್ಳಿ

error: